ನರೇಗಾ ಕಾಮಗಾರಿ ಚುರುಕಿಗೆ ಕ್ರಮ

ವೈಯಕ್ತಿಕ ಕಾಮಗಾರಿಗೆ ಹೆಚ್ಚು ಒತ್ತುಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ವರದಾನ

Team Udayavani, Apr 25, 2020, 10:51 AM IST

25-April-02

ಕಲಬುರಗಿ: ಸೇಡಂ ತಾಲೂಕಿನ ಮಳಖೇಡ್‌ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಿಸಲಾಯಿತು.

ಕಲಬುರಗಿ: ಲಾಕ್‌ಡೌನ್‌ ಜಾರಿ ಹಿನ್ನೆಲೆಯಲ್ಲಿ ರೈತರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕವಾಗಿ ಕುಸಿತ ಕಂಡಿರುವ ದುಡಿಯುವ ವರ್ಗದ ಜನರ ಕೈಗಳಿಗೆ ಉದ್ಯೋಗ ನೀಡಿ ಹಣದ ನೆರವಾಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನಕ್ಕೆ ತರಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ “ವೈಯಕ್ತಿಕ ಕಾಮಗಾರಿ’ಗಳಿಗೆ ಒತ್ತು ಕೊಡಲಾಗಿದೆ.

ಕಳೆದ ಒಂದು ತಿಂಗಳಿಂದ ಎಲ್ಲ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಕೃಷಿ, ಕೂಲಿ, ಹಮಾಲಿ..ಹೀಗೆ ಸಣ್ಣ-ಪುಟ್ಟ ಕೆಲಸಗಳನ್ನೂ ನೆಚ್ಚಿಕೊಂಡು ಶ್ರಮಿಕರು ಕೆಲಸವಿಲ್ಲದೇ ಕಂಗಾಲಾಗಿದ್ದಾರೆ. ಗ್ರಾಮೀಣ ಭಾಗದ ಜನತೆಗೆ ಜೀವನ ನಿರ್ವಹಣೆಯೇ ಸವಾಲಾಗಿ ಪರಿಣಮಿಸಿದೆ. ಅಲ್ಲದೇ, ದೂರದ ನಗರ, ಪಟ್ಟಣಗಳಿಗೆ ತೆರಳಿದ್ದ ಲಕ್ಷಾಂತರ ಜಿಲ್ಲೆಗೆ ಮರಳಿ ಬಂದಿದ್ದಾರೆ. ಇದನ್ನು ಮನಗಂಡಿರುವ ಸರ್ಕಾರ ಕೊರೊನಾ ಆತಂಕದ ನಡುವೆಯೂ ನರೇಗಾ ಯೋಜನೆ ಅನುಷ್ಠಾನ ಚುರುಕುಗೊಳಿಸಿದೆ.

ಜಿಲ್ಲೆಯಲ್ಲಿ ಒಟ್ಟು 263 ಗ್ರಾಪಂಗಳ ಪೈಕಿ ಈಗಾಗಲೇ 191 ಗ್ರಾಪಂಗಳ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಡಿಮೆ ಕೂಲಿಕಾರರು ಸೇರಿರುವ ಹೊಲ, ಕೆರೆಗಳ ಬದುವು ನಿರ್ಮಾಣ, ಕೃಷಿ ಹೊಂಡ, ಮರಗಳ ನೆಡುವುದು ಸೇರಿದಂತೆ ವೈಯಕ್ತಿಕ ಕಾಮಗಾರಿಗಳನ್ನು ನೀಡಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.

560 ಹೊಸ ಜಾಬ್‌ ಕಾರ್ಡ್‌: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 2.81 ಲಕ್ಷ ಕುಟುಂಬಗಳಿಗೆ ಜಾಬ್‌ ಕಾರ್ಡ್‌ಗಳನ್ನು ನೀಡಲಾಗಿದೆ. 6.09 ಲಕ್ಷ ಜನರ ಕೂಲಿಕಾರರು ಇದ್ದಾರೆ. ಪ್ರಸಕ್ತ ಎಲ್ಲ ತಾಲೂಕುಗಳಲ್ಲೂ ನರೇಗಾ ಯೋಜನೆ ಅನುಷ್ಠಾನ ತರಲಾಗಿದ್ದು, ಇದೇ ತಿಂಗಳು 560 ಹೊಸ ಜಾಬ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಹೊಸದಾಗಿ 1,214 ಜನ ಕೂಲಿ ಕಾರ್ಮಿಕರು ಸೇರ್ಪಡೆಯಾಗಿದ್ದಾರೆ.

ಅಫಜಲಪುರ ತಾಲೂಕಿನ 20 ಗ್ರಾಪಂಗಳ ವ್ಯಾಪ್ತಿಯಲ್ಲಿ 84 ಕಾಮಗಾರಿಗಳನ್ನು ಆರಂಭಿಸಲಾಗಿದೆ. 246 ಕಾರ್ಮಿಕರು ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಆಳಂದ ತಾಲೂಕಿನ 30 ಗ್ರಾಪಂಗಳ ವ್ಯಾಪ್ತಿಯಲ್ಲಿ 119 ಕಾಮಗಾರಿಗಳು ಕೈಗೆತ್ತಿಕೊಂಡಿದ್ದು, 791 ಜನರು ದುಡಿಯುತ್ತಿದ್ದಾರೆ. ಚಿಂಚೋಳಿ ತಾಲೂಕಿನ 19 ಗ್ರಾಪಂಗಳ ವ್ಯಾಪ್ತಿಯಲ್ಲಿ 70 ಕಾಮಗಾರಿಗಳು ನಡೆಯುತ್ತಿದ್ದು, 191 ಮಂದಿ ಕೆಲಸ ಮಾಡುತ್ತಿದ್ದಾರೆ. ಚಿತ್ತಾಪುರ ತಾಲೂಕಿನ 30 ಗ್ರಾಪಂಗಳ ವ್ಯಾಪ್ತಿಯಲ್ಲಿ 205 ಕಾಮಗಾರಿಗಳು ನಡೆಯುತ್ತಿದ್ದು, 962 ಕೆಲಸ ಪಡೆದಿದ್ದಾರೆ.

ಜೇವರ್ಗಿ ತಾಲೂಕಿನ 36 ಗ್ರಾಪಂಗಳಲ್ಲಿ 114 ಕಾಮಗಾರಿಗಳು ಪ್ರಾರಂಭವಾಗಿದ್ದು, 680 ಕೂಲಿಕಾರರು ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ 33 ಗ್ರಾಪಂಗಳ ವ್ಯಾಪ್ತಿಯಲ್ಲಿ 198 ಕಾಮಗಾರಿಗಳು ಪ್ರಗತಿಯಲ್ಲಿದ್ದು, 1,271 ಮಂದಿ ಕೂಲಿ ಪಡೆದುಕೊಂಡಿದ್ದಾರೆ. ಸೇಡಂ ತಾಲೂಕಿನ 23 ಗ್ರಾಪಂಗಳ ವ್ಯಾಪ್ತಿಯಲ್ಲಿ 128 ಕಾಮಗಾರಿ ಚಾಲ್ತಿಯಲ್ಲಿದ್ದು, 729 ಜನರು ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆ ಜಿಲ್ಲಾದ್ಯಂತ ನರೇಗಾ ಯೋಜನೆಯಡಿ 4,870 ಜನರಿಗೆ ಕೆಲಸ ಕಲ್ಪಿಸಲಾಗಿದೆ.

ಕೆಲಸಕ್ಕೆ ಬರಲು ಹಿಂದೇಟು: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರಿದಿದೆ. ಅದರಲ್ಲೂ ಗ್ರಾಮೀಣಕ್ಕೂ ಸೋಂಕು ಹಬ್ಬಿದ್ದು, ಜನರನ್ನು ಚಿಂತೆಗೀಡು ಮಾಡಿದೆ. ಆದ್ದರಿಂದ ಕೆಲವು ಗ್ರಾಪಂಗಳ ವ್ಯಾಪ್ತಿಯಲ್ಲಿ ಕೆಲಸಕ್ಕೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳುತ್ತಾರೆ. ಕಾಮಗಾರಿ ಸ್ಥಳದಲ್ಲಿ ಪ್ರತಿ ದಿನ ಕಾರ್ಮಿಕರಿಗೆ ಕೋವಿಡ್ ಕುರಿತ ಪ್ರತಿಜ್ಞಾವಿಧಿ ಬೋಧಿಸಲಾಗುತ್ತದೆ. ಎಲ್ಲರಿಗೂ ಮಾರ್ಸ್‌, ಸ್ಯಾನಿಟೈಸರ್‌ ಹಾಗೂ ಸಾಬೂನು ಸೋಂಕು ಹರಡುವಿಕೆ ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾ ನರೇಗಾ ಯೋಜನೆಯ ಐಇಸಿ ಸಂಯೋಜಕ ಸಿದ್ದರಾಮ ಕೆರೂರ.

3.76 ಲಕ್ಷ ಜನ ವಾಪಾಸ್‌:
ಗುಳೆ ಮತ್ತು ಉದ್ಯೋಗ ಅರಸಿ ಬೆಂಗಳೂರು, ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಅಂತಾರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ತೆರಳಿದ್ದ ಸುಮಾರು 3.76 ಲಕ್ಷ ಜನರು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಗೆ ಮರಳಿ ಆಗಮಿಸಿದ್ದರೆಂಬ ಮಾಹಿತಿಯನ್ನು ಜಿಲ್ಲಾಡಳಿತ ಕಲೆ ಹಾಕಿದೆ. ಇದರಲ್ಲಿ ಕೂಲಿ ಕಾರ್ಮಿಕರ ಸಂಖ್ಯೆಯೇ ಅಧಿಕ ಸಾಧ್ಯತೆ ಇದೆ.

ಸೋಂಕಿತ ಗ್ರಾಮಗಳಲ್ಲಿಲ್ಲ ನರೇಗಾ
ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಗ್ರಾಮಗಳಲ್ಲಿ ಸದ್ಯಕ್ಕೆ ನರೇಗಾ ಅನುಷ್ಠಾನ ಮಾಡುತ್ತಿಲ್ಲ. ಕಲಬುರಗಿ ತಾಲೂಕಿನ ಕವಲಗಾ (ಬಿ), ಸರಡಗಿ (ಬಿ) ಮತ್ತು ಪಟ್ಟಣ ಗ್ರಾಮಗಳಲ್ಲಿ ಸೋಂಕಿತ ವ್ಯಕ್ತಿಗಳ “ಕರಿ ನೆರಳು’ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿ ಅನುಷ್ಠಾನ ಮಾಡುತ್ತಿಲ್ಲ. ಕೋವಿಡ್ ಸೋಂಕಿನ ಭೀತಿ ಕಡಿಮೆಯಾದ ನಂತರ ಯಥಾಪ್ರಕಾರ ಈ ಗ್ರಾಮಗಳಲ್ಲೂ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಒತ್ತು ಕೊಟ್ಟು ಉದ್ಯೋಗ ನೀಡಲು ಆರಂಭಿಸಲಾಗಿದೆ. ಯಾರು ಕೆಲಸಬೇಕೆಂದು ಮುಂದೆ ಬರುತ್ತಾರೋ ಅವರಿಗೆ ಉದ್ಯೋಗ ಕಲ್ಪಿಸಲಾಗುವುದು. ಸದ್ಯ ಯಾವುದೇ ಟಾರ್ಗೆಟ್‌ ಇಲ್ಲದೇ ಕಾಮಗಾರಿ ಆರಂಭಿಸಲಾಗಿದೆ. ಪ್ರಸ್ತಕ ವರ್ಷ 60 ಲಕ್ಷ ಮಾನವ ದಿನಗಳ ಸೃಜನ ಗುರಿ ಇದೆ.
ಡಾ.ರಾಜಾ ಪಿ.,
ಸಿಇಒ, ಜಿಪಂ

ರಂಗಪ್ಪ ಗಧಾರ

ಟಾಪ್ ನ್ಯೂಸ್

court

‘ವಾಟ್ಸಾಪ್’ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿದ ಮದ್ರಾಸ್ ಹೈಕೋರ್ಟ್‌ ನ್ಯಾಯಾಧೀಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಸುಳ್ಯ: ಲೈಂಗಿಕ ದೌರ್ಜನ್ಯ;  ಯುವಕನ ಬಂಧನ

ಸುಳ್ಯ: ಲೈಂಗಿಕ ದೌರ್ಜನ್ಯ; ಯುವಕನ ಬಂಧನ

1-asdsad

ನಿರುದ್ಯೋಗದಿಂದ ಆತ್ಮಹತ್ಯೆ; ಆತ್ಮಾವಲೋಕನ ಮಾಡಿಕೊಳ್ಳಬೇಕು: ಡಿ.ಕೆ ಶಿವಕುಮಾರ್

ಹಿಜಾಬ್ ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಹಿಜಾಬ್, ಹಲಾಲ್ ಗೆ ಸರ್ಕಾರದ ಕುಮ್ಮಕ್ಕಿಲ್ಲ : ನಳಿನ್ ಕುಮಾರ್ ಕಟೀಲ್

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

ಸೊರಬದಲ್ಲಿ ಸಂಭ್ರಮದಿಂದ ಜರುಗಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ

1-asdasdasd

ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್‌ಜಿಟಿ ಸೂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ct-ravi

ಪಠ್ಯದಲ್ಲಿ ಹೆಗಡೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು?: ಸಿ.ಟಿ.ರವಿ

12ambedkar

ಅಂಬೇಡ್ಕರ್‌ ಜಯಂತಿ ಚಿಂತನೆಗೆ ವೇದಿಕೆಯಾಗಲಿ

11road

ಅಣವಾರ-ಮೋತಕಪಳ್ಳಿ ರಸ್ತೆ ಸುಧಾರಣೆಗೆ ಕ್ರಮ

ವಿಧಾನಸಭೆ ಚುನಾವಣೆ; ಸ್ಥಳೀಯರಿಗೆ ಆದ್ಯತೆ ನೀಡಿ

9hospital

ವಾಡಿ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಸೌಲಭ್ಯ

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

court

‘ವಾಟ್ಸಾಪ್’ ಮೂಲಕ ಪ್ರಕರಣ ಇತ್ಯರ್ಥ ಗೊಳಿಸಿದ ಮದ್ರಾಸ್ ಹೈಕೋರ್ಟ್‌ ನ್ಯಾಯಾಧೀಶ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ ಭದ್ರತೆ ಹೆಚ್ಚಳ: ಪಾಕ್‌ ಸರ್ಕಾರ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

ಮಳೆ ಆರ್ಭಟಕ್ಕೆ ನಷ್ಟವಾಗಿರುವ ಬೆಳೆ ಸಮೀಕ್ಷೆ ನಡೆಸಿ

22

ಪರಿಶಿಷ್ಟ ಜಾತಿ-ಪಂಗಡ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.