ಹಳ್ಳ ಹಿಡಿಯುತ್ತಿದೆ ಪಿಎಸ್‌ಐ ಅಕ್ರಮ ತನಿಖೆ: ಡಾ| ಪಾಟೀಲ

Team Udayavani, Jun 10, 2022, 12:50 PM IST

7PSI

ಕಲಬುರಗಿ: ಭ್ರಷ್ಟಾಚಾರದ ಬ್ರಹ್ಮಾಂಡ ನಡೆದಿರುವ ಪಿಎಸ್‌ಐ ನೇಮಕಾತಿ ಅಕ್ರಮದ ಕುರಿತಾದ ಸಿಒಡಿ ತನಿಖೆ ಹಳ್ಳ ಹಿಡಿಯುತ್ತಿದ್ದು, ಬೇಕಾದವರಿಗೆ ಅದರಲ್ಲೂ ಅವರದ್ದೇ ಪಕ್ಷದ ನಾಯಕರನ್ನು ರಕ್ಷಿಸುವ ಮೂಲಕ ಹಗರಣವನ್ನೇ ಮುಚ್ಚಿ ಹಾಕುವ ಯತ್ನ ನಡೆದಿದೆ ಎಂದು ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್‌ಐ ಹಗರಣದಲ್ಲಿ ಯಾರನ್ನೂ ಬಿಡುವುದೇ ಇಲ್ಲ ಎಂಬುದಾಗಿ ಗೃಹ ಸಚಿವರು ಹೇಳುತ್ತಿರುವ ನಡುವೆ ಹಲವರನ್ನು ರಕ್ಷಿಸಲಾಗುತ್ತಿದೆ. ಇದಕ್ಕೆ ಈಗ ನಡೆಯುತ್ತಿರುವ ಆಮೆಗತಿಯ ತನಿಖೆಯೇ ಸಾಕ್ಷಿಯಾಗಿದೆ ಎಂದು ಹೇಳಿದರು.

ತನಿಖೆ ಹಾದಿ ನೋಡಿ ನ್ಯಾಯಾಂಗ ತನಿಖೆಗೆ ಆಗ್ರಹಿಸಲಾಗಿತ್ತು. ಆದರೆ ತಮ್ಮೆಲ್ಲ ಹುಳುಕು ಹೊರ ಬರುತ್ತದೆ ಎಂದು ತಿಳಿದು ತನಿಖೆ ಹಾದಿಯನ್ನೇ ತಪ್ಪಿಸಲಾಗುತ್ತಿದೆ. ಇದನ್ನು ಜನ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಮುಂದೆ ಯಾವತ್ತೂ ಕ್ಷಮಿಸುವುದಿಲ್ಲ ಎಂದು ನುಡಿದರು.

ಆರೋಪಪಟ್ಟಿ ಸಲ್ಲಿಸಲು ಮೀನಾ ಮೇಷ: ಕಳೆದ ವರ್ಷ ಸೇಡಂ ತಾಲೂಕಿನಲ್ಲಿ 2500 ಎಕರೆ ಭೂಮಿಯಲ್ಲಿ ನಕಲಿ ಹೆಸರಿನ ಬೀಜ ಬಿತ್ತಿ ರೈತರು ನಷ್ಟ ಹೊಂದಿದ್ದಾರೆ. ಈ ಕುರಿತು ಮಳಖೇಡ ಹಾಗೂ ಕಲಬುರಗಿಯ ಚೌಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ತಪ್ಪಿತಸ್ಥರ ವಿರುದ್ಧ ಈಗಲೂ ಆರೋಪ ಪಟ್ಟಿ ಸಲ್ಲಿಸಿಲ್ಲ. ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ಮೀತಿ ಮೀರಿದ್ದು, ಗೊಬ್ಬರ ಅಭಾವಕ್ಕೆ ಸರ್ಕಾರದ ನೀತಿಯೇ ಕಾರಣವಾಗಿದೆ. ಕಂಪನಿಗಳಿಗೆ ಸಕಾಲಕ್ಕೆ ಸಬ್ಸಿಡಿ ಬಾರದಿರುವುದಕ್ಕೆ ಕಾರಣ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ಗೊಬ್ಬರ ಸಿಗದಿದ್ದಕ್ಕೆ ರೈತರೇ ಬೀದಿಗಳಿಯಲಿದ್ದಾರೆ. ಇದಕ್ಕೆಲ್ಲ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ. ಇನ್ನೂ ರಾಜ್ಯದ ಕೃಷಿ ಸಚಿವರಂತೂ ಭೇಟಿಯಾದ ನಂತರವಷ್ಟೇ ಯೋಜನೆ ಅನುದಾನ ಬಿಡುಗಡೆಯಾಗುತ್ತಿದೆ. ಒಟ್ಟಾರೆ ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.

ಭೀಕ್ಷೆ ರೂಪದಲ್ಲಿ ಎಂಎಸ್ಪಿ: ಕೇಂದ್ರ ಸರ್ಕಾರ ತೊಗರಿಗೆ ಕೇವಲ 300ರೂ. ಮಾತ್ರ ಬೆಂಬಲ ಹೆಚ್ಚಿಸಿ ಭಿಕ್ಷೆಯಂತೆ ನೀಡಿದೆ. ಹೆಸರು ಬೆಳೆಗಿಂತ ತೊಗರಿ ಬೆಂಬಲ ಬೆಲೆಯೇ ಕಡಿಮೆಯಾಗುತ್ತಿದೆ ಎಂದು ಅಸಮಾಧಾನ ವ್ಯಾಪಕ ವ್ಯಕ್ತವಾಗುತ್ತಿದ್ದರೂ ಸರಿಪಡಿಸುವ ಕಾರ್ಯ ಬಿಜೆಪಿಯಿಂದ ಆಗುತ್ತಿಲ್ಲ. ರೈತರ ಆದಾಯ ದ್ವಿಗುಣ ಮಾಡಲಾಗುವುದು ಎಂದು ಮೋದಿ ಭಾಷಣ ಮಾಡುತ್ತಾರೆಯೇ ಹೊರತು ವಾಸ್ತವಾಗಿ ಯಾವುದೇ ಲಾಭವಾಗಿಲ್ಲ. ಏನಾದರೂ ಲಾಭವಾಗಿದ್ದರೆ ಅದಾನಿ, ಅಂಬಾನಿಗೆ ಮಾತ್ರ ಆಗಿದೆ ಎಂದು ವಾಗ್ಧಾಳಿ ನಡೆಸಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.