ಬಸವಣ್ಣ ದೇಗುಲ ತೆರವಿಗೆ ನಾಗರಿಕರ ವಿರೋಧ

ಮಹಾನಗರಪಾಲಿಕೆ ಅಧಿಕಾರಿಗಳು ವಿವಾವದವೊಂದನ್ನು ಮೈಮೇಲೆ ಎಳೆದು ಕೊಂಡಿದ್ದಾರೆ.

Team Udayavani, Aug 19, 2021, 6:07 PM IST

Basanna

ಕಲಬುರಗಿ: ನಗರದ ಕುಸನೂರ ರಸ್ತೆಯಲ್ಲಿನ ಧನವಂತ್ರಿ ಕಾಲೋನಿಯ ಘಂಟಿ ಲೇಔಟ್‌ನಲ್ಲಿರುವ ಬೀದಿ ಬಸವಣ್ಣ ದೇಗುಲವನ್ನು ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಲು ಮುಂದಾದಾಗ ಸ್ಥಳೀಯ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ಬುಧವಾರ ಬೆಳಗ್ಗೆ ಪಾಲಿಕೆ ಅಧಿಕಾರಿಗಳು ದೇಗುಲ ತೆರವಿಗೆ ಆಗಮಿಸುತ್ತಿದ್ದಂತೆ ದಿಢೀರನೇ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಜಮಾಗೊಂಡು ಪಾಲಿಕೆ ವಿರುದ್ಧ ಘೋಷಣೆ ಕೂಗಿ, ನಗರದ ವರ್ತುಲ ರಸ್ತೆಯ ಖರ್ಗೆ ಪೆಟ್ರೋಲ್‌ ಪಂಪ್‌ ವೃತ್ತದಲ್ಲಿ ರಸ್ತೆ ತಡೆದು, ಮಾನವ ಸರಪಳಿ ರೂಪಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಮುನ್ಸೂಚನೆ ಇಲ್ಲದೇ ದೇವಸ್ಥಾನ ತೆರವಿಗೆ ಮುಂದಾಗಿದ್ದಕ್ಕೆ ಪ್ರಬಲ ವಿರೋಧ ವ್ಯಕ್ತವಾಯಿತು. ಯಾವುದೇ ಕಾರಣಕ್ಕೂ ದೇವಸ್ಥಾನ ತೆರವಿಗೆ ಬಿಡೋದಿಲ್ಲ. ಪಾಲಿಕೆ ಅಧಿಕಾರಿಗಳು ಹಿಂದುಗಳ ದೇವಾಲಯಗಳನ್ನೇ ಗುರಿಯಾಗಿಟ್ಟುಕೊಂಡು ನೆಲಸಮಕ್ಕೆ ಮುಂದಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಪಾಲಿಕೆ ಅಧಿಕಾರಿಗಳು ಆಗಾಗ್ಗೆ ಹೀಗೆ ದಿಢೀರನೇ ಬಂದು ಹಿಂದೂಗಳ ದೇವಾಲಯಗಳನ್ನು ನೆಲಸಮ ಮಾಡುತ್ತಿರುವುದನ್ನು ನೋಡಿದರೆ ಯಾವುದೋ ಉದ್ದೇಶ ಹೊಂದಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ. ಆದರೆ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.

ಒಟ್ಟಾರೆ ಪಾಲಿಕೆ ಚುನಾವಣೆ ಸಮಯದಲ್ಲಿ ಇಂತಹ ಕೆಲಸಕ್ಕೆ ಕೈ ಹಾಕಿದ ಅಧಿಕಾರಿಗಳು, ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ. ಮಹಾನಗರಪಾಲಿಕೆಗೆ ಮುಂದಿನ ತಿಂಗಳು ಚುನಾವಣೆ ನಡೆಯುವ ಸಮಯದಲ್ಲಿಯೇ ಮಹಾನಗರಪಾಲಿಕೆ ಅಧಿಕಾರಿಗಳು ವಿವಾವದವೊಂದನ್ನು ಮೈಮೇಲೆ ಎಳೆದು ಕೊಂಡಿದ್ದಾರೆ. ನಂತರ ಪೊಲೀಸ್‌ ಅಧಿಕಾರಿ ಹಾಗೂ ಮಹಾನಗರ ಪಾಲಿಕೆಯ ವಲಯ ಆಯುಕ್ತರು ಬಂದು ಗುಡಿಯನ್ನು ತೆರವುಗೊಳಿಸುವುದಿಲ್ಲ. ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ಕೊಟ್ಟನಂತರ ಪ್ರತಿಭಟನೆ ನಿಲ್ಲಿಸಲಾಯಿತು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಮುಖರಾದ ಚಂದ್ರಕಾಂತ ಕಾಳಗಿ,
ಆರ್‌.ಜಿ. ಶೆಟಗಾರ್‌, ಉಮೇಶ್‌ ಶೆಟ್ಟಿ, ಬಾಬು ಸುಂಠಾಣ, ವೀರಣ್ಣ ಹೊನ್ನಳ್ಳಿ, ಅಮಿತ ಚುಡಗುಂಪಿ, ಉದಯ ಪಾಟೀಲ, ಪ್ರಶಾಂತ ಗುಡ್ಡ, ಅಶ್ವಿ‌ನ್‌, ಸಾಗರ, ಸಚಿನ, ಬಸವ, ಶರಣು, ವಿಜಯ, ನಂದ್ಯಾಳ ಹಾಗೂ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.