ಶಿವಲಿಂಗ ಸ್ಥಳದಲ್ಲಿಅಸ್ವಚ್ಛತೆ ಖಂಡಿಸಿ ಪ್ರತಿಭಟನೆ
Team Udayavani, Nov 9, 2021, 11:41 AM IST
ಆಳಂದ: ಪಟ್ಟಣದ ಹಜರತ್ ಲಾಡ್ಲೆ ಮಶಾಕ್ ದರ್ಗಾ ಪ್ರದೇಶದಲ್ಲಿನ ಶಿವಲಿಂಗ ಸ್ಥಳದಲ್ಲಿ ಅಸ್ವತ್ಛತೆ ಮಾಡಿದ್ದನ್ನು ಖಂಡಿಸಿ ಹಿಂದುಪರ ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಬಸ್ ನಿಲ್ದಾಣ, ಶ್ರೀರಾಮ ಮಾರುಕಟ್ಟೆ, ಮುಖ್ಯರಸ್ತೆ ಮೂಲಕ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ಕೈಗೊಂಡ ಕಾರ್ಯಕರ್ತರು, ಕೂಡಲೇ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಜಿಪಂ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ ಮಾತನಾಡಿ, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ದೇವಸ್ಥಾನ ಕಟ್ಟಿ ಪೂಜೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಆನಂದ ಬಿರಾದಾರ ಕೊರಳ್ಳಿ, ಮಹೇಶ ಗೌಳಿ, ವಿಶ್ವ ಕರ್ಮ ಸಮಾಜದ ಅಧ್ಯಕ್ಷ ಸಂಪತಕುಮಾರ ವೇದಪಾಠಕ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಮರಾಠ ಸಮಾಜದ ಅಧ್ಯಕ್ಷ ನಾಗನಾಥ ಏಟೆ, ಶರಣು ಕುಮಸಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಪುರಸಭೆ ಸದಸ್ಯ ಸಂತೋಷ ಹೂಗಾರ, ಪುರಸಭೆ ಮಾಜಿ ಸದಸ್ಯ ಲಿಂಗರಾಜ ಪಾಟೀಲ, ರಾಜು ಷಣ್ಮೂಖ ಸೇರಿದಂತೆ ಹಿಂದುಪರ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ