ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಸಚಿವ ನಿರಾಣಿ ಚಾಲನೆ


Team Udayavani, Jan 27, 2022, 9:55 AM IST

2abulence

ಕಲಬುರಗಿ: ಕಳೆದ ವರ್ಷ 2021ರ ಜನೇವರಿ 26ರಂದು ಲಿಂಗೈಕ್ಯ ಚಂದ್ರಶೇಖರ ಪಾಟೀಲ ರೇವೂರ ಫೌಂಡೇಷನ್‌ ಪ್ರಾರಂಭಿಸಿರುವ ಉಚಿತ ಡಯಾಲಿಸೆಸ್‌ ಕೇಂದ್ರಕ್ಕಿಂದು ವರ್ಷ ತುಂಬಿದ್ದರ ಪ್ರಯುಕ್ತ ಡಯಾಲಿಸೆಸ್‌ ಕೇಂದ್ರಕ್ಕೆ ಬರುವ ರೋಗಿಗಳಿಗೆ ಹಾಗೂ ಮನೆಗೆ ತೆರಳುವ ರೋಗಿಗಳ ಅನುಕೂಲಕ್ಕಾಗಿ ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಬೃಹತ್‌ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್‌. ನಿರಾಣಿ ಚಾಲನೆ ನೀಡಿದರು.

ಶಾಸಕರಾಗಿದ್ದ ಲಿಂಗೈಕ್ಯ ಚಂದ್ರಶೇಖರ ಪಾಟೀಲ ರೇವೂರ ಜನ್ಮ ದಿನಾಚರಣೆಯಂದು ಕಳೆದ ವರ್ಷ ಉಚಿತ ಡಯಾಲಿಸೆಸ್‌ ಕೇಂದ್ರ ಆರಂಭಿಸುವ ಮೂಲಕ ಹಾಗೂ ಈಗ ಉಚಿತ ಅಂಬ್ಯುಲೆನ್ಸ್‌ ಸೇವೆ ಒದಗಿಸಿರುವುದು ಹಾಗೂ ಆಗಾಗ್ಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜತೆಗೆ ರಕ್ತದಾನ ಶಿಬಿರಗಳ ಆಯೋಜಿಸುತ್ತಿರುವುದು ಮಾದರಿಯಾಗಿದೆ ಎಂದು ಸಚಿವರು ಶ್ಲಾಘಿಸಿದರು.

ಲಿಂಗೈಕ್ಯ ಚಂದ್ರಶೇಖರ ಪಾಟೀಲ ರೇವೂರ ನೇರ ನಡೆ-ನುಡಿ ವ್ಯಕ್ತಿವುಳ್ಳವರಾಗಿದ್ದರು. ಇದ್ದಿದ್ದನ್ನು ಇದ್ದ ಹಾಗೆ ಹೇಳುತ್ತಿದ್ದರು. ಒಳಗೊಂದು-ಹೊರಗೊಂದು ಇರಲಿಲ್ಲ. ತಾವಿಬ್ಬರು ಉತ್ತಮ್ಮ ಸ್ನೇಹಿತರಾಗಿದ್ದೇವು. ಅವರ ವ್ಯಕ್ತಿತ್ವವನ್ನು ಅವರ ಮಗ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮೈಗೂಢಿಸಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ಸೂಕ್ತ ವೈದ್ಯಕೀಯ ಸೇವೆ ಸಿಗದೇ ಕಂಗಾಲಾಗಿರುವ ಕುಟುಂಬಗಳಿಗೆ ನೆರವಾಗುವ ಅದರಲ್ಲೂ ಕಣ್ಣೀರು ಒರೆಸುವ ಕೆಲಸ ಹೆಮ್ಮೆಯದಾಗಿದ್ದು, ಕಿಡ್ನಿ ವೈಫ‌ಲ್ಯದಿಂದ ಬಳಲುವ ಬಡವರು ತಿಂಗಳಿಗೆ ನಾಲ್ಕೈದು ಸಲ ಡಯಾಲಿಸೆಸ್‌ ಮಾಡಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಜೀವ ಕೊಡುವ ನಿಟ್ಟಿನಲ್ಲಿ ಪುಣ್ಯದ ಕಾರ್ಯ ಕೈಗೊಂಡಿರುವುದು ಶ್ಲಾಘನೀಯವಾಗಿದೆ ಎಂದರು.

ಡಯಾಲಿಸೆಸ್‌ ಕೇಂದ್ರದ ಶರಣು ಮಳಖೇಡಕರ್‌ ಮಾತನಾಡಿ, ಕಳೆದ ಒಂದು ವರ್ಷದ ಅವಧಿಯಲ್ಲಿ 5000 ರೋಗಿಗಳು ಉಚಿತ ಡಯಾಲಿಸೆಸ್‌ ಸೌಲಭ್ಯ ಪಡೆದಿದ್ದು, ಈಗ ಆರಂಭಿಸಲಾಗಿರುವ ಉಚಿತ ಅಂಬ್ಯುಲೆನ್ಸ್‌ ಸೇವೆ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕರಾಗಿರುವ ದತ್ತಾತ್ರೇಯ ಪಾಟೀಲ್‌ ರೇವೂರ, ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಶಶೀಲ್‌ ಜಿ. ನಮೋಶಿ, ಎಚ್‌ಕೆಇ ಉಪಾಧ್ಯಕ್ಷ ಡಾ| ಶರಣಬಸಪ್ಪ ಹರವಾಳ, ಡಾ| ಶಿವಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಲಿಂ. ಚಂದ್ರಶೇಖರ ಪಾಟೀಲ ರೇವೂರ ಫೌಂಡೇಷನ್‌ ಅಧ್ಯಕ್ಷ ಅಧ್ಯಕ್ಷ ಅಪ್ಪು ಕಣಕಿ, ಕುಡಾ ಅಧ್ಯಕ್ಷ ದಯಾಘನ್‌ ಧಾರವಾಡಕರ್‌, ಪಾಲಿಕೆ ಸದಸ್ಯರಾದ ಪ್ರಭು ಹಾದಿಮನಿ, ವಿಜಯಕುಮಾರ ಸೇವಲಾನಿ, ವೀರಣ್ಣ ಹೊನ್ನಳ್ಳಿ, ವಿಶಾಲ ದರ್ಗಿ, ಮುಖಂಡರಾದ ರಾಜು ದೇವದುರ್ಗ, ರಾಮು ಗುಮ್ಮಟ್ಟ, ಶ್ರೀನಿವಾಸ ದೇಸಾಯಿ, ಸಂಗಮೇಶ ರಾಜೋಳೆ, ಸೂರಜ್‌ ತಿವಾರಿ, ಬೆಳಮಗಿ, ಶಾಂತು ದುಧನಿ, ಅಪ್ಪಾಸಾಬ ಪಾಟೀಲ ಮುಂತಾದವರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.