
ಗ್ರಾಪಂ ಆಡಳಿತದಲ್ಲಿ ಹಸ್ತಕ್ಷೇಪ ತಡೆಯಿರಿ
Team Udayavani, Jan 16, 2022, 12:18 PM IST
![9administration-]](https://www.udayavani.com/wp-content/uploads/2022/01/9administration--620x346.jpg)
ಆಳಂದ: ತಾಲೂಕಿನ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾರ್ಯಗಳಲ್ಲಿ ನಡೆಯುತ್ತಿರುವ ಹಸ್ತಕ್ಷೇಪವನ್ನು ತಡೆಯಬೇಕು ಎಂದು ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ಅಖೀಲ ಭಾರತ ಕಿಸಾನಸಭಾ ಮತ್ತು ಭಾರತೀಯ ಖೇತ್ ಮಜ್ದೂರ್ ಯೂನಿಯನ್ ತಾಲೂಕು ಘಟಕ ಒತ್ತಾಯಿಸಿದೆ.
ಈ ಕುರಿತು ಪಟ್ಟಣದ ತಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಮುಖಂಡರು, ಗ್ರಾಪಂಗಳಲ್ಲಿ ಶಾಸಕರ ಹಸ್ತಕ್ಷೇಪ ಮತ್ತು ಅಭಿವೃದ್ಧಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ತಮಗೆ ಬೇಕಾದ ರೀತಿಯಲ್ಲಿ ಕೆಲಸ ಕಾರ್ಯ ಮಾಡಿಕೊಂಡು ಅಭಿವೃದ್ಧಿಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಆದ್ದರಿಂದ ಹಸ್ತಕ್ಷೇಪ ತಡೆದು ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡದೇ ಇದ್ದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.
ಸರ್ಕಾರಿ ನಿಯಮಾವಳಿಯಂತೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.
ಅಖೀಲಭಾರತ ಕಿಸಾನಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಕಾರ್ಯಾಧ್ಯಕ್ಷ ಮಲ್ಲಿನಾಥ ಯಲಶೆಟ್ಟಿ, ತಡೋಳಾ ಗ್ರಾಪಂ ಅಧ್ಯಕ್ಷ ಮೈಲಾರಿ ಜೋಗೆ, ಸದಸ್ಯ ಸಿದ್ಧಲಿಂಗ, ಮಹಾವೀರ ಕಾಂಬಳೆ, ಆನಂದರಾಯ ಭಾಗವಹಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Kalabauragi; ಶ್ರಮದಾನ: ಕಾರಿಡಾರ್ ಸುತ್ತಾಡಿ ಕಸಗುಡಿಸಿದ ಡಿ.ಸಿ ಬಿ.ಫೌಜಿಯಾ ತರನ್ನುಮ್

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ
MUST WATCH
ಹೊಸ ಸೇರ್ಪಡೆ

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ