ಗ್ರಾಮೀಣ ಯೋಜನೆಗಳ ಜಾರಿಗೆ ಸರ್ಕಾರ ವಿಫಲ


Team Udayavani, Jan 18, 2022, 12:49 PM IST

12rural

ಆಳಂದ: ಗ್ರಾಮೀಣ ಯೋಜನೆಗಳ ಜಾರಿಗೆ ತರುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಹೋರಾಟದ ಮೂಲಕ ಬೇಡಿಕೆಗೆ ಒತ್ತಾಯಿಸಿದರೂ ಸರ್ಕಾರ ಮತ್ತು ಅಧಿಕಾರಿಗಳು ಕಿಂಚಿತವೂ ಸ್ಪಂದನೆ ಮಾಡುತ್ತಿಲ್ಲ ಎಂದು ಅಖೀಲ ಭಾರತ ಕಿಸಾನಸಭಾ ರಾಜ್ಯ ಉಸ್ತುವಾರಿ ಪಿ.ವಿ. ಲೋಕೇಶ ಆರೋಪಿಸಿದರು.

ಪಟ್ಟಣದ ತಾಪಂ ಕಚೇರಿಯ ಮುಂದೆ ಅಖೀಲ ಭಾರತ ಕಿಸಾನಸಭಾ ಮತ್ತು ಭಾರತೀಯ ಖೇತ ಮಜ್ದೂರ ಯೂನಿಯನ್‌ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಬಳಿಕ ನಡೆಸಿದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಉದ್ಯೋಗ ಖಾತ್ರಿ ಸೇರಿ ಗ್ರಾಮೀಣ ಕಾಮಗಾರಿಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ತಾಪಂ ಕಚೇರಿಯ ಮುಂದೆ 37 ದಿನಗಳಿಂದಲೂ ಹೋರಾಟ ನಡೆಸಿದರು ಸಹ ತಾಲೂಕಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳಾಗಲ್ಲಿ ಸಂಬಂಧಿತ ಅಧಿಕಾರಿಗಳಲ್ಲಿ ಚರ್ಚಿಸಿ ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಿಲ್ಲ. ಪಂಪ್‌ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಕೆಗೂ ಆಗುತ್ತಿಲ್ಲ. ಅತಿವೃಷ್ಟಿಯಿಂದ ಹಾಳಾದ ಬೆಳೆಗೆ ಪರಿಹಾರ ಮತ್ತು ವಿಮೆ ಬರುತ್ತಿಲ್ಲ. ಉದ್ಯೋಗ ಖಾತ್ರಿ ಅಡಿಯಲ್ಲಿ ನಮ್ಮ ಹೊಲ ನಮ್ಮ ರಸ್ತೆ, ಬದು ನಿರ್ಮಾಣ, ದನದಕೊಟ್ಟಿಗೆ ಕುರಿದೊಡ್ಡಿಯಂತ ಕೆಲಸಕ್ಕೆ ಯೋಜನೆಗಳಲ್ಲೇ ಆದೇಶವಿರುವಾಗ ಮತ್ತೇಕ ಮೇಲಾಧಿಕಾರಿಗಳ ಅಥವಾ ಸರ್ಕಾರದ ಆದೇಶ ಬೇಕು. ಇದಕ್ಕೂ ಸಂಪುಟದ ಒಪ್ಪಿಗೆ ಬೇಕೇ ಎಂದು ಪ್ರಶ್ನಿಸಿದ ಅವರು, ಯೋಜನೆಗಳ ಜಾರಿಗೆ ಬಂದ ಮೇಲೆ ನಿರಂತರವಾಗಿ ಅನುಷ್ಠಾನಕ್ಕೆ ಬರಬೇಕು. ಬರುತ್ತಿಲ್ಲದ ಕಾರಣ ಹೋರಾಟ ನಡೆಸಲಾಗಿದೆ. ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ಹೋದಲ್ಲಿ ರಾಜ್ಯ ಕಮಿಟಿಯಲ್ಲಿ ನಿರ್ಧರಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಅಣಿಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಫೆ.23ರಿಂದ ಎರಡು ದಿನಗಳ ಕಾಲ ನಡೆಯಲಿರುವ ಕೇಂದ್ರದ ಎಲ್ಲ ಕಾರ್ಮಿಕ ಸಂಘಟನೆಗಳ ಅಖೀಲಭಾರತ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕಿಸಾನಸಭಾ ಸಂಪೂರ್ಣ ಬೆಂಬಲ ನೀಡಲಿದೆ. ರೈತಪರ ಹೋರಾಟದಲ್ಲೂ ಎಡವಿದೆ ಇದಕ್ಕೆ ಆತ್ಮಾವಲೋಕನ ಮಾಡಿಕೊಳ್ಳುವ ಕಾಲವಿದೆ ಎಂದ ಅವರು, ಜನರ ಕೂಗು ಕೇಳುವ ಸೂಕ್ಷ್ಮತೆ ಸರ್ಕಾರ ಕಳೆದುಕೊಂಡಿವೆ. ಸರ್ಕಾರಗಳಿಗೆ ಜಾತಿ, ಧರ್ಮದ ಭಾವನೆ ಕೆರಳಿಸಿ ಜನರ ಭಾವನಾತ್ಮಕವಾಗಿ ಕೇರಳಿಸುವಂತವುಗಳಿಗೆ ಆದ್ಯತೆ ನೀಡುತ್ತಿವೆ ಹೊರತು ರಾಜ್ಯಧರ್ಮ ಪಾಲನೆ ಸಂವಿಧಾನ ಪಾಲಿಸುತ್ತಿಲ್ಲ. ಹಂಪಿ ವಿವಿಗೆ 50 ಕೊಡಲು ಆಗಿಲ್ಲ. ಅದೇ ಸಂಸ್ಕೃತ ವಿವಿಗೆ 300 ಕೋಟಿ ಅಧಿಕ ಹಣ ಕೊಟ್ಟಿದ್ದಾರೆ. ಸರ್ಕಾರಗಳ ಹಿಡನ್‌ ಅಜೆಂಡಾವಿಟ್ಟು ಜನಪರ ರೈತಪರ ಹೋರಾಟಗಳಿಗೆ ನಿರ್ಲಕ್ಷಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ರಾಜ್ಯಾಧ್ಯಕ್ಷ ಕರಿಯಣ್ಣ, ರಾಜ್ಯ ಕಾರ್ಯದರ್ಶಿ ಕೆ.ಎಸ್‌. ಜನಾರ್ದನ, ಬಾಬುರಾವ್‌ ಹೊನ್ನಾ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಚಂದ್ರಕಾಂತ ಖೋಬ್ರೆ, ರಾಜಶೇಖರ ಬಸ್ಮೇ, ಮಲ್ಲಿನಾಥ ಯಲಶೆಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.