ನೂತನ ಶಿಕ್ಷಣ ನೀತಿ: ಸಿಯುಕೆ ಮಾದರಿಯಾಗಲಿ

ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

Team Udayavani, Oct 6, 2021, 1:45 PM IST

ನೂತನ ಶಿಕ್ಷಣ ನೀತಿ: ಸಿಯುಕೆ ಮಾದರಿಯಾಗಲಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ನೂತನ ಶಿಕ್ಷಣ ನೀತಿ ಅನುಷ್ಠಾನದಲ್ಲಿ ದೇಶದ ಇತರ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಬೇಕೆಂದು ಎಂದು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ರಚನಾ ಸಮಿತಿ ಸದಸ್ಯರಾದ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಸದಸ್ಯ ಪ್ರೊ| ಎಂ.ಕೆ. ಶ್ರೀಧರ್‌ ಆಶಯ ವ್ಯಕ್ತಪಡಿಸಿದರು.

ಆಳಂದ ತಾಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಸಭಾಂಗಣದಲ್ಲಿ ಮಂಗಳವಾರ ಶಿಕ್ಷಣ ಮತ್ತು ಸಮಾಜ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ನೂತನ ಶಿಕ್ಷಣ ನೀತಿ ಅನುಷ್ಠಾನ ಕುರಿತ ಕಾರ್ಯಾಗಾರದಲ್ಲಿ ವರ್ಚುವಲ್‌ ಮೂಲಕ ಅವರು ದಿಕ್ಸೂಚಿ ಭಾಷಣ ಮಾಡಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರಚನೆಯಾಗಿ  ಒಂದು ವರ್ಷ ಕಳೆದಿದ್ದು, ಈಗ ಅನುಷ್ಠಾನದ ಸುಸಂದರ್ಭ ಬಂದಿದೆ. ಜತೆಗೆ ಈ ನೀತಿ ಯಾಕೆ ಅಗತ್ಯವಾಗಿದೆ? ಇದರಲ್ಲಿ ಏನೇನಿರಲಿದೆ ಎನ್ನುವ ಕುತೂಹಲಕ್ಕೂ ತೆರೆ ಬಿದ್ದಿದೆ. ಇದೀಗ ಇದನ್ನು ಹೇಗೆ ಅನುಷ್ಠಾನ ಮಾಡಬೇಕು ಎನ್ನುವ ಬಗ್ಗೆ ಯೋಚನೆ ಮತ್ತು ಯೋಜನೆ ರೂಪಸಬೇಕಿದೆ ಎಂದರು.

ಕಲಬುರಗಿಯಲ್ಲಿರುವ ಕೇಂದ್ರೀಯ ವಿವಿ ರಾಜ್ಯದ ಏಕೈಕ ವಿಶ್ವವಿದ್ಯಾಲಯ ಮತ್ತು ನೇರವಾಗಿ ಕೇಂದ್ರ ಶಿಕ್ಷಣ ಸಚಿವಾಲಯದ ಅಧೀನದಲ್ಲೇ ಬರುವುದರಿಂದ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೆಲ ಮಾದರಿಯನ್ನು ವಿಶ್ವವಿದ್ಯಾಲಯವೇ ತಯಾರಿಸಬೇಕು. ಬಹುಶಿಸ್ತೀಯ ಪಠ್ಯಕ್ರಮ ರೂಪಿಸಬೇಕು. ಹೊಸ ಶಿಕ್ಷಣ ನೀತಿಯಲ್ಲಿನ ಮಲ್ಪಿಪಲ್‌ ಎಂಟ್ರಿ ಮತ್ತು ಮಲ್ಪಿಪಲ್‌ ಎಕ್ಸಿಟ್‌ಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತರ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಹೋಲಿಕೆ ಮಾಡಿದರೆ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉತ್ತಮ ಸಂಪನ್ಮೂಲವಿದೆ. ಅಗತ್ಯ ಬೋಧಕ ಸಿಬ್ಬಂದಿ ಇದ್ದು, ನಿರ್ದಿಷ್ಟ ಕೇಸ್‌ ಸ್ಟಡಿ ಮಾಡಬೇಕು. ಶಿಕ್ಷಣ ನೀತಿ ಅನುಷ್ಠಾನದಲ್ಲಿ ಈ ವಿಶ್ವವಿದ್ಯಾಲಯವನ್ನೇ ಇತರೆ ಸಂಸ್ಥೆಗಳು ಅನುಸರಿಸುವಂತೆ ಆಗಬೇಕು. ಕೇಂದ್ರ ಸಚಿವಾಲಯದ ಅಧಿಧೀನದಲ್ಲಿ ಬರುವುದರಿಂದ ತಕ್ಷಣಕ್ಕೆ ಅಗತ್ಯ ಮಾರ್ಪಾಡು ಮಾಡಿಕೊಳ್ಳಲು ಅವಕಾಶವಿದೆ ಎಂದು ಹೇಳಿದರು.

ಅತಿಥಿ ಮತ್ತು ಉಪನ್ಯಾಸಕರಾಗಿ ಆಗಮಿಸಿದ್ದ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಪ್ರೊ| ಶಿವಪ್ರಸಾದ “ಹೊಸ ಶಿಕ್ಷಣ ನೀತಿ ಬಗ್ಗೆ ಭಯ ಬೇಡ. ಇದು ಪ್ರಗತಿಗೆ ದಾರಿಯಾಗಿದೆ. ಎಲ್ಲರೂ ಸೇರಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡೋಣ’ ಎಂದು ಕವಿತೆ ಪ್ರಸ್ತುತಪಡಿಸಿದರು. ಕುಲಪತಿ ಪ್ರೊ| ಬಿ. ಸತ್ಯನಾರಾಯಣ ಮಾತನಾಡಿ, ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ವಿಶ್ವವಿದ್ಯಾಲಯದ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸ್ನೇಹಿ ನೀತಿಯಾಗಿದೆ. ಇದನ್ನು ಹೇಗೆ ಅನುಷ್ಠಾನ ಮಾಡಬೇಕೆಂಬ ಅಗ್ನಿ ಪರೀಕ್ಷೆ ಶಿಕ್ಷಕರಿಗಿದೆ ಎಂದು ಹೇಳಿದರು.

ಸದ್ಯ ಕಲಾ ವಿಷಯಗಳಲ್ಲಿ ಓದಿದ ಶೇ.20ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಸಿಗುವಂತ ಮತ್ತು ಐಐಟಿ ಅಭ್ಯಾಸ ಮಾಡಿದ ಯುವಕರು ಆತ್ಮಹತ್ಯೆಗೆ ಶರಣವಾಗುವ ಪರಿಸ್ಥಿತಿ ಇದೆ. ಆದ್ದರಿಂದ ಹೊಸ ಶಿಕ್ಷಣ ನೀತಿ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಅಗತ್ಯವಾಗಿ ಆಗಬೇಕು. ರಾಜ್ಯದ ಬೇರೆ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರ ಸರಾಸರಿ ವಯಸ್ಸು 50 ಇದ್ದರೆ, ನಮ್ಮ ಬೋಧಕ ಸಿಬ್ಬಂದಿಯ ವಯಸ್ಸು 35ರಿಂದ 40 ಇದೆ. ಯುವ ಬೋಧಕರೇ ಹೆಚ್ಚಿದ್ದು, ನಮ್ಮಲ್ಲಿ ಮೂಲ ಸೌಕರ್ಯಗಳು ಇರುವುದರಿಂದ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕುಲಸಚಿವ ಪ್ರೊ| ಬಸವರಾಜ ಡೋಣೂರ, ಬೆಂಗಳೂರಿನ ಶಿಕ್ಷಣ ಮತ್ತು ಸಮಾಜ ಅಧ್ಯಯನ ಕೇಂದ್ರದ ನಿರ್ದೇಶಕ ಡಾ| ಗೌರೀಶ, ಪ್ರೊ| ಚನ್ನ ವೀರ ಆರ್‌.ಎಂ. ಮಾತನಾಡಿದರು. ಎನ್‌ಇಪಿ ಕಾರ್ಯಾಗಾರದ ಮುಖ್ಯಸ್ಥ ಪ್ರೊ| ಅಳಗವಾಡಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಾಗಾರದಲ್ಲಿ ಸಿಯುಕೆ ವಿವಿಧ ನಿಕಾಯಗಳ ಡೀನ್‌ಗಳು, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

ನೂತನ ಶಿಕ್ಷಣ ನೀತಿ ಅನುಷ್ಠಾನದಲ್ಲಿ ಯುಜಿಸಿ ಅಗತ್ಯ ನೆರವು ನೀಡುವುದಾಗಿ ಹೇಳಿದೆ. ಜತೆಗೆ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ತಿಳಿಸಿದೆ. ಮುಂದಿನ ಕೆಲ ತಿಂಗಳಲ್ಲೇ ಹೊಸ ನೀತಿಯ ಅನ್ವಯ ಪಠ್ಯಕ್ರಮ ರಚಿಸಿ, ಬೋಧಿ ಸಲಾಗುವುದು.
ಪ್ರೊ| ಬಿ.ಸತ್ಯನಾರಾಯಣ,
ಕುಲಪತಿ, ಸಿಯುಕೆ

ನೂತನ ಶಿಕ್ಷಣ ನೀತಿ ಈಗಾಗಲೇ ಒಂದು ನೀಲಿನಕ್ಷೆ ಸಿದ್ಧಪಡಿಸಿದೆ. ಅದಕ್ಕೆ ಅಗತ್ಯವಾದ ಪೂರಕ ಅಂಶ ಮತ್ತು ಮಾದರಿಗಳನ್ನು ಸೇರಿಸುವ ಜವಾಬ್ದಾರಿ ಸಿಯುಕೆಗೆ ಇದೆ. ಕೆಲ ಮಾದರಿಗಳು ಆರಂಭದಲ್ಲಿ ಯಶಸ್ಸು ಆಗದೇ ಹೋದರೂ, ಅದರಿಂದ ಹೊಸ ಪಾಠ ಕಲಿಯಬಹುದು.
ಪ್ರೊ| ಎಂ.ಕೆ.ಶ್ರೀಧರ್‌,
ಸದಸ್ಯರು, ಯುಜಿ

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.