Chincholi: ತಾಲೂಕಿನೆಲ್ಲೆಡೆ ಗಾಳಿ-ಮಳೆ; ಗ್ರಾಮಸ್ಥರಲ್ಲಿ ‌ಪ್ರವಾಹ ಭೀತಿ

Team Udayavani, Jul 25, 2023, 3:05 PM IST

12-chincholi

ಚಿಂಚೋಳಿ: ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನದಿಂದ‌‌ ರಾತ್ರಿಯಿಡೀ ಸುರಿದ ಧಾರಾಕಾರವಾಗಿ ಮಳೆಯಿಂದಾಗಿ ಅನೇಕ ಗ್ರಾಮಗಳಲ್ಲಿ‌ ನದಿ ‌ನೀರಿನ ಪ್ರವಾಹ ಉಂಟಾಗಿ ಅನೇಕ ಮನೆಗೆ ನೀರು ನುಗ್ಗಿ ‌ಹಾನಿಯನ್ನುಂಟ ಮಾಡಿದೆ.

ತಾಲೂಕಿನ ದೇಗಲಮಡಿ, ಗರಗಪಳ್ಳಿ, ಚಿಂಚೋಳಿ ಪಟ್ಟಣದ ಹರಿಜನವಾಡ, ಛೋಟಿದರ್ಗಾ, ಬಡಿದರ್ಗಾ‌ ಬಡಾವಣೆಯ ಅನೇಕ ಮನೆಗಳಲ್ಲಿ ಮುಲ್ಲಾಮಾರಿ‌ ನದಿಯ ಪ್ರವಾಹ ನೀರು ನುಗ್ಗಿದೆ.

ಚಿಂಚೋಳಿ ಪಟ್ಟಣದಲ್ಲಿ ಹರಿಜನವಾಡ, ಚೋಟಿದರ್ಗಾ, ಬಡಿದರ್ಗಾ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಮನೆಗೆ ನೀರು ನುಗ್ಗಿದ್ದರಿಂದ ಭಯಭೀತರಾದ‌‌ ಜನರು ಚಿಕ್ಕ ಮಕ್ಕಳನ್ನು ಬಗಲಿನಲ್ಲಿ ಎತ್ತಿಕೊಂಡು ಹೊರಗಡೆ ಓಡಿ ಬಂದಿದ್ದಾರೆ ಎಂದು ‌ನಿವಾಸಿ ಕೆ.ಎಂ.ಬಾರಿ ತಿಳಿಸಿದ್ದಾರೆ.

ದೇಗಲಮಡಿ ಗ್ರಾಮದಲ್ಲಿಯೂ‌ ನದಿಯ ನೀರು ಊರಿನೊಳಗೆ ಹೊಕ್ಕಿದ್ದರಿಂದ‌ ಜನರು ಮನೆಯ ಸಾಮಾಗ್ರಿಳ ಸಮೇತ ಹೊರಗೆ ಬಂದಿದ್ದಾರೆ ಎಂದು ದೇಗಲಮಡಿ ಗ್ರಾಮದ ಅವಿನಾಶ್ ಗೋಸುಲ ತಿಳಿಸಿದ್ದಾರೆ.

ದೇಗಲಮಡಿ ಗ್ರಾಮದ ಸಿದ್ದೇಶ್ವರ ‌ಕಾಲೋನಿ‌ಯಲ್ಲಿ‌ ‌ ಹತ್ತಾರು‌ ಮನೆಗಳಿಗೆ ನೀರು ‌ನುಗ್ಗಿ‌ ದವಸ ಧಾನ್ಯಗಳು ಬಟ್ಟೆಗಳು ದಿನಸಿ ಸಾಮಗ್ರಿಗಳು ಹಾನಿಯಾಗಿದೆ ಎಂದು ಮಸ್ತಾನ ಕೋಡ್ಲಿ ತಿಳಿಸಿದ್ದಾರೆ.

ತಾಲೂಕಿನ ಕೆರೋಳಿ, ಬೆನಕನಹಳ್ಳಿ, ಶಿರೋಳಿ, ಕೊರಡಂಪಳ್ಳಿ, ಗರಗಪಳ್ಳಿ, ಇರಗಪಳ್ಳಿ, ಅಣವಾರ, ಪೊಲಕಪಳ್ಳಿ ಗ್ರಾಮಗಳಲ್ಲಿ ನದಿಯ ನೀರು ನುಗ್ಗಿದ್ದರಿಂದ ಜನರು ಭಯಭೀತರಾಗಿದ್ದಾರೆ.

ತಾಲೂಕಿನಲ್ಲಿ ಧಾರಾಕಾರವಾಗಿ ಸುರಿಯುವ ಮಳೆಗೆ ಕೆಳದಂಡೆ ಮುಲ್ಲಾಮಾರಿ ಜಲಾಶಯ ಒಳಹರಿವು ಹೆಚ್ಚಿದ್ದು, ನದಿಗೆ ನಾಲ್ಕು ಗೇಟ್ ‌ಮೂಲಕ ಆರು ಸಾವಿರ ಕ್ಯೂಸೆಕ್ ನೀರು ಬಿಡಲಾಯಿತು.

ನದಿ ದಂಡೆಯ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಗೌಡನಹಳ್ಳಿ, ನಿಮಾಹೊಸಳ್ಳಿ,‌ ಗರಗಪಳ್ಳಿ, ಇರಗಪಳ್ಳಿ, ಚಂದಾಪುರ ಬ್ಯಾರೇಜ್ ಜಲಾವೃತವಾಗಿರುವುದರಿಂದ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಆಯಿತು.

ಕುಂಚಾವರಂ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ಜೋರಾಗಿ ಮಳೆಯಾಗಿರುವ ಕಾರಣ ‌ಚಂದ್ರಂಪಳ್ಳಿ ಜಲಾಶಯದಲ್ಲಿ ಒಳಹರಿವು ಉಂಟಾಗಿದ್ದರಿಂದ 4900 ಕ್ಯೂಸೆಕ್ ನೀರು ಹೊರಗೆ ಬಿಡಲಾಯಿತು ಎಂದು ಎಇಇ ಚೇತನ ಕಳಸ್ಕರ ಹೇಳಿದ್ದಾರೆ.

ಪಟ್ಟಣದಲ್ಲಿ ವ್ಯಾಪಕವಾಗಿ ಮಳೆಗೆ‌ ಮುತ್ತುಲ ನಾಲಾ ಸಂಪೂರ್ಣವಾಗಿ ತುಂಬಿ ಹರಿಯುತ್ತಿದೆ. ಚಂದ್ರಂಪಳ್ಳಿ,ಕೆಳದಂಡೆ ಮುಲ್ಲಾಮಾರಿ ಜಲಾಶಯಗಳಿಂದ ಹರಿದು ಬಿಟ್ಟಿರುವ ನೀರಿನಿಂದ ಪ್ರವಾಹ ಉಂಟಾಗಿ ನದಿಪಾತ್ರದ ಗ್ರಾಮಸ್ಥರು ತೊಂದರೆ ಪಡಬೇಕಾಗಿದೆ.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.