ಮೊರಾರ್ಜಿ ಮಕ್ಕಳ ಊಟಕ್ಕೆ ರೊಟ್ಟಿ ಕೊರತೆ

Team Udayavani, Dec 10, 2021, 12:09 PM IST

10rotti

ವಾಡಿ: ಸುಸಜ್ಜಿತ ಭವ್ಯ ಕಟ್ಟಡದಲ್ಲಿ ತರಗತಿಗಳ ಪಾಠ ಆಲಿಸುತ್ತಿರುವ ಅಲ್ಪಸಂಖ್ಯಾತ ಮಕ್ಕಳ ಊಟಕ್ಕೆ ಪೆಟ್ಟು ಬಿದ್ದಿದೆ. ಅಡುಗೆ ಸಿಬ್ಬಂದಿ ಕೊರತೆ ಕಾರಣ ಊಟದ ತಟ್ಟೆಯಿಂದ ರೊಟ್ಟಿ ಕಣ್ಮರೆಯಾಗಿದೆ.

ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ರಿಂದ 10ನೇ ತರಗತಿವರೆಗಿನ ಸುಮಾರು 250 ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎಲ್ಲ ಸವಲತ್ತು ಚೆನ್ನಾಗಿದ್ದರೂ ಅಗತ್ಯಕ್ಕೆ ತಕ್ಕಷ್ಟು ಅಡುಗೆ ಸಿಬ್ಬಂದಿ ನೇಮಕವಾಗದ ಕಾರಣ ರೊಟ್ಟಿ ವಿತರಣೆಯಲ್ಲಿ ತೊಡಕುಂಟಾಗಿದೆ.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡಿ ಗ್ರೂಪ್‌ ನೌಕರರ ನೇಮಕವಾಗಿಲ್ಲ. 11 ಸಿಬ್ಬಂದಿ ನೇಮಕವಾಗಬೇಕಿದ್ದ ಜಾಗದಲ್ಲಿ ಕೇವಲ ಏಳು ಮಂದಿಯನ್ನು ಜಿಲ್ಲಾಡಳಿತ ನೇಮಿಸಿದೆ. ಇವರಲ್ಲಿ ಕೇವಲ ಮೂವರು ಅಡುಗೆಗೆ ನೇಮಕವಾಗಿದ್ದು, ಇಬ್ಬರು ಅಡುಗೆಯವರಾದರೆ ಒಬ್ಬರು ಅಡುಗೆ ಸಹಾಯಕರಾಗಿದ್ದಾರೆ. ಹಾಜರಾತಿ ಇರುವ 190 ವಿದ್ಯಾರ್ಥಿಗಳಿಗೆ ತಲಾ ಎರಡು ರೊಟ್ಟಿಯಂತೆ ಪ್ರತಿದಿನ ಮಧ್ಯಾಹ್ನ ಮತ್ತು ಸಂಜೆ ಊಟಕ್ಕೆ ಸುಮಾರು 400 ರೊಟ್ಟಿ ತಟ್ಟಬೇಕಾಗುತ್ತದೆ. ಮಕ್ಕಳ ಹಾಜರಾತಿ ಪೂರ್ಣ ಪ್ರಮಾಣದಲ್ಲಿದ್ದರೆ ದಿನಕ್ಕೆ ಸಾವಿರ ರೊಟ್ಟಿ ತಟ್ಟಬೇಕಾಗುತ್ತದೆ. ಇಬ್ಬರು ಮಹಿಳೆಯರಿಂದ ಇಷ್ಟೊಂದು ರೊಟ್ಟಿ ತಟ್ಟಲು ಸಾಧ್ಯವಾಗದೆ ಕೇವಲ ಒಂದು ರೊಟ್ಟಿ ಮಾತ್ರ ಮಕ್ಕಳಿಗೆ ನೀಡಲಾಗುತ್ತಿದೆ. ಇನ್ನು ಊಟದ ಕೋಣೆಗಳಿಗೆ ಅಗತ್ಯವಿರುವ ಎಲ್ಲ ಅಡುಗೆ ಪದಾರ್ಥಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪೂರೈಸಲಾಗಿದೆ.

ಪ್ರತಿ ದಿನವೂ ಮಕ್ಕಳಿಗೆ ಕೇಳಿದಷ್ಟು ಪಲ್ಲೆ ಮತ್ತು ಅನ್ನ ನೀಡಲಾಗುತ್ತಿದೆ. ಆದರೆ ನೀಡಬೇಕಾದ ಎರಡು ಚಪಾತಿ ಅಥವಾ ಜೋಳದ ರೊಟ್ಟಿಯಲ್ಲಿ ಒಂದನ್ನು ಮಾತ್ರ ವಿತರಿಸಲಾಗುತ್ತಿದೆ. ಅಡುಗೆ ಸಿಬ್ಬಂದಿ ಕೊರತೆ ವರ್ಷದಿಂದ ಮುಂದುವರಿದಿದ್ದರೂ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನ ಹರಿಸಿಲ್ಲ ಎಂಬುದು ಮಕ್ಕಳ ಪಾಲಕರು ಹಾಗೂ ಗ್ರಾಮಸ್ಥರ ಆರೋಪವಾಗಿದೆ.

ಹೆಚ್ಚಿನ ಅಡುಗೆ ಸಿಬ್ಬಂದಿ ನೇಮಕ ಅಸಾಧ್ಯವಾಗಿರುವ ಕಾರಣ ಇದ್ದವರನ್ನೇ ಬಳಸಿಕೊಂಡು ಮಕ್ಕಳಿಗೆ ಎರಡು ರೊಟ್ಟಿ ವಿತರಿಸುವಂತೆ ಮೊರಾರ್ಜಿ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಆದೇಶ ನೀಡಿದ್ದೇನೆ. ಮಕ್ಕಳ ಊಟಕ್ಕೆ ರೊಟ್ಟಿ ಕೊರತೆಯಾಗದಂತೆ ನೋಡಿಕೊಳ್ಳುತ್ತೇವೆ. -ಮಹೆಮೂದ್‌ ಎಸ್‌., ಜಿಲ್ಲಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಲಬುರಗಿ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.