ಪ್ರವಾಸ ಅನುಮತಿ ಪತ್ರಕ್ಕೆ ಜನರ ಪರದಾಟ

ರಜೆ ದಿನವಾದ ರವಿವಾರವೂ ಜಿಲ್ಲಾಧಿಕಾರಿ ಕಚೇರಿ ಬಳಿ ಬಂದಿದ್ದ ಜನತೆ

Team Udayavani, May 4, 2020, 10:39 AM IST

04-May-01

ಕಲಬುರಗಿ: ಬೆಂಗಳೂರಿನಿಂದ ಜಿಲ್ಲೆಯ ವಲಸೆ ಕಾರ್ಮಿಕರು ರವಿವಾರ ಸಾರಿಗೆ ಬಸ್‌ ಮೂಲಕ ನಗರಕ್ಕೆ ಬಂದಿಳಿದರು.

ಕಲಬುರಗಿ: ಲಾಕ್‌ಡೌನ್‌ನಲ್ಲಿ ಸಿಲುಕಿರುವ ನಾಗರಿಕರು ತಮ್ಮ ಊರು ಮತ್ತು ಕಾರ್ಯ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಸಕ್ಕೆ ಅನುಮತಿ ಪತ್ರ ನೀಡುತ್ತಾರೆ ಎನ್ನುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ರಜೆ ದಿನವಾದ ರವಿವಾರವೂ ಸಾಕಷ್ಟು ಜನರು ಸೇರಿದ್ದರು.

ಸರ್ಕಾರ ಅಂತರ್‌ ಜಿಲ್ಲಾ ಮತ್ತು ಅಂತಾರಾಜ್ಯ ಪ್ರವಾಸಕ್ಕೆ ಅವಕಾಶ ಕಲ್ಪಿಸಿದೆ. ಜಿಲ್ಲೆಯಿಂದ ಹೊರ ಜಿಲ್ಲೆ ಅಥವಾ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕೈಗೊಳ್ಳಬೇಕಾದರೆ ಜಿಲ್ಲಾಡಳಿತದಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಗುರುತಿನ ಚೀಟಿ ಒದಗಿಸಿ, ನಿರ್ದಿಷ್ಟ ಕಾರಣ ನೀಡಿದವರಿಗೆ ಮಾತ್ರ ಪ್ರವಾಸದ ಅನುಮತಿ ಪತ್ರ ದೊರೆಯಲಿದೆ. ಇದನ್ನರಿತ ಹಲವರು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಲಗ್ಗೆ ಇಟ್ಟಿದ್ದರು. ರವಿವಾರ ರಜೆ ದಿನವಾಗಿದ್ದರಿಂದ ಯಾವುದೇ ಅಧಿಕಾರಿಗಳು ಬಂದಿರಲಿಲ್ಲ. ವಲಸೆ ಕಾರ್ಮಿಕರು ಮಾತ್ರವಲ್ಲದೇ ಬೆಂಗಳೂರು, ಬೆಳಗಾವಿ, ಬಳ್ಳಾರಿ, ಪುಣೆ ಮುಂತಾದ ಕಡೆಗಳಿಗೆ ಸಂಚರಿಸಲು ಅನುಮತಿ ಕೋರಲು ಬಂದಿದ್ದರು. ಕಚೇರಿ ಕಾವಲುಗಾರರನ್ನು ವಿಚಾರಿದಾಗ “ಸಾಹೆಬ್ರು ಮಧ್ಯಾಹ್ನ 3 ಗಂಟೆಗೆ ಬರಲಿದ್ದಾರೆ’ ಎಂದಷ್ಟೇ ಹೇಳಿದರು. ಹೀಗಾಗಿ ಹಲವರು ಅಧಿಕಾರಿಗಳ ದಾರಿ ಕಾಯುತ್ತಾ ಅಲ್ಲೇ ಕುಳಿತ್ತಿದ್ದರೆ, ಮತ್ತೆ ಕೆಲವರು ನಿರಾಸೆಯಿಂದ ಮರಳುತ್ತಿರುವ ದೃಶ್ಯ ಕಂಡು ಬಂತು.

“ಮಹಾರಾಷ್ಟ್ರದ ಪುಣೆಯಲ್ಲಿ ಭವಿಷ್ಯ ಹೇಳುವ ಕಾಯಕ ಮಾಡುತ್ತಿದ್ದು, ಕುಟುಂಬ ಸಮೇತವಾಗಿ ಅಲ್ಲೇ ವಾಸುತ್ತಿದ್ದೇವೆ. ಮಾ.16ರಂದು ಕೆಲಸದ ನಿಮಿತ್ತ ನಾನು ಸೇರಿ ಆರು ಜನರು ಸ್ವಗ್ರಾಮಕ್ಕೆ ಬಂದಿದ್ದೇವೆ. ಲಾಕ್‌ಡೌನ್‌ ಜಾರಿಯಾದ ಪರಿಣಾಮ ಪುಣೆಗೆ ಹೋಗಲು ಆಗಲಿಲ್ಲ. ಅಲ್ಲಿ ಪತ್ನಿ, ಮಕ್ಕಳು ಸಿಲುಕಿದ್ದಾರೆ. ಇದರಿಂದ ಆತಂಕ ಮನೆ ಮಾಡಿದೆ’ ಎಂದು ತಾಲೂಕಿನ ಬೋಳವಾಡಿ ಗ್ರಾಮದ ಮನೋಜ್‌ ಜೋಷಿ, ಸುಂದರ ಜೋಷಿ ಅಳಲು ತೋಡಿಕೊಂಡರು. ಎಡಿಸಿಗೆ ಜವಾಬ್ದಾರಿ: ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಹೋಗುವವರಿಗೆ ಜಿಲ್ಲಾಡಳಿತದಿಂದ ಅನುಪತಿ ಪತ್ರ ನೀಡಲಾಗುತ್ತದೆ. ಅನುಮತಿ ಮತ್ರ ನೀಡಲು ಅಪಾರ ಜಿಲ್ಲಾಧಿಕಾರಿಗೆ ಜವಾಬ್ದಾರಿ ವಹಿಸಲಾಗಿದೆ.

ನಿಖರ ದಾಖಲೆ ಪರಿಶೀಲಿಸಿ ಪಾಸ್‌ ನೀಡಲಾಗುತ್ತದೆ ಎನ್ನುತ್ತಾರೆ ಜಿಲ್ಲಾಧಿಕಾರಿ ಶರತ್‌ ಬಿ. ಜಿಲ್ಲೆಯಲ್ಲಿ ಹೊರ ರಾಜ್ಯಗಳ 141 ವಲಸೆ ಕಾರ್ಮಿಕರು ಜಿಲ್ಲಾಡಳಿತ ಆಶ್ರಯದಲ್ಲಿ ಇದ್ದಾರೆ. ಹೊರ ರಾಜ್ಯಗಳ ಪ್ರವಾಸ ಸಂಬಂಧ ಸರ್ಕಾರ ರಾಜ್ಯ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಿಸಿದೆ. ಹೊರ ಹೋಗುವರ ಪಟ್ಟಿಯನ್ನು ನೋಡಲ್‌ ಅಧಿಕಾರಿಗಳಿಗೆ ರವಾನಿಸಲಾಗುತ್ತದೆ. ಅವರ ಮಾರ್ಗಸೂಚಿಯಂತೆ ತೆರಳಲು ಅವಕಾಶ ಕಲ್ಪಿಸಲಾಗುತ್ತದೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬೇಡಿಕೆ ಅನುಸಾರ ಬಸ್‌: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರೆಡ್‌ ಝೋನ್‌, ಆರೇಂಜ್‌ ಝೋನ್‌ನಲ್ಲಿ ಜಿಲ್ಲಾಡಳಿತ ಆದೇಶ ಅನುಸಾರ ಬಸ್‌ ಸಂಚಾರ ನಡೆಯಲಿದೆ. ಕಲಬುರಗಿ ಆರೆಂಜ್‌ ಝೋನ್‌ನಲ್ಲಿದ್ದು, ಹೊರ ಜಿಲ್ಲೆಗಳಿಗೆ ಹೋಗುವವರ ಪಟ್ಟಿ ನೀಡಿದಾಗ ಮಾತ್ರ ಬಸ್‌ ಒದಗಿಸಲಾಗುತ್ತದೆ ಎಂದು ಹೇಳುತ್ತಾರೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸೀನ್‌.

ಟಾಪ್ ನ್ಯೂಸ್

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ತಯುಇಕಮನಬವಚಷಱ

ಖರ್ಗೆದ್ವಯರಿಗಾಗಿ ದತ್ತ ದೇಗುಲದಲ್ಲಿ ಪೂಜೆ

ಎರತಯುಇಕಜನಬವಚಷ

ಶಿಕ್ಷಣ ಇಲಾಖೆ ಆದೇಶ ಹಿಂಪಡೆಯಲು ಆಗ್ರಹ

ಯುಇಒಇಉಯತರದಸಅ

ಪ್ರಥಮ ಪ್ರಜೆ ಆಯ್ಕೆಗೆ ಮೀನಮೇಷ

ಹಗ್ದ್ಗುಯಹಗ

ಪ್ರಧಾನಿ-ಆದಿತ್ಯನಾಥರಿಂದ ಕಾಶಿ ಕ್ಷೇತ್ರ ವಿಶ್ವ  ಪ್ರಸಿ ದ್ಧ : ಡಾ| ಚಂದ್ರಶೇಖರ ಶ್ರೀ

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

shivamogga news

473 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.