ಭೂಮಿ ಖರೀದಿ ವಿಳಂಬ: ರೈತರ ಆಕ್ರೋಶ


Team Udayavani, Nov 9, 2021, 1:05 PM IST

13land

ವಾಡಿ: ಸಿಮೆಂಟ್‌ ಉತ್ಪಾದನಾ ಘಟಕ ಸ್ಥಾಪಿಸುವ ಉದ್ದೇಶದಿಂದ ಸಾವಿರಾರು ಎಕರೆ ಭೂಮಿ ಗುರುತಿಸಿ ಖರೀದಿ ಪ್ರಕ್ರಿಯೆ ಅರ್ಧಕ್ಕೆ ಕೈಬಿಡಲಾಗಿದೆ. ಉದ್ಯಮಿಪತಿಗಳ ಕಳ್ಳಾಟದಿಂದಾಗಿ ಸರ್ಕಾರದ ಸಾಲ ಸೌಲತ್ತುಗಳು ಕೈ ತಪ್ಪುತ್ತಿವೆ ಎಂದು ರಾವೂರ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗೆ ಬರೆದ ಪತ್ರವನ್ನು ಗ್ರಾಮಕ್ಕೆ ಭೇಟಿ ನೀಡಿದ ಚಿತ್ತಾಪುರ ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಅವರಿಗೆ ಸಲ್ಲಿಸಿದ ರೈತರು, ಸಿಮೆಂಟ್‌ ಕಂಪನಿಗಳ ಭೂಮಿ ಖರೀದಿ ನೀತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2009ನೇ ಸಾಲಿನಲ್ಲಿ ರಾವೂರು ಗ್ರಾಮಕ್ಕೆ ಕಾಲಿಟ್ಟ ವಿವಿಧ ಸಿಮೆಂಟ್‌ ಕಂಪನಿಗಳು, ಉತ್ಪಾದನಾ ಘಟಕ ಸ್ಥಾಪಿಸಲು ಒಟ್ಟು 2,800 ಎಕರೆ ಭೂಮಿ ಗುರುತಿಸಿದ್ದರು. ಅಂದಿನ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಎಕರೆ ಭೂಮಿಗೆ 9 ಲಕ್ಷ ರೂ. ನಿಗದಿಪಡಿಸಿದ್ದರು. 800 ಎಕರೆ ಭೂಮಿ ಖರೀದಿ ಮಾಡಲಾಯಿತು. ಇನ್ನುಳಿದ 2000 ಎಕರೆ ಭೂಮಿಯ ಮೇಲೆ ಲೀಸ್‌ ಪಡೆದಿರುವ ರೈಮಾಂಡ್ಸ್‌ ಲಿಮಿಟೆಡ್‌ ಸಿಮೆಂಟ್‌ ಕಂಪನಿ, ಕಳೆದ 13 ವರ್ಷಗಳಿಂದ ಭೂಮಿ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸದೆ ಜನರನ್ನು ಗೋಳಾಡಿಸುತ್ತಿದೆ ಎಂದು ಆಪಾದಿಸಿದರು.

ಖರೀದಿ ಮಾಡದಿರುವ ಸಾವಿರಾರು ಎಕರೆ ಭೂಮಿಗೂ ಲೀಸ್‌ ಪಡೆದಿರುವ ಸಿಮೆಂಟ್‌ ಕಂಪನಿ, ಸರ್ಕಾರದ ಕೈಗಾರಿಕಾ ನೀತಿಗಳನ್ನು ಉಲ್ಲಂಘಿಸಿದೆ. ಇದರಿಂದ ಕೃಷಿ ಚಟುವಟಿಕೆ ಮುಂದುವರೆಸಲು ವಿವಿಧ ಸಂಕಷ್ಟಗಳನ್ನು ಎದುರಿಸಬೇಕಾದ ದುಸ್ಥಿತಿ ಎದುರಾಗಿದೆ. ಬೀಜ, ರಸಗೊಬ್ಬರ, ತೈಲ ಸಿಂಪರಣೆ ಇತ್ಯಾದಿ ಅನುಕೂಲಕ್ಕಾಗಿ ನೀಡಲಾಗುವ ಬ್ಯಾಂಕ್‌ ಸಾಲ ಸೌಲಭ್ಯಗಳು ಕೈತಪ್ಪಿವೆ. ಜಮೀನುಗಳ ಮೇಲೆ ಲೀಸ್‌ ಇರುವುದರಿಂದ ಸಾಲ ಕೊಡಲು ಸಾಧ್ಯವಿಲ್ಲ ಎಂದು ಬ್ಯಾಂಕ್‌ ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಸಮತೋಲನ ಮಳೆಯಿಂದ ಬೆಳೆ ನಷ್ಟ ಅನುಭವಿಸುತ್ತಿದ್ದೇವೆ. ಅತ್ತ ಕಂಪನಿ ಭೂಮಿ ಖರೀದಿಗೆ ಮುಂದಾಗುತ್ತಿಲ್ಲ. ಖರೀದಿಸಲಾಗದ ಭೂಮಿಗಳ ಮೇಲಿನ ಲೀಸ್‌ ತೆರವು ಮಾಡುತ್ತಿಲ್ಲ. ಪರಿಣಾಮ ಕೃಷಿ ಸೌಲಭ್ಯಗಳನ್ನು ಪಡೆಯಲಾಗದೆ ಮತ್ತು ಇತರರಿಗೆ ಭೂಮಿ ಮಾರಾಟ ಮಾಡಲಾಗದೆ ಅನ್ಯಾಯಕ್ಕೊಳಗಾಗಿದ್ದೇವೆ. ಕೂಡಲೇ ಕಂಪನಿಯವರು ಗುರಿತಿಸಲಾದ ಭೂಮಿಯನ್ನು ಖರೀದಿಗೆ ಮುಂದಾಗಬೇಕು. ಅಥವ ಜಮೀನುಗಳ ಮೇಲಿನ ಲೀಸ್‌ ತೆರವುಗೊಳಿಸಬೇಕು ಎಂದು ಆಗ್ರಹಿಸಿರುವ ರೈತರು, ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರೈತರಾದ ಗುರುರಾಜ ವೈಷ್ಣವ, ಧರ್ಮರಾಜ ದೇಸಾಯಿ, ಮಹೇಶ ಬಾಳಿ, ಮಲ್ಲಿನಾಥ ಪರೀಟ್‌, ದೇವಿಂದ್ರ ಅಚೋಲಿ, ರಾಮು ಸಕ್ರಿ, ಆದಪ್ಪ ದೇಸಾಯಿ, ಅಂಬ್ರಿàಶ ದೇಸಾಯಿ, ಶರಣು ಪರಹತಾಬಾದ, ಶ್ರವಣಕುಮಾರ ಚವ್ಹಾಣ, ರಮೇಶ ಸಂಗಾವಿ ಮನವಿ ಪತ್ರ ಸಲ್ಲಿಸುವ ನಿಯೋಗದಲ್ಲಿ ಇದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.