ನಿರ್ಮಾಣ ಹಂತದಲ್ಲೇ ಹೆದ್ದಾರಿ ರಸ್ತೆ ನಿರ್ನಾಮ

ಬಸವೇಶ್ವರ ಕಾಲೋನಿ ವರೆಗಿನ ರಸ್ತೆಯಲ್ಲಿ ಈಗಾಗಲೇ ದೊಡ್ಡ ತಗ್ಗುಗಳು ನಿರ್ಮಾಣವಾಗಿವೆ.

Team Udayavani, Aug 25, 2021, 6:00 PM IST

ನಿರ್ಮಾಣ ಹಂತದಲ್ಲೇ ಹೆದ್ದಾರಿ ರಸ್ತೆ ನಿರ್ನಾಮ

ಸೇಡಂ: ರಾಜ್ಯ ಹೆದ್ದಾರಿಗೆ ಹೊಸ ಲುಕ್‌ ಮತ್ತು ರಸ್ತೆ ಅಗಲ ಮಾಡುವ ದೃಷ್ಟಿಯಿಂದ ಕಮಲಾವತಿ ನದಿ ವರೆಗೆ ಕೈಗೊಂಡ ಕೋಟ್ಯಂತರ ರೂ. ವೆಚ್ಚದ ಕಾಮಗಾರಿ ಹಳ್ಳ ಹಿಡಿದಿದೆ. ಪಟ್ಟಣದ ಚಿಂಚೋಳಿ ಕ್ರಾಸ್‌ನಿಂದ ಕಮಲಾವತಿ ನದಿ ವರೆಗೆ ಕೈಗೊಂಡ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಹದಗೆಟ್ಟಿದೆ.

ಬಹುತೇಕ ಕಡೆಗಳಲ್ಲಿ ದೊಡ್ಡ ತಗ್ಗು, ದಿನ್ನೆಗಳು ನಿರ್ಮಾಣವಾಗಿದ್ದು, ಪಾದದೆತ್ತರ ಆಳ ಹೊಂದಿವೆ. ಇದರಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತೆ ಆಗಿದೆ. ದ್ವಿಪಥ ರಸ್ತೆ ಇದಾಗಿದ್ದು, ಸುಸಜ್ಜಿತ ಚರಂಡಿ ಹಾಗೂ ವಿದ್ಯುತ್‌ ದೀಪಾಲಂಕಾರದ ಸವಲತ್ತು ಹೊಂದಿದೆ. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯವೋ? ಅಥವಾ ಲೊಕೋಪಯೋಗಿ ಇಲಾಖೆ ಅಧಿಕಾರಿಗಳ ನಿಷ್ಕಾಳಜಿಯೋ ಗೊತ್ತಿಲ್ಲ. ನಿರ್ಮಾಣ ಹಂತದಲ್ಲೇ ರಸ್ತೆ ನಿರ್ನಾಮವಾಗಿದೆ. ಚಿಂಚೋಳಿ ಕ್ರಾಸ್‌ನಿಂದ ಹಿಡಿದು, ಅಗ್ಗಿ ಬಸವೇಶ್ವರ ಕಾಲೋನಿ ವರೆಗಿನ ರಸ್ತೆಯಲ್ಲಿ ಈಗಾಗಲೇ ದೊಡ್ಡ ತಗ್ಗುಗಳು ನಿರ್ಮಾಣವಾಗಿವೆ.

ಮಳೆಗಾಲವಾಗಿದ್ದರಿಂದ ತಗ್ಗುಗಳಲ್ಲಿ ನೀರು ಶೇಖರಣೆಯಾಗಿ ಪ್ರಯಾಣಿಕರ ಪ್ರಾಣಕ್ಕೆ ಕಂಟಕವಾಗಿದೆ. ಇದನ್ನು ಕಂಡು ಸಾರ್ವಜನಿಕರು ಅಧಿಕಾರಿಗಳಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಸ್ವಲ್ಪ ಯಾಮಾರಿದರೂ ಅಪಘಾತ ನಿಶ್ಚಿತ ಎನ್ನುವಂತಾಗಿದೆ. ಇನ್ನೊಂದೆಡೆ ಕಾರು ಚಾಲಕರು ತಗ್ಗುಗಳಲ್ಲಿ ಸಿಲುಕಿ ಪಡಬಾರದ ಕಷ್ಟಪಡುತ್ತಿದ್ದಾರೆ. ಮತ್ತೂಂದೆಡೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ದಿನ ದೂಡುತ್ತಿದ್ದಾರೆ.

ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಎಸ್ಡಿಬಿಸಿ (ಮೇಲ್ಪದರದ ರಸ್ತೆ ಕಾಮಗಾರಿ) ಪೂರ್ಣವಾದ ಮೇಲೆ ರಸ್ತೆ ಸುಸಜ್ಜಿತವಾಗಿ ಸಾರ್ವಜನಿಕರಿಗೆ ಮುಕ್ತವಾಗಲಿದೆ. ತಗ್ಗು ದಿನ್ನೆಗಳ ಕುರಿತು ಪರಿಶೀಲಿಸುವೆ. ಕೂಡಲೇ ಈ ಕುರಿತು ಕ್ರಮ ಕೈಗೊಳ್ಳುವೆ. ಜನರಿಗೆ ತೊಂದರೆಯಾಗದಂತೆ ನಿಗಾ ವಹಿಸಲಾಗುವುದು.
ಚಂದ್ರಶೇಖರ ಮೋತಕಪಲ್ಲಿ, ಎಇಇ, ಲೊಕೋಪಯೋಗಿ ಇಲಾಖೆ

ರಸ್ತೆ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ ಎಂದು ಈ ಹಿಂದೆ ಸೇಡಂನ ಹಲವಾರು ಜನರು ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಆದರೂ ಗುಣಮಟ್ಟ ಸರಿಪಡಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಈಗ ಬಿದ್ದಿರುವ ತಗ್ಗುಗಳಿಂದ ಏನಾದರೂ ಅನಾಹುತವಾದರೆ ಯಾರು ಹೊಣೆ? ಜನರ ಜೀವದ ಜೊತೆ ಚಲ್ಲಾಟವಾಡುವ ಹಕ್ಕು ಯಾರಿಗೂ ಇಲ್ಲ.
ಸಂತೋಷ ತಳವಾರ, ಪುರಸಭೆ ಸದಸ್ಯ

ಶಿವಕುಮಾರ ಬಿ. ನಿಡಗುಂದಾ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.