ಬಸ್‌ಗಳಿಗೆ ಹಾನಿ: 7 ಸಾರಿಗೆ ನೌಕರರ ಬಂಧನ

6 ನಿರ್ವಾಹಕರು, 28 ಮಂದಿ ಚಾಲಕರು ಕಂ ನಿರ್ವಾಹಕರು ಹಾಗೂ ಇಬ್ಬರು ತಾಂತ್ರಿಕ ಸಿಬ್ಬಂದಿ ಸೇರಿದ್ದಾರೆ.

Team Udayavani, Apr 17, 2021, 6:19 PM IST

Bus

ಕಲಬುರಗಿ: ರಾಜ್ಯಾದ್ಯಂತ ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗದ ಅನ್ವಯ ಸಂಬಳ ಜಾರಿಗೆ ಮಾಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಮುಷ್ಕರ ಶುಕ್ರವಾರ ಹತ್ತನೇ ದಿನಕ್ಕೆ ಪೂರೈಸಿದೆ. ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಮತ್ತು ಸಾರಿಗೆ ಬಸ್‌ಗಳನ್ನು ಜಖಂಗೊಳಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯಕ್ಕೆ ಅಡ್ಡಿ, ಬಸ್‌ಗಳಿಗೆ ಹಾನಿ ಮತ್ತು ಮುಷ್ಕರಕ್ಕೆ ಪ್ರಚೋದನೆ ಕುರಿತಂತೆ 52 ನೌಕರರ ವಿರುದ್ಧ 22 ಪೊಲೀಸ್‌ ಕೇಸ್‌ ದಾಖಲಾಗಿವೆ. ಇದರಲ್ಲಿ ಬಸ್‌ ಗಳಿಗೆ ಹಾನಿ ಸಂಬಂಧ 12 ಪ್ರಕರಣಗಳು ದಾಖಲಾಗಿದ್ದು, ಕೃತ್ಯ ಎಸಗಿದ ಎಂಟು ಜನರ ಪೈಕಿ ಈಗಾಗಲೇ ಏಳು ಸಿಬ್ಬಂದಿ ಬಂಧಿಸಲಾಗಿದೆ.

ಅಲ್ಲದೇ, ಮುಷ್ಕರದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಅನಧಿಕೃತವಾಗಿ ಗೈರಾದ ಆರೋಪದ ಮೇಲೆ ಇದುವರೆಗೆ 55 ಜನ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಇದರಲ್ಲಿ 16 ಚಾಲಕರು, 6 ನಿರ್ವಾಹಕರು, 28 ಮಂದಿ ಚಾಲಕರು ಕಂ ನಿರ್ವಾಹಕರು ಹಾಗೂ ಇಬ್ಬರು ತಾಂತ್ರಿಕ ಸಿಬ್ಬಂದಿ ಸೇರಿದ್ದಾರೆ. ಜತೆಗೆ ಇದುವರೆಗೆ ಬೇರೆ-ಬೇರೆ 135 ನೌಕರರನ್ನು ವರ್ಗಾವಣೆ ಮಾಡಲಾಗಿದೆ.

ಮುಷ್ಕರದ ಹಿನ್ನೆಲೆಯಲ್ಲಿ ಈಶಾನ್ಯ ಸಾರಿಗೆ ಸಂಸ್ಥೆಗೆ ಏ.7ರಿಂದ 16ರ ವರೆಗೆ 50 ಕೋಟಿ ರೂ. ಆದಾಯದಲ್ಲಿ ಕೊರತೆಯುಂಟಾಗಿದೆ. ಇದುವರೆಗೆ ಕರ್ತವ್ಯಕ್ಕೆ ಹಾಜರಾದ 9,262 ನೌಕರರಿಗೆ 17.96 ಕೋಟಿ ರೂ. ಗಳಷ್ಟು ಮಾರ್ಚ್‌ ತಿಂಗಳ ವೇತನ ಪಾವತಿಸಲಾಗಿದೆ ಎಂದು ಈಶಾನ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮಾರಾವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.