ಪುಣೆ-ಸೊಲ್ಲಾಪುರ ಗುಳೆ ಹೊರಟ ಜನ

Team Udayavani, Dec 9, 2021, 10:47 AM IST

6pepole

ಹುಣಸಗಿ: ಕೃಷಿ ಕೂಲಿಕಾರ್ಮಿಕರು ಹಿಂಗಾರು ಹಂಗಾಮಿನಲ್ಲಿ ನಿರಂತರ ಕೆಲಸ ದೊರಕದ ಪರಿಣಾಮ ಬಹುತೇಕ ಕಾರ್ಮಿಕರು ಪುಣೆ, ಸೊಲ್ಲಾಪುರ ಸಿಟಿಗಳಿಗೆ ಗುಳೆ ಹೊರಡುತ್ತಿದ್ದಾರೆ. ಹುಣಸಗಿ ತಾಲೂಕಿನ ಗುಂಡಲಗೇರಿ ಗ್ರಾಮದ 15 ಹೆಚ್ಚು ಕುಟುಂಬಗಳು ಹೊಟ್ಟೆಪಾಡಿಗಾಗಿ ಪುಣೆಗೆ ಗುಳೆ ಹೋಗಿವೆ. ಊರಲ್ಲಿ ಕೆಲಸವಿಲ್ಲ. ಇಲ್ಲಿ ಇದ್ರೆ ಜೀವನ ನಡೆಯೋದಿಲ್ಲ ಎಂದು ಗುಳೆ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ.

ಉದ್ಯೋಗ ಖಾತ್ರಿಯೂ ಇಲ್ಲ

ಕಾರ್ಮಿಕರಿಗೆ ಉದ್ಯೋಗ ಖಾತ್ರಿಯೋಜನೆಯಲ್ಲಿ ಕೆಲಸವೂ ಸಿಗುತ್ತಿಲ್ಲ. ಇದು ಅಲ್ಲದೆ ನರೇಗಾ ಉದ್ಯೋಗ ಚೀಟಿಯೂ ಮಾಡಿಸಿಕೊಂಡಿಲ್ಲ. ಹಾಗೇ ಈ ಬಾರಿ ಎಡದಂಡೆ ಕಾಲುವೆಗೆ ನೀರಿನ ಅಭಾವ ಬೇರೆ. ಹಿಂಗಾರಿನಲ್ಲಿ ನಷ್ಟವೇ ಜಾಸ್ತಿ. ಉದ್ಯೋಗವೂ ಕಡಿಮೆ ಇದರಿಂದಾಗಿ ಕೂಲಿಗಾಗಿ ಪುಣೆಗೆ ಹೊರಟಿದ್ದೇವೆಂದು ಭೀಮಣ್ಣ, ರುದ್ರಪ್ಪ, ಗಂಗಪ್ಪ ಸೇರಿದಂತೆ ಕಾರ್ಮಿಕರು ಹೇಳಿದ್ದಾರೆ.

ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತದ ವ್ಯವಸಾಯದಲ್ಲಿ ನಿರಂತರ ಕೃಷಿ ಚಟುವಟಿಕೆ ನಡೆಯುತ್ತಿದ್ದವು. ಈ ಬಾರಿ ಪ್ರಕೃತಿ ವಿಕೋಪದಿಂದ ನಷ್ಟವಾಗಿದೆ. ಅಲ್ಲದೆ ನೀರಿನ ಕೊರತೆಯಿಂದ ಕೃಷಿ ಚಟುವಟಿಕೆ ವಿರಳ ಆಗಲಿದೆ. ಹೀಗಾಗಿ ಮನೆಯಲ್ಲಿ ಕುಳಿತರೆ ಜೀವನ ಸಾಗಲ್ಲ. ಗುಳೆ ಹೋಗುವುದು ಬಿಟ್ಟರೆ ಬೇರೆ ದಾರಿಯೇ ಇಲ್ಲ ಎನ್ನುತ್ತಾರೆ ಗುಳೆ ಜನ.

ಕಾರಣ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸುವಂತಹ ದೊಡ್ಡ ಕಂಪೆನಿ ಇಲ್ಲಿಲ್ಲ. ಈಗಾಗಲೇ ನರೇಗಾ ಇದ್ದರೂ ಕಾರ್ಮಿಕರಿಗೆ ವರದಾನವಾಗುತ್ತಿಲ್ಲ. ಕೆಲಸವೂ ಗ್ಯಾರಂಟಿ ಇಲ್ಲ. ಅಧಿಕಾರಿಗಳು ನಿಜವಾದ ಕೂಲಿಕಾರ್ಮಿಕರಿಗೆ ಉದ್ಯೋಗ ಚೀಟಿ ನೀಡಿ ನಿರಂತರ ಕೆಲಸ ಸೃಷ್ಟಿಸುವ ಗೋಜಿಗೆ ಮುಂದಾಗಿಲ್ಲ. ಹೀಗಾಗಿ ಇದೊಂದು ನಿದರ್ಶನ ಎನ್ನಲಾಗುತ್ತಿದೆ.

ಬಡಜನರ ಜೀವನ ಸುಧಾರಿಸಲು ಹಾಗೂ ಗುಳೆ ಹೋಗುವುದು ತಪ್ಪಿಸಲು ಈ ಭಾಗದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹೆಚ್ಚು ದುಬಾರಿ ಕೂಲಿ ಮತ್ತು ಉದ್ಯೋಗ ಸೃಷ್ಟಿಗೆ ಮುಂದಾಗಬೇಕಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ.

ಪಂಚಾಯಿತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದರೆ ಕೆಲಸ ಕೊಡಲು ಸಿದ್ಧರಿದ್ದೇವೆ. ಈ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಉದ್ಯೋಗ ಖಾತ್ರಿ ಕೆಲಸ ಕುರಿತು ಪ್ರಚಾರ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಪ್ರಕಾಶ ದೇಸಾಯಿ, ತಾಪಂ ಇಒ ಹುಣಸಗಿ

ಕಾರ್ಮಿಕರಿಗೆ ಉದ್ಯೋಗ ದೊರಕಿಸುವ ಸಲುವಾಗಿ ಉದ್ಯೋಗ ಖಾತ್ರಿ ಯೋಜನೆ ಇದೆ. ಬಡವರಿಗೆ ಕೆಲಸ ಸಿಗದೇ ಇರುವುದು ನೋವಿನ ಸಂಗತಿ. ಕಾರ್ಮಿಕರಿಗೆ ಖಾತ್ರಿಯಲ್ಲಿ ಕೆಲಸ ನೀಡಬೇಕು. ಗುಳೆ ಹೋಗುವುದನ್ನು ತಪ್ಪಿಸಬೇಕು. ಜನರ ಶ್ರೇಯೋಭಿವೃದ್ಧಿಗೆ ತಾಲೂಕಾಡಳಿತ ಮುಂದಾಗಬೇಕು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕರ ಬದುಕು ಹದಗೆಟ್ಟಿದೆ. ರಾಜಾ ವೆಂಕಟಪ್ಪ ನಾಯಕ, ಮಾಜಿ ಶಾಸಕರು ಸುರಪುರ

-ಬಾಲಪ್ಪ.ಎಂ. ಕುಪ್ಪಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.