ಸಿಎಂ ಪ್ರವಾಸ ಯಶಸ್ಸಿಗೆ ಶ್ರಮಿಸಲು ಸೂಚನೆ


Team Udayavani, Jan 2, 2022, 11:54 AM IST

4CM

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜ.4ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು ಎಂದು ಪ್ರಭಾರಿ ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ದಿಲೀಷ್‌ ಸಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ಜ.4ರಂದು ಬೆಳಗ್ಗೆ 11 ಗಂಟೆಗೆ ನಗರದ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಭಾಗವಹಿಸುವರು. ನಂತರ ಬೆಳಗ್ಗೆ 11:45ಕ್ಕೆ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕಿನ ನೂತನ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸುವರು. ಇದೇ ವೇಳೆ ಸಾಲ ಮನ್ನಾ ಆದ ರೈತರಿಗೆ ಸಾಲ ವಿತರಿಸುವರು. ನಂತರ ಎಟಿಎಂ ಮೊಬೈಲ್‌ ವ್ಯಾನ್‌ ಉದ್ಘಾಟನೆ ಹಾಗೂ 300 ಸಹಕಾರ ಸಂಘಗಳಿಗೆ ಎಟಿಎಂ ಯಂತ್ರಗಳ ವಿತರಣೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2 ಗಂಟೆಗೆ ಆಳಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು ಎಂದರು.

ಕೊರೊನಾ ಹಿನ್ನೆಲೆಯಲ್ಲಿ ಈ ಮೂರು ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಹ್ಯಾಂಡ್‌ ಸ್ಯಾನಿಟೈಸರ್‌ ಬಳಕೆ ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ್‌ ಅವರಿಗೆ ಸೂಚಿಸಿದರು. ಕಾರ್ಯಕ್ರಮಗಳ ಸ್ಥಳಗಳಲ್ಲಿ ವೇದಿಕೆ ಅಲಂಕಾರ, ಸ್ವತ್ಛತೆ, ಪೊಲೀಸ್‌ ಭದ್ರತೆ, ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಅಂದು ಯಾರು ಗೈರಾಗುವಂತಿಲ್ಲ. ಮುಖ್ಯಮಂತ್ರಿಗಳ ಪ್ರವಾಸ ಯಶಸ್ಸಿಗೆ ವಿವಿಧ ಸಮಿತಿ ರಚಿಸಲಾಗಿದ್ದು, ಅದರಂತೆ ಎಲ್ಲ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವಜನರಿಂದ, ಯುವಜನರಿಗಾಗಿ, ಯುವಜನರಿಗೋಸ್ಕರ ರಾಜ್ಯ ಸರ್ಕಾರ ರೂಪಿಸುತ್ತಿರುವ ನೂತನ ಯುವ ನೀತಿ-2021-22 ಕುರಿತು ಪೋಸ್ಟರ್‌ ಬಿಡುಗಡೆ ಮಾಡಲಾಯಿತು. ಎಸ್‌ಪಿ ಇಶಾ ಪಂತ್‌, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಕೆ.ಆರ್‌.ದುಗೇìಶ, ಸಹಾಯಕ ಆಯುಕ್ತೆ ಮೋನಾ ರೋಟ್‌ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.