ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯ
Team Udayavani, Feb 9, 2022, 11:33 AM IST
ಕಲಬುರಗಿ: ರಾಯಚೂರು ಜಿಲ್ಲಾ ಸತ್ರ ನ್ಯಾಯಾಧೀಶರನ್ನು ಸೇವೆಯಿಂದ ವಜಾ ಗೊಳಿಸಬೇಕೆಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು. ಅಖೀಲ ಕರ್ನಾಟಕ ಕೋಲಿ, ಕಬ್ಬಲಿಗ, ಬುಡಕಟ್ಟು ಪಂಗಡಗಳ ಸುಧಾರಣ ಸಮಿತಿ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನ್ಯಾಯಾಧಿಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕೋಲಿ, ಕಬ್ಬಲಿಗ, ಬುಡಕಟ್ಟು ಪಂಗಡಗಳ ಸುಧಾ ರಣಾ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಭೀಮಶಾ ಖನ್ನಾ, ಮುಖಂಡರಾದ ಭೀಮಣ್ಣ ಸಾಲಿ, ಬಸವರಾಜ ಹರವಾಳ, ಮಹಾದೇವ ಕೋಳಕೂರ, ಶಿವು ದಣ್ಣಿ, ಸಂತೋಷ ತಳವಾರ, ದೇವಿಂದ್ರಪ್ಪ ಅಣಕಲ್, ಹಣಮಂತ ಸುಂಟನೂರ, ರಾವುತಪ್ಪ, ಬಸವರಾಜ ಹರವಾಳ, ಅಮೃತ ಡಿಗ್ಗಿ, ನಿಂಗಪ್ಪ ಸಾಗನೂರ, ಮಲ್ಲಿಕಾರ್ಜುನ ಪೂಜಾರಿ, ಶರಣು ಜಮಾದಾರ, ಬಸು ಬಿದನೂರ, ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ