ಗ್ರಾಪಂ ಅಧಿಕಾರ ಸದ್ಬಳಕೆ ಮಾಡಿ: ಮಾಜಿ ಶಾಸಕ ಬಿ.ಆರ್‌.ಪಾಟೀಲ

ಅಧಿಕಾರ ವಿಕೇಂದ್ರಿಕರಣ ಮಾಡಿ ಚುನಾಯಿತ ಸದಸ್ಯರಿಗೆ ಅವರ ವ್ಯಾಪ್ತಿಗೆ ತಕ್ಕಂತೆ ಅಧಿಕಾರ ನೀಡಲಾಗಿದೆ.

Team Udayavani, Jul 7, 2021, 6:37 PM IST

Grama

ಆಳಂದ: ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಮಹತ್ವದ್ದುಳ್ಳದ್ದಾಗಿದ್ದು, ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ.ಆರ್‌. ಪಾಟೀಲ ಹೇಳಿದರು. ಪಟ್ಟಣದ ವಿವೇಕ ವರ್ಧಿನಿ ಪಬ್ಲಿಕ್‌ ಶಾಲೆ ಯಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯ್ದ ಗ್ರಾಪಂ ಸದಸ್ಯರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಚೆಕ್‌ ಮೇಲೆ ಸಹಿ ಮಾಡುವ ಅಧಿಕಾರ ದೇಶದ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗಳಿಗಳಿಗೂ ಇಲ್ಲ. ಆ ಅಧಿಕಾರವನ್ನು ಗ್ರಾಪಂ ಅಧ್ಯಕ್ಷರಿಗೆ ನೀಡಲಾಗಿದೆ. ಇದನ್ನು ಅರಿಯಬೇಕು ಎಂದರು.

ದಿನ ಬೆಳಗಾದರೆ ಗ್ರಾಪಂ ಅಧ್ಯಕ್ಷರು ಪಿಡಿಒ ಮನೆ ಬಾಗಿಲಿಗೆ ಹೋಗಿ ನಿಲ್ಲುವುದನ್ನು ಬಿಡಬೇಕು. ಅಧಿಕಾರ ಬಳಸಿಕೊಂಡು ಗ್ರಾಮ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಹೇಳಿದರು. ಗ್ರಾಮಾಭಿವೃದ್ಧಿಗೆ ಗ್ರಾಪಂಗಳೇ ನಿಜವಾದ ಶಕ್ತಿಸೌಧ, ಅಧಿಕಾರ ವಿಕೇಂದ್ರಿಕರಣ ಮಾಡಿ ಚುನಾಯಿತ ಸದಸ್ಯರಿಗೆ ಅವರ ವ್ಯಾಪ್ತಿಗೆ ತಕ್ಕಂತೆ ಅಧಿಕಾರ ನೀಡಲಾಗಿದೆ.

ಗ್ರಾಪಂ, ತಾಪಂ, ಜಿಪಂ ಕ್ಷೇತ್ರಗಳ ಕಾರ್ಯ ನಿರಂತರವಾಗಿ ನಡೆಯುತ್ತದೆ. ಮಾಜಿ ಮುಖ್ಯಮಂತ್ರಿ ದಿ| ರಾಮಕೃಷ್ಣ ಹೆಗಡೆ ಮತ್ತು  ಗ್ರಾಮಿಣಾಭಿವೃದ್ಧಿ ಸಚಿವರಾಗಿದ್ದ ಅಬ್ದುಲ್‌ ನಜೀರಸಾಬ್‌ ದೂರದೃಷ್ಟಿ ಇಟ್ಟುಕೊಂಡು ಗ್ರಾಪಂಗಳಿಗೆ ಹೆಚ್ಚಿನ ಅನುದಾನ, ಅಧಿಕಾರ ನೀಡುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ನೀಡಿದರು ಎಂದರು.

ಚುನಾಯಿತ ಗ್ರಾಪಂ ಸದಸ್ಯರು ಕುಡಿಯುವ ನೀರು, ಬೀದಿ ದೀಪ, ಚರಂಡಿ ಶುಚಿತ್ವ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಬೇಕು. ನರೇಗಾದಲ್ಲಿ ಸಸಿಗಳನ್ನು ನೆಡುವದು, ಹೊಲಗಳಿಗೆ ಹೋಗುವ ದಾರಿ, ನಾಲಾ, ಚೆಕ್‌ ಡ್ಯಾಂ, ಬಾವಿಗಳ ಹೂಳೆತ್ತುವ ಕಾರ್ಯಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಪಂಚಾಯಿತಿ ಪರಿಷತ್‌ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಸತೀಶ ಉಪನ್ಯಾಸ ನೀಡಿ, ಗ್ರಾಪಂ ಅಧ್ಯಕ್ಷರು, ಸದಸ್ಯರು ಶಾಸಕರು, ಸಂಸದರ ಕಡೆ ಮುಖ ಮಾಡದೇ ಗ್ರಾಪಂ ಅನುದಾನವನ್ನೇ ಬಳಸಿ ದಕ್ಷ ಹಾಗೂ ಪ್ರಮಾಣಿಕತೆಯಿಂದ ಸೇವೆ ಮಾಡಿದರೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದರು.

ಮುಖಂಡರಾದ ಶರಣಗೌಡ ಪಾಟೀಲ, ಸತೀಶ ಪನಶಟ್ಟಿ, ಗಣೇಶ ಪಾಟೀಲ, ಮಲ್ಲಿನಾಥ ಪಾಟೀಲ, ರಾಮಚಂದ್ರ ಸುತಾರ, ಶಿವಪುತ್ರಪ್ಪ ಕೊಟ್ಟರಕಿ ಇದ್ದರು. ನಂತರ ಗ್ರಾಪಂಗೆ ಒಂದರಂತೆ ಪಂಚಾಯತ್‌ ರಾಜ್‌ ಕಾಯ್ದೆ, ಸದಸ್ಯರ ಹಕ್ಕು, ಕರ್ತವ್ಯ, ಪಿಡಿಒ ಕೆಲಸ ಕುರಿತ ಪುಸ್ತಕ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.