ಕೂಡಲಸಂಗಮ ಶರಣ ಮೇಳಕ್ಕೆ ಲಿಂಗಾಯಿತ ಮಹಾಸಭಾ ಆಹ್ವಾನ

Team Udayavani, Jan 7, 2022, 9:57 AM IST

1sharana

ಕಲಬುರಗಿ: ಬಸವ ಧರ್ಮ ಪೀಠದಿಂದ ಜ.12ರಿಂದ 14ರ ವರೆಗೆ ಕೂಡಲ ಸಂಗಮದಲ್ಲಿ ಹಮ್ಮಿಕೊಂಡಿರುವ 35ನೇ ಶರಣ ಮೇಳದಲ್ಲಿ ಜಾಗತಿಕ ಲಿಂಗಾಯಿತ ಮಹಾಸಭಾ ನೇತೃತ್ವದಲ್ಲಿ ಜಿಲ್ಲೆಯ ಬಸವ ಪರ ಸಂಘಟನೆಯವರು ಭಾಗವಹಿಸುತ್ತಿದ್ದು, ಎಲ್ಲ ಬಸವ ಭಕ್ತರು ಪಾಲ್ಗೊಳ್ಳಬೇಕೆಂದು ಮಹಾಸಭಾ ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ಜಿಲ್ಲಾಧ್ಯಕ್ಷ ಪ್ರಭುಲಿಂಗ ಮಹಾ ಗಾಂವಕರ್‌ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1988ರಲ್ಲಿ ಶರಣ ಮೇಳ ಆರಂಭವಾಗಿದ್ದು, ನೆರೆಯ ರಾಜ್ಯ ಗಳಾದ ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡಿನಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಜ.12ರಂದು ರಾಷ್ಟ್ರೀಯ ಬಸವ ದಳದ ಅಧಿವೇಶನ ನಡೆಯಲಿದೆ. ಜ.13ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶರಣ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

1996ರಲ್ಲಿ ಬಸವಣ್ಣನವರ ವಚನಗಳ ಅಂಕಿತ ನಾಮದಲ್ಲಿ “ಕೂಡಲ ಸಂಗಮ’ದ ಬದಲು “ಲಿಂಗದೇವ’ ಎಂದು ಡಾ| ಮಾತೆ ಗಂಗಾದೇವಿ ಬದಲಾವಣೆ ಮಾಡಿದ್ದರು. ಇದರಿಂದ ಶರಣ ಮೇಳದಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗಿತ್ತು. ಇದೀಗ ಲಿಂಗಾಯಿತ ಧರ್ಮ ಸಂಘಟನೆ ಹಿತದೃಷ್ಟಿಯಿಂದ ಮತ್ತು ನ್ಯಾಯಾಲಯದ ನಿರ್ದೇಶನದ ಮೇರೆಗೆ “ಲಿಂಗದೇವ’ ಅಂಕಿತವನ್ನು ಪುನರ್‌ ಪರಿಶೀಲಿಸಿ ಹಿಂದಕ್ಕೆ ಪಡೆದಿರುವುದು ಬಸವ ಭಕ್ತರಿಗೆಲ್ಲ ಸಂತಸ ತಂದಿದೆ ಎಂದು ಹೇಳಿದರು.

ಅಂಕಿತ ನಾಮ ಪುನರ್‌ ಪರಿಶೀಲನೆಯಿಂದ ಲಿಂಗಾಯಿತ ಸ್ವತಂತ್ರ ಧರ್ಮಕ್ಕೂ ಬಲ ಬಂದಂತೆ ಆಗಿದೆ. ಜತೆಗೆ ಎಲ್ಲ ಬಸವ ಸಂಘಟನೆಗಳು ಒಗ್ಗಟ್ಟಾಗಿ ಹೋಗಬೇಕೆನ್ನುವ ಸದುದ್ದೇಶವನ್ನು ಹೆಚ್ಚಿಸಿದೆ. ಹೀಗಾಗಿ ಈ ಬಾರಿಯ ಶರಣ ಮೇಳದಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ. ಮೇಳದಲ್ಲಿ ಹೆಚ್ಚು ಜನ ಪಾಲ್ಗೊಳ್ಳಲು ಸರ್ಕಾರ ಅವಕಾಶ ನೀಡಿದರೆ, ಕಲಬುರಗಿಯಿಂದಲೇ 25 ಬಸ್‌ಗಳಲ್ಲಿ ಜನರು ತೆರಳಲಿದ್ದೇವೆ ಎಂದು ಹೇಳಿದರು.

ಮಹಾಸಭಾ ಮಹಾ ಪ್ರಧಾನ ಕಾರ್ಯ ದರ್ಶಿ ಆರ್‌.ಜಿ.ಶೆಟಗಾರ ಮಾತನಾಡಿ, ಲಿಂಗಾಯಿತ ಸ್ವತಂತ್ರ ಧರ್ಮದ ಬಗ್ಗೆ ಕರ್ನಾ ಟಕ ಮಾತ್ರವಲ್ಲದೇ ಪಕ್ಕದ ರಾಜ್ಯ ಗಳಲ್ಲೂ ಜಾಗೃತಿ ಹೆಚ್ಚಾಗಿದೆ. ಇತ್ತೀಚೆಗೆ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಲ್ಲದೇ, ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಹೈದ್ರಾಬಾದ್‌ನಲ್ಲಿ ಲಿಂಗಾಯಿತ ಪ್ರತ್ಯೇಕ ಧರ್ಮಕ್ಕಾಗಿ ಒತ್ತಾಯಿಸಿ ಬೃಹತ್‌ ಸಮಾವೇಶ ಆಯೋಜಿ ಸುವ ಉದ್ದೇಶವಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಪದಾಧಿ ಕಾರಿಗಳಾದ ಅಶೋಕ ಘೂಳಿ, ಬಸವರಾಜ ಮೊರಬದ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.