ಪಾಲಿಕೆಯಲ್ಲಿ ಅಸ್ಥಿತ್ವಕ್ಕೆ ಬಾರದ ಚುನಾಯಿತ ಆಡಳಿತ

Team Udayavani, Mar 28, 2022, 10:23 AM IST

2elected

ಕಲಬುರಗಿ: ಮೂರು ವರ್ಷಗಳಿಂದ ನಡೆಯದ ಚುನಾವಣೆ ಇನ್ನೇನು ನಡೆದು ಪಾಲಿಕೆಯಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರುತ್ತದೆ ಎಂದುಕೊಳ್ಳುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನಡೆಯಿಂದ ಇನ್ನೂ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪಾಲಿಕೆ ಚುನಾವಣೆ ಮುಕ್ತಾಯವಾಗಿ ಆರು ತಿಂಗಳಾದರೂ ಮೇಯರ್‌, ಉಪಮೇಯರ್‌ ಆಯ್ಕೆಯಾಗಿಲ್ಲ. ಆಡಳಿತಯಂತ್ರ ವೇಗವಾಗಿಲ್ಲ. ಪ್ರಮುಖವಾಗಿ ಪ್ರಸ್ತುತ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಒದಗಿಸುವುದು ಸೇರಿದಂತೆ ಇತರೆ ತುರ್ತು ಕಾರ್ಯಗಳಿಗೆ ತೊಂದರೆಯಾಗಿದೆ ಎಂದು ಕಾಂಗ್ರೆಸ್‌ ಮುಖಂಡರಾದ ಹುಲಿಗೆಪ್ಪ ಕನಕಗಿರಿ, ಪಾಲಿಕೆ ಸದಸ್ಯ, ಮಾಜಿ ಮೇಯರ್‌ ಸೈಯದ್‌ ಅಹ್ಮದ್‌ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಕಳೆದ ಮೂರು ವರ್ಷಗಳಿಂದ ಚುನಾಯಿತರ ಆಡಳಿತ ಇಲ್ಲದಿರುವುದರಿಂದ ಪಾಲಿಕೆ ಅನಾಥವಾಗಿತ್ತು. ಹೀಗಾಗಿ ಜನರು ಪರಿತಪಿಸುವಂತಾಗಿದೆ. ಕೊನೆಗೆ ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆದರೂ ಬಿಜೆಪಿಗೆ ಸ್ಪಷ್ಟ ಬಹುಮತ ಬರದೇ ಇದ್ದುದರಿಂದ ಉದ್ದೇಶಪೂರ್ವಕವಾಗಿ ಬೇರೆ ಜಿಲ್ಲೆಗಳ ವಿಧಾನಪರಿಷತ್‌ ಸದಸ್ಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ, ಅಧಿಕಾರಕ್ಕೆ ಬರಲು ಯತ್ನಿಸಿದರು. ಇದನ್ನು ಪ್ರಶ್ನಿಸಿ ನಾವು ಹೈಕೋರ್ಟ್‌ ಮೊರೆ ಹೋದಾಗ ಹಳೆಯ ಮತದಾರರ ಪಟ್ಟಿ ಹಾಗೂ ಮೀಸಲಾತಿಯಂತೆ ಚುನಾವಣೆ ನಡೆಸಲು ಏಕಸದಸ್ಯ ಪೀಠವು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದೆ.

ಒಟ್ಟಾರೆ ಚುನಾವಣೆ ಮುಂದೂಡುವುದೇ ಬಿಜೆಪಿ ತಂತ್ರಗಾರಿಕೆಯಾಗಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಅಡ್ವೋಕೇಟ್‌ ಜನರಲ್‌ ಅವರಿಗೆ ತಕ್ಷಣ ಪ್ರಕರಣ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ವಿಚಾರಣೆಯಲ್ಲಿ ಭಾಗವಹಿಸಲು ಸೂಚಿಸಬೇಕು ಎಂದರು.

ಚುನಾವಣೆ ನಡೆದು ಯಾರದ್ದಾದರೂ ಆಡಳಿತ ಬರಲಿ. ಮೊದಲು ಮೇಯರ್‌ ಹಾಗೂ ಉಪಮೇಯರ್‌ ಚುನಾವಣೆ ತಕ್ಷಣ ನಡೆಸಬೇಕು. ಇಲ್ಲದಿದ್ದರೆ ಜನರು ನೀರಿಲ್ಲದೇ ಪರಿತಪಿಸಬೇಕಾಗುತ್ತದೆ. ಪಾಲಿಕೆಯಲ್ಲಿ ಚುನಾಯಿತ ಪ್ರತಿನಿ ಧಿಗಳ ಅಧಿಕಾರ ಇದ್ದಿದ್ದರೆ ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಟ್ಯಾಂಕರ್‌ ಮೂಲಕವಾದರೂ ನೀರು ಪೂರೈಸಬಹುದಿತ್ತು. ಈಗ ಅದಕ್ಕೂ ಅವಕಾಶವಿಲ್ಲ. ಪಾಲಿಕೆ ಆಯುಕ್ತರು ಸೌಜನ್ಯಕ್ಕೆ ಎಲ್ಲ ಪಕ್ಷಗಳ ಪಾಲಿಕೆ ಸದಸ್ಯರನ್ನು ಕರೆದು ಸಭೆ ನಡೆಸಿ ಮುಂದಿನ ಬಜೆಟ್‌ ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಬಹುದಿತ್ತು ಎಂದು ಅಳಲು ತೋಡಿಕೊಂಡರು.

ಪಾಲಿಕೆ ಸದಸ್ಯರಾದ ಸಚಿನ್‌ ಶಿರವಾಳ, ಲತಾ ರವಿ ರಾಡೋಡ, ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲಿಂಗರಾಜ ತಾರಫೈಲ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.