ಕಿಸಾನ್‌ ಕಾರ್ಡ್‌ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

Team Udayavani, Jul 31, 2022, 12:51 PM IST

4Dc

ಕಲಬುರಗಿ: ಜಿಲ್ಲೆಯ ಎಲ್ಲ ರೈತರಿಗೂ ಕಿಸಾನ್‌ ಕಾರ್ಡ್‌ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌ ಬ್ಯಾಂಕರ್‌ಗಳಿಗೆ ಸೂಚಿಸಿದರು.

ಶನಿವಾರ ಜಿಲ್ಲಾ ಪಂಚಾಯತ್‌ ಹೊಸ ಸಭಾಂಗಣದಲ್ಲಿ ನಡೆದ ಲೀಡ್‌ ಬ್ಯಾಂಕ್‌ ಯೋಜನೆಗಳ ಜಿಲ್ಲಾ ಮಟ್ಟದ ಪರಾಮರ್ಶೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಯಲ್ಲಿ ಜಿಲ್ಲೆ ಎರಡನೇ ಸ್ಥಾನದಲ್ಲಿ ಇದೆ. ಆದಷ್ಟು ಬೇಗ ಒಂದನೇ ಸ್ಥಾನಕ್ಕೆ ಬರುವ ಪ್ರಯತ್ನ ಮಾಡಬೇಕು. ಪ್ರಮುಖವಾಗಿ ಸಣ್ಣ ಕೈಗಾರಿಕೆಗಳು, ಕೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರು, ರೈತರು, ಆಟೋ ಚಾಲಕರು ಇತ್ಯಾದಿ ವರ್ಗದವರನ್ನು ಪದೇಪದೆ ಬ್ಯಾಂಕ್‌ಗಳಿಗೆ ಅಲೆದಾಡಿಸದೇ ಸಾಲ ನೀಡಿ ಎಂದು ಹೇಳಿದರು.

ಸಂಸದ ಡಾ| ಉಮೇಶ ಜಾಧವ ಮಾತನಾಡಿ, ಸರ್ಕಾರದ ಅನೇಕ ಯೋಜನೆಗಳು ಜನರಿಗೆ ಸಹಾಯ ಮಾಡಲು ಇವೆ. ಇವು ಸಾಮಾನ್ಯ ವರ್ಗದವರಿಗೆ ಗೊತ್ತಿಲ್ಲ, ಅಂತಹ ಯೋಜನೆಗಳನ್ನು ಜನರಿಗೆ ತಲುಪಿಸಲು ರಸ್ತೆಗಳಲ್ಲಿ ಸ್ಟಾಲ್‌ ಹಾಕಿಕೊಂಡು, ಪ್ರಚಾರ ಮಾಡಬೇಕು ಎಂದು ಸೂಚಿಸಿದರು.

ಲೀಡ್‌ ಬ್ಯಾಂಕ್‌ ಜಿಲ್ಲಾ ವ್ಯವಸ್ಥಾಪಕ ಸದಾಶಿವ ವೀ.ರಾತ್ರಿಕರ್‌ ಮಾತನಾಡಿ, ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಅಡಿಯಲ್ಲಿ 1.60ಲಕ್ಷ ರೈತರಿಗೆ ಸಾಲ ನೀಡಿದ್ದೇವೆ. ಇನ್ನು 40 ಸಾವಿರ ರೈತರಿಗೆ ಸಾಲ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. 2,50,452ಮಂದಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡಲಾಗಿದೆ. ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಮತ್ತು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಣೆಯಲ್ಲಿ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ನುಡಿದರು.

ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಬಿ.ಎಸ್‌. ರಾಠೊಡ, ನರ್ಬಾಡ್‌ ಡಿಡಿಎಂ ರಮೇಶ ಭಟ್‌, ಕೃಷ್ಣಾ ಗ್ರಾಮೀಣ ಬ್ಯಾಂಕ್‌ನ ಎಜಿಎಂ ಗುರುರಾಜ ಎಸ್‌. ಇದ್ದರು.

ಟಾಪ್ ನ್ಯೂಸ್

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.