ಬಿಜೆಪಿ ಅಕ್ರಮ ಮುಚ್ಚಲು ಧರ್ಮದ ಸಹಕಾರ: ಪ್ರಿಯಾಂಕ್‌

Team Udayavani, Apr 22, 2022, 12:05 PM IST

7illigal

ವಾಡಿ: ದುರಾಡಳಿತ, ಅಕ್ರಮಗಳನ್ನು ಮುಚ್ಚಿಡಲು ಭಾರತೀಯ ಜನತಾ ಪಕ್ಷದ ಸರ್ಕಾರ ಕಾಶ್ಮೀರ ಫೈಲ್ಸ್‌, ಹಿಜಾಬ್‌, ಅಜಾನ್‌, ಭಜನೆಯಂತ ಹುಸಿ ಧರ್ಮಾಭಿಮಾನ ಮುಂದಿಟ್ಟು ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದು, ದ್ವೇಷ ರಾಜಕಾರಣಕ್ಕೆ ಕೈಹಾಕಿ ರಾಜ್ಯದಲ್ಲಿ ಅಶಾಂತಿ ವಾತಾವರಣ ಮೂಡಿಸಿದೆ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ದೂರಿದರು.

ಹಳಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಿಂದ ಆರ್‌.ಬಿ.ಚವ್ಹಾಣ ತಾಂಡಾ ವರೆಗೆ ನಿರ್ಮಿಸಲಾಗುತ್ತಿರುವ 178.91ಲಕ್ಷ ರೂ. ಅನುದಾನದ ರಸ್ತೆ ಅಭಿವೃದ್ಧಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿ ಕಾಮಗಾರಿಗೂ ಗುತ್ತಿಗೆದಾರರು ಸಚಿವರಿಗೆ ಶೇ.40 ಕಮಿಷನ್‌ ಕೊಡಬೇಕಾಗಿದೆ. ಇದೇ ಕಾರಣಕ್ಕೆ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡರು. ಕಮಿಷನ್‌ ದಂಧೆಯಲ್ಲಿ ಕೆ.ಎಸ್‌. ಈಶ್ವರಪ್ಪ ಹೆಸರು ಬಯಲಿಗೆ ಬಿದ್ದಿದೆ. ನಾನು ತಪ್ಪೇ ಮಾಡಿಲ್ಲ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎನ್ನುತ್ತಿದ್ದ ಈಶ್ವರಪ್ಪ, ರಾಜೀನಾಮೆ ಏಕೆ ಕೊಟ್ಟರು ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಅಧಿ ಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌ ಪ್ರಕಟಿಸಿದ ಯಾವೊಂದೂ ಯೋಜನೆ ಜಾರಿಗೆ ತಂದಿಲ್ಲ. ನಿರುದ್ಯೋಗ ಹೋಗಲಾಡಿಸಲು ಯಾವುದೇ ಕ್ರಮಕೈಗೊಂಡಿಲ್ಲ. ಬದಲಿಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗಳಿಗೆ ತಡೆಯೊಡ್ಡಿದೆ. ಆದರೆ ಕಾಂಗ್ರೆಸ್‌ ಆಡಳಿತದಲ್ಲಿ 30,000 ಹುದ್ದೆ ತುಂಬಲಾಗಿತ್ತು. ನಾನು ಸಮಾಜಕಲ್ಯಾಣ ಸಚಿವನಾಗಿದ್ದಾಗ ಸೊರೆಗೊಂಡನ ಕೊಪ್ಪ ಸೇವಾಲಾಲ ಆಶ್ರಮಕ್ಕೆ 150 ಕೋಟಿ ರೂ. ಕೊಟ್ಟಿದ್ದೇನೆ. ತಾಂಡಾ ಅಭಿವೃದ್ಧಿ ನಿಗಮಗಳಿಂದ 4500 ಟ್ಯಾಕ್ಸಿಗಳನ್ನು ಕೊಟ್ಟಿದ್ದೇನೆ. ತಾಂಡಾಗಳ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ಬಿಜೆಪಿ ಸರ್ಕಾರ ಕೇವಲ ಎರಡು ಟ್ಯಾಕ್ಸಿ ಕೊಟ್ಟಿದೆ ಎಂದರು.

ಅಡುಗೆ ಅನಿಲ, ಪೆಟ್ರೋಲ್‌-ಡೀಸೆಲ್‌ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಪ್ರಶ್ನಿಸಿದರೆ ಬಿಜೆಪಿ ಸರ್ಕಾರ “ಕಾಶ್ಮೀರಿ ಫೈಲ್ಸ್‌ ನೋಡಿದ್ದೀರಾ’ ಎನ್ನುತ್ತದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಹಿರಿಯ ಮುಖಂಡರಾದ ಶಿವಾನಂದ ಪಾಟೀಲ, ಭೀಮಣ್ಣ ಸಾಲಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯದ್‌ ಮಹೆಮೂದ್‌ ಸಾಹೇಬ, ಬ್ಲಾಕ್‌ ಕಾಂಗ್ರೆಸ್‌ ಎಸ್‌ಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸೈದಾಪುರ, ಮುಖಂಡರಾದ ಜಗದೀಶ ಸಿಂಧೆ, ರಮೇಶ ಮರಗೋಳ, ಅಬ್ದುಲ್‌ ಅಜೀಜ್‌ಸೇಠ, ಸಿದ್ಧು ಪಾಟೀಲ, ರಾಘವೇಂದ್ರ ಅಲ್ಲಿಪುರ, ಗೋವಿಂದ ಜಾಧವ, ಸಿದ್ಧು ಮುಗುಟಿ, ಸಾಯಬಣ್ಣ ಹೊಸಮನಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.