ಹಾಸ್ಟೆಲ್‌ಗೆ ಸೌಲಭ್ಯ ಒದಗಿಸಲು ಒತ್ತಾಯ

Team Udayavani, Jan 28, 2022, 12:56 PM IST

13hostel

ಆಳಂದ: ಮೆಟ್ರಿಕ್‌ ನಂತರದ ಸರ್ಕಾರಿ ಪದವಿ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಮೂಲಸೌಭ್ಯ ಕಲ್ಪಿಸಬೇಕು ಎಂದು ಬಂಜಾರಾ ಕ್ರಾಂತಿದಳ ತಾಲೂಕು ಘಟಕದ ಅಧ್ಯಕ್ಷ ವೆಂಕಟೇಶ ಪಿ. ರಾಠೊಡ ನೇತೃತ್ವದಲ್ಲಿ ಕಾರ್ಯಕರ್ತರು, ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಎದುರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೂಡಲೇ ಬೇಡಿಕೆ ಈಡೇರಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ವಸತಿ ನಿಲಯಕ್ಕೆ ಸೌಲಭ್ಯ ಕಲ್ಪಿಸುವಂತೆ ಕಳೆದ ಜ.7ರಂದು ವಿದ್ಯಾರ್ಥಿ ವಸತಿ ನಿಲಯದ ಎದುರು ಹೋರಾಟ ಕೈಗೊಂಡು ಮೂಲಸೌಕರ್ಯ ಹಾಗೂ ಊಟದ ವ್ಯವಸ್ಥೆ ಸುಧಾರಿಸಲು ಪ್ರತಿಭಟನೆ ಕೈಗೊಂಡು ಮನವಿ ಸಲ್ಲಿಸಿದ ಮೇಲೆ ಸಮಾಜ ಕಲ್ಯಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ನಂತರ 15 ದಿನಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ಗಮನಿಸಿದರೆ ನಿಲಯದಲ್ಲಿ ಮೇಲ್ವಿಚಾರಕರೇ ಇಲ್ಲವೆನ್ನುವ ಹಾಗಿದೆ. ವಿದ್ಯಾರ್ಥಿಗಳಿಗೆ ಬೇಕಾಗುವ ಸೌಕರ್ಯಗಳನ್ನು ಕಲ್ಪಿಸದೇ ಕಾಲಹರಣ ಮಾಡುತ್ತಿರುವ ಮೇಲ್ವಿಚಾರಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಮೂರು ತಿಂಗಳಿಂದಲೂ ಸರಿಯಾದ ಊಟ ಕೊಡುತ್ತಿಲ್ಲ. ಅಡುಗೆ ಕೋಣೆ ಸ್ವತ್ಛವಾಗಿಲ್ಲ. ಪೌಷ್ಟಿಕಾಂಶ ಆಹಾರ ಹಾಗೂ ಊಟದ ಪಟ್ಟಿಯಂತೆ ಆಹಾರ ಒದಗಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಶೌಚಾಲಯ ಸ್ವತ್ಛತೆ, ನೀರಿನ ಸಮಸ್ಯೆ ನಿವಾರಣೆ, ಸ್ನಾನಕ್ಕೆ ಬಿಸಿನೀರಿಗಾಗಿ ವ್ಯವಸ್ಥೆ, ಆಟದ ಮೈದಾನ ಸ್ವತ್ಛತೆ, ಆವರಣ ಬಾಗಿಲಿಗೆ ಗೇಟ್‌ ಅಳವಡಿಸಿ ಕಾವಲುಗಾರ ನೇಮಿಸಬೇಕು. ಎರಡು ತಿಂಗಳಿಂದ ಸಾಬೂನು, ಎಣ್ಣೆಕೊಟ್ಟಿಲ್ಲ. ಮಲಗಲು ಗಾದಿ ವ್ಯವಸ್ಥೆ, ಜನರೇಟರ್‌ ದುರಸ್ತಿ, ಗುಣಮಟ್ಟದ ಊಟ ಮಾಡಲು ಹೊಸ ಅಡುಗೆ ಸಿಬ್ಬಂದಿ ನೇಮಕ, ನಿಲಯದ ಮೇಲ್ಛಾವಣಿ ಸ್ವತ್ಛತೆ ಹಾಗೂ ಸಿಂಟ್ಯಾಕ್ಸ್‌ಗಳಿಗೆ ಮುಚ್ಚಳಿಕೆ ಅಳವಡಿಸಬೇಕು. ಬೇಡಿಕೆಗಳ ಈಡೇರಿಸಲು ವಿಳಂಬ ನೀತಿ ಅನುಸರಿಸಿದರೆ, ಕಚೇರಿಗೆ ಬೀಗಹಾಕಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಸಮಾಜ ಕಲ್ಯಾಣ ಇಲಾಖೆ ಗ್ರೇಡ್‌-1ರ ಸಹಾಯಕ ನಿರ್ದೇಶಕಿ ಮೋನಮ್ಮ ಸುತಾರ ಲಿಖೀತ ಭರವಸೆ ನೀಡಿ, ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು. ಕಾಲಾವಕಾಶ ನೀಡಬೇಕು ಎಂದು ಭರವಸೆ ನೀಡಿದ ಮೇಲೆ ಕಾರ್ಯಕರ್ತರು ಪ್ರತಿಭಟನೆ ಹಿಂದಕ್ಕೆ ಪಡೆದರು.

ಕ್ರಾಂತಿದಳ ಅಧ್ಯಕ್ಷ ವೆಂಕಟೇಶ ಪಿ. ರಾಠೊಡ, ಪ್ರೇಮ, ಆಕಾಶ, ಅವಿನಾಶ, ಪವನ್‌, ಕರಣ , ಪೃಥ್ವಿ, ರೋಹಿತ್‌, ವಿಶಾಲ, ಪಂಕಜ, ರೋಹನ್‌, ಪರಮೇಶ್ವರ ಸಾವನ, ರೈತ ಮುಖಂಡ ಶ್ರೀಧರ ಕಟಂಬಲೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

3 ಹುಲಿ ಮರಿಗಳಿಗೆ ತಾಯಿಯಾದ ನಾಯಿ-ವಿಡಿಯೋ ವೈರಲ್

ಈ 3 ಹುಲಿ ಮರಿಗಳಿಗೆ ನಾಯಿಯೇ “ತಾಯಿ’!-ವಿಡಿಯೋ ವೈರಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ct-ravi

ಪಠ್ಯದಲ್ಲಿ ಹೆಗಡೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು?: ಸಿ.ಟಿ.ರವಿ

12ambedkar

ಅಂಬೇಡ್ಕರ್‌ ಜಯಂತಿ ಚಿಂತನೆಗೆ ವೇದಿಕೆಯಾಗಲಿ

11road

ಅಣವಾರ-ಮೋತಕಪಳ್ಳಿ ರಸ್ತೆ ಸುಧಾರಣೆಗೆ ಕ್ರಮ

ವಿಧಾನಸಭೆ ಚುನಾವಣೆ; ಸ್ಥಳೀಯರಿಗೆ ಆದ್ಯತೆ ನೀಡಿ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.