ಅಂಗನವಾಡಿ ಉಳಿವಿಗೆ ಸಂಘಟಿತ ಹೋರಾಟ

Team Udayavani, Jul 15, 2022, 4:50 PM IST

16anganawadi

ಕಲಬುರಗಿ: ದೇಶದಲ್ಲಿರುವ ಅಂಗನ ವಾಡಿಗಳನ್ನು ಮುಚ್ಚುವ ಕೇಂದ್ರ ಸರ್ಕಾರದ ಹುನ್ನಾರವನ್ನು ನಾವು ವಿರೋಧಿಸಬೇಕು. ಇಲ್ಲದಿದ್ದರೇ ಮಕ್ಕಳ ಭವಿಷ್ಯಕ್ಕೆ ನಾವೇ ಅಪಾಯ ತಂದೊಡ್ಡಿದಂತಾಗುತ್ತದೆ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಎಚ್ಚರಿಸಿದರು.

ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಮ್ಮಿಕೊಂಡಿದ್ದ 9ನೇ ಜಿಲ್ಲಾ ಸಮ್ಮೇಳನಕ್ಕೆ ಚಾಲನೆ ನೀಡಿ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಹೊಸ ಶಿಕ್ಷಣ ನೀತಿ ಅಡಿಯಲ್ಲಿ ಅಂಗನವಾಡಿಗಳನ್ನು ಪೂರ್ತಿಯಾಗಿ ಇಲ್ಲವಾಗಿಸುವ ಸಂಚು ನಡೆದಿದೆ. ಆರಂಭಿಕ ಶಿಕ್ಷಣ ತರಬೇತಿ ಅಂಗನವಾಡಿಗಳಿಂದ ಪಡೆಯುವ ಮಕ್ಕಳ ವಿಕಾಸಕ್ಕೆ ಅನುಕೂಲ ಎನ್ನುವುದನ್ನು ಒಪ್ಪದಿರುವ ಸರ್ಕಾರದ ನಿಲುವನ್ನು ವಿರೋಧಿಸಬೇಕು ಎಂದರು.

ಅಂಗನವಾಡಿ ನೌಕರರನ್ನು ಕಾಯಂ ಮಾಡಲು ಸರ್ಕಾರ ಹಲವಾರು ವರ್ಷಗಳಿಂದ ಮೀನಾಮೇಷ ಎಣಿಸುತ್ತಿದೆ. ಅಂಗನವಾಡಿ ನೌಕರರಿಗೆ ಪಿಂಚಣಿ ಕೊಡಿ ಎಂದರು. ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಮಾಡುವ ಮೂಲಕ ಸಂಘಟಿತ ಹೋರಾಟ ಮಾಡುತ್ತಿದ್ದೇವೆ. ಹೋರಾಟ ಮಾಡದೇ ಇದ್ದರೆ ನಮಗೆ ಉಳಿಗಾಲವಿಲ್ಲ ಎಂದರು.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಮಾತನಾಡಿ, ಕೋವಿಡ್‌ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ನೌಕರರ ಎದೆಗಾರಿಕೆ ಮತ್ತು ಧೈರ್ಯ ಮೆಚ್ಚುವಂತಹದ್ದು. ಇಂತಹವರಿಗೆ ಸರ್ಕಾರ ಬರಿಗೈಯಲ್ಲಿ ಸನ್ಮಾನಿಸಿತೇ ವಿನಃ ಹಸಿದ ಹೊಟ್ಟೆ ತುಂಬಿಸುವ ನಿಟ್ಟಿನಲ್ಲಿ ಬೋನಸ್‌, ಹೆಚ್ಚುವರಿ ಸಂಬಳ ನೀಡುವ ಪ್ರಯತ್ನ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷೆ ಕಾ.ಗೌರಮ್ಮ ಪಾಟೀಲ ಮಾತನಾಡಿದರು. ಜಿಲ್ಲಾ ಖಜಾಂಚಿ ಮಹಾದೇವಿ ಕೆ, ಪುಷ್ಪಾ ಆಳಂದ, ದೇವಮ್ಮ ಚಿತ್ತಾಪುರ, ಸಾಬಮ್ಮ ಶಹಾಬಾದ್‌, ಗಜರಾಬಾಯಿ ಜೇವರ್ಗಿ, ಗೌರಮ್ಮ ಪಾಟೀಲ ಕಲಬುರಗಿ, ರತ್ನ ಕಲಬುರಗಿ ನಗರ, ಬಿಸಮಿಲ್ಲಾ ಇದ್ದರು. ಜಿಲ್ಲೆಯ ಎಲ್ಲ ತಾಲೂಕಿನಿಂದ ಅಂಗನವಾಡಿ ಕಾರ್ಯಕರ್ತೆಯರು ಆಗಮಿಸಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.