ನೆಹರು ಪುತ್ಥಳಿ ಸೂಕ್ತ ಸ್ಥಳದಲ್ಲಿ ಪ್ರತಿಷ್ಠಾಪಿಸಿ

Team Udayavani, Nov 14, 2021, 9:36 AM IST

1neharu

ಶಹಾಬಾದ: ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ಮಾಜಿ ಪ್ರಧಾನಿ ಜವಾಹರಲಾಲ ನೆಹರು ಪುತ್ಥಳಿ ಸದಾಕಾಲ ನೋಡುಗರ ಗಮನ ಸೆಳೆಯುತ್ತಲೇ ಇದ್ದು, ಇದನ್ನು ಸಮರ್ಪಕ ಜಾಗದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಪ್ರಜ್ಞಾವಂತರು ಒತ್ತಾಯಿಸಿದ್ದಾರೆ.

ಈಗಿನ ಸಮುದಾಯ ಆರೋಗ್ಯ ಕೇಂದ್ರದ ಸ್ಥಳ ಮೊದಲು ಪುರಸಭೆಯ ಉದ್ಯಾನವನ ಆಗಿತ್ತು. ಆಗ ನೆಹರು ಪುತ್ಥಳಿಯನ್ನು ಸಾರ್ವಜನಿಕರ ಆಕರ್ಷಣೆಗಾಗಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಮುಂದೆ ಇದೇ ಉದ್ಯಾನವನ ನೆಹರು ಉದ್ಯಾನವನ (ನೆಹರು ಗಾರ್ಡನ್‌) ಆಗಿ ಪರಿವರ್ತನೆ ಆಗಿತ್ತು. ಆನಂತರ ಉದ್ಯಾನವನದ ಸ್ಥಳವನ್ನು ಆಸ್ಪತ್ರೆಯ ಕಟ್ಟಡದ ನಿರ್ಮಾಣಕ್ಕಾಗಿ ಆಗಿನ ಪುರಸಭೆಯವರು ಆರೋಗ್ಯ ಇಲಾಖೆಗೆ ಬಿಟ್ಟು ಕೊಟ್ಟಿದ್ದರು.

ಮೂರು ದಶಕಗಳ ಹಿಂದಿನ ನೆಹರು ಉದ್ಯಾನವನದಲ್ಲಿರುವ ಗಿಡ, ಮರ, ಕಾರಂಜಿ ಹಾಗೂ ಗ್ರಂಥಾಲಯವನ್ನು ತೆರವುಗೊಳಿಸಲಾಯಿತು. ಆದರೆ ನೆಹರು ಪುತ್ಥಳಿ ಮಾತ್ರ ಹಾಗೇ ಉಳಿಯಿತು. ಪುತ್ಥಳಿ ಕಟ್ಟಡದೊಳಗೆ ಬಂದರೂ ಅದನ್ನು ಸ್ಥಳಾಂತರಿಸುವ ಗೋಜಿಗೆ ಗುತ್ತಿಗೆದಾರ ಹಾಗೂ ಪುರಸಭೆ ಅಧಿಕಾರಿಗಳು ಹೋಗಲಿಲ್ಲ. ಕಟ್ಟಡ ಸಂಪೂರ್ಣ ನಿರ್ಮಾಣವಾದರೂ ನೆಹರು ಮೂರ್ತಿಯನ್ನಿಟ್ಟೇ ಉದ್ಘಾಟನೆ ಮಾಡಲಾಯಿತು. ಅಂದಿನಿಂದ ಇಂದಿನ ವರೆಗೆ ನೆಹರು ಮೂರ್ತಿ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ಇದೆ.

ನವೆಂಬರ್‌ 14 ನೆಹರು ಜನ್ಮದಿನ. ಆ ದಿನ ಮಾತ್ರ ಮಾಲಾರ್ಪಣೆ ಮಾಡಲು ಅವರ ನೆನಪಾಗುತ್ತದೆ. ಉಳಿದ ದಿನವೂ ಅವರನ್ನು ಸ್ಮರಿಸುವಂತೆ ಆಗಲು ಮೂರ್ತಿಯನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ, ಪ್ರತಿಷ್ಠಾಪಿಸಬೇಕು ಎಂದು ಕಾಂಗ್ರೆಸ್‌ ಮುಖಂಡರಾದ ನಾಗಣ್ಣ ರಾಂಪೂರೆ, ರಾಜೇಶ ಯನಗುಂಟಿಕರ್‌ ಆಗ್ರಹಿಸಿದ್ದಾರೆ.

ರಸ್ತೆ ಅಗಲೀಕರಣವಾಗಿ ಸುಮಾರು ಎಂಟು ವರ್ಷಗಳಾಗಿವೆ. ಅಂದು ವಿವಿಧ ವೃತ್ತಗಳಲ್ಲಿ ತೆರವು ಮಾಡಿದ ಗಾಂಧೀಜಿ, ಲಾಲಬಹದ್ದೂರ ಶಾಸ್ತ್ರೀ ಮೂರ್ತಿಗಳನ್ನು ಬಟ್ಟೆ ಕಟ್ಟಿ ನಗರಸಭೆಯ ಕೋಣೆಯೊಂದರಲ್ಲಿ ಇಡಲಾಗಿದೆ. ಈ ಎಲ್ಲ ಮೂರ್ತಿಗಳ ಜತೆಗೆ ನೆಹರು ಮೂರ್ತಿಯನ್ನು ಸೂಕ್ತ ಸ್ಥಳದಲ್ಲಿ ಪ್ರತಿಷ್ಠಾಪಿಸಬೇಕು. -ಲೋಹಿತ್‌ ಕಟ್ಟಿ, ಸಾಮಾಜಿಕ ಚಿಂತಕ

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13thefting

ಕಲಬುರಗಿ: ಅಂಗಡಿಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ

11karnataka

ಕ್ಷಯರೋಗ ಮುಕ್ತ ಕರ್ನಾಟಕಕ್ಕೆ ಕೈಜೋಡಿಸಿ

10thefts

ಕಳ್ಳ ಸಹೋದರರ ಸೆರೆ: ಐದು ಬೈಕ್‌ ಜಪ್ತಿ

9sheeps

ಹಳ್ಳದ ನೀರು ಕುಡಿದು 10 ಕುರಿ ಸಾವು

8road

ಯಡ್ರಾಮಿ ತಾಲೂಕಾದ್ರೂ ಸುಧಾರಿಸಿಲ್ಲ ರಸ್ತೆ ಸ್ಥಿತಿ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.