ಜಿಪಂ ಉಪಕಾರ್ಯದರ್ಶಿ ಭರವಸೆಗೆ ಜಗ್ಗದ ಧರಣಿ ನಿರತರು

Team Udayavani, Jan 1, 2022, 3:02 PM IST

13protest

ಆಳಂದ: ವಾರದಲ್ಲೇ ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಇಸ್ಮಾಯಿಲ್‌ ಅನಿರ್ದಿಷ್ಟಾವಧಿ ಧರಣಿ ನಿರತರಿಗೆ ಭರವಸೆ ನೀಡಿದರೂ, ಬೇಡಿಕೆ ಕಾರ್ಯಗತವಾಗುವ ವರೆಗೂ ಧರಣಿ ಸ್ಥಗಿತಗೊಳಿಸುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದರು.

ತಾಪಂ ಕಚೇರಿ ಬಳಿ ಅಖೀಲ ಭಾರತ ಕಿಸಾನಸಭಾ ತಾಲೂಕು ಘಟಕ, ಭಾರತೀಯ ಖೇತ್‌ ಮಜ್ದೂರ್‌ ಯೂನಿಯನ್‌ ಆಶ್ರಯದಲ್ಲಿ ಹಲವು ರೈತರು, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಇತ್ತಾಯಿಸಿ ಆರಂಭಿಸಿದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಇದಕ್ಕೆ ಪ್ರತಿಯಾಗಿ ಧರಣಿ ನಿರತ ಮುಖಂಡರು ಎಲ್ಲ ಪಂಚಾಯಿತಿಗಳಲ್ಲಿ ವಾರದಲ್ಲೇ ಕುರಿದೊಡ್ಡಿ, “ನಮ್ಮ ಹೊಲ-ನಮ್ಮ ರಸ್ತೆಯಂತ’ ಉದ್ಯೋಗ ಖಾತ್ರಿ ಕಾಮಗಾರಿ ಪ್ರಾರಂಭಿಸಿದರೆ ನಾವಾಗಿಯೇ ಧರಣಿ ಬಿಟ್ಟು ಹೋಗುತ್ತೇವೆ. ಕಾಮಗಾರಿ ಆರಂಭಿಸುವ ವರೆಗೆ ಧರಣಿ ಹಿಂದಕ್ಕೆ ಪಡೆಯಲಾಗದು ಎಂದು ಮುಖಂಡರು ಹೇಳಿದರು.

ಕಿಸಾನಸಭಾ ಜಿಲ್ಲಾಧ್ಯಕ್ಷ ಮೌಲಾ ಮುಲ್ಲಾ ಮಾತನಾಡಿ, ಪ್ರತಿ ಪಂಚಾಯಿತಿ ಎದುರು ಮೂರುಬಾರಿ ಧರಣಿ ಪ್ರತಿಭಟನೆ ಕೈಗೊಂಡು ಮನವಿ ಸಲ್ಲಿಸಿದರೂ ಉತ್ತರವೇ ಸಿಕ್ಕಿಲ್ಲ. ತಪ್ಪಿತಸ್ಥರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಹೊಟ್ಟೆ ಪಾಡಿಗೆ ಏನಾದರೂ ಮಾಡಿದರೆ ಕಳ್ಳರ ಪಟ್ಟಿಗೆ ಸೇರಿಸುತ್ತಾರೆ. ಸರ್ಕಾರಿ ಹಣ ಲೂಟಿ ಮಾಡಿದರೆ ತನಿಖೆ ಹೆಸರಿನಲ್ಲಿ ಮುಚ್ಚಿಹಾಕುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಡೋಳಾ ಗ್ರಾಪಂನಲ್ಲಿ ಕಳೆದ ಐದು ವರ್ಷದಲ್ಲಿ ಗ್ರಾಪಂ ಅಧ್ಯಕ್ಷರು, ಪಿಡಿಒ ಸೇರಿ ಕೋಟ್ಯಂತರ ರೂ. ಲೂಟಿ ಮಾಡಿದ್ದಾರೆ. ಈ ಕುರಿತು ಎಂಟು ದಿನ ಸತ್ಯಾಗ್ರಹ ಮಾಡಿದಾಗ ಡಿಎಸ್‌-1ಗೆ ಮನವಿ ಸಲ್ಲಿಸಿದ್ದೆವು. ಆದರೆ ಯಾವುದೇ ಕ್ರಮ ಜರುಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಿಸಾನಸಭಾ ತಾಲೂಕು ಕಾರ್ಯಾಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ, ಅಧ್ಯಕ್ಷ ಚಂದ್ರಕಾಂತ ಖೋಬ್ರೆ, ಭೂಸನೂರ ಗ್ರಾಪಂ ಉಪಾಧ್ಯಕ್ಷ ದಸ್ತಗೀರ, ಮಹಾವೀರ ಕಾಂಬಳೆ, ಪಾಂಡುರಂಗ ಸಿಂಧೆ, ರಾಜಶೇಖರ ಬಸ್ಮೆ, ಖಲೀಲ ಉಸ್ತಾದ, ಆಶಾಕ್‌ ಮುಲ್ಲಾ, ಪುರಸಭೆ ಮಾಜಿ ಸದಸ್ಯ ಸೈಫಾನ್‌ ಜವಳಿ ಇನ್ನಿತರರು ಇದ್ದರು.

ಎಐವೈಎಫ್‌ ಜಿಲ್ಲಾಧ್ಯಕ್ಷ ಹಣಮಂತರಾವ್‌ ಅಟ್ಟೂರ ಧರಣಿಗೆ ಬೆಂಬಲ ಸೂಚಿಸಿದರು. ಧರಣಿ ನಿರತರ ಮಾಹಿತಿ ಕಲೆ ಹಾಕಿದ ಉಪ ಕಾರ್ಯದರ್ಶಿ ಇಸ್ಮಾಯಿಲ್‌, ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು. ತಾಪಂ ಪ್ರಭಾರಿ ಇಒ ಡಾ| ಸಂಜಯ ರೆಡ್ಡಿ ಇದ್ದರು. ಭರವಸೆಗೆ ತೃಪ್ತರಾಗದ ಪ್ರತಿಭಟನಾ ನಿರತರು ಧರಣಿ ಮುಂದುವರಿಸಿದ್ದರಿಂದ ಜ.1ಕ್ಕೆ 22ನೇ ದಿನಕ್ಕೆ ಹೋರಾಟ ಮುಂದುವರಿಯಿತು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.