ತೊಗರಿ ಹಾನಿ ಪ್ಯಾಕೇಜ್‌ ಘೋಷಣೆಗೆ ಆಗ್ರಹ


Team Udayavani, Dec 22, 2021, 11:51 AM IST

6protest

ಕಲಬುರಗಿ: ಅತಿವೃಷ್ಟಿಯಿಂದ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ತೊಗರಿ ಹಾಗೂ ಇತರ ಬೆಳೆಗಳಿಗೆ ಸಾಕಷ್ಟು ಹಾನಿಯಾಗಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕೂಡಲೇ ಪರಿಹಾರ ವಿತರಿಸಲು ಮತ್ತು ತೊಗರಿ ಮಂಡಳಿ ಸದೃಢಗೊಳಿಸಲು 250 ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ತೊಂದರೆಯಲ್ಲಿರುವ ರೈತರು ಮತ್ತು ಕೂಲಿಕಾರ್ಮಿಕರ ನೆರವಿಗೆ ಬಾರಬೇಕಿದ್ದ ಸರ್ಕಾರಗಳು ಚುನಾವಣೆಗಳನ್ನು ಮಾಡುವತ್ತ ಮಾತ್ರ ಗಮನ ಹರಿಸುತ್ತಿದೆ . ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬೆಳೆದ ಬೆಳೆಗಳು ಅತಿವೃಷ್ಟಿಯಿಂದ ಹಾಳಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ರೈತರ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.

ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಸಾಲ ಮನ್ನಾ ಮಾಡಬೇಕು. ಹೊಸ ಸಾಲ ನೀಡಲು ಕ್ರಮ ಕೈಗೊಳ್ಳಬೇಕು. ತೊಗರಿ ಮಂಡಳಿಗೆ ಬಲ ತುಂಬುವ ಕೆಲಸ ಮಾಡಬೇಕು. ನೀರಾವರಿ ರೈತರಿಗೆ 8 ಗಂಟೆಗಳ ‌ ಕಾಲ ವಿದ್ಯುತ್‌ ಪೂರೈಕೆ ಮಾಡಬೇಕೆಂದು ಆಗ್ರಹಿಸಿದರು.‌

ಬ್ಯಾಂಕ್‌ಗಳು ರೈತರ ಪರಿಹಾರದ ಹಣ ಸರಳವಾಗಿ ಕೊಡಲು ಮುಂದಾಗಬೇಕು. ನರೇಗಾ ಯೋಜನೆಯಡಿ ಹೆಚ್ಚಿನ ಕೆಲಸಗಳನ್ನು ಆರಂಭಿಸಿ, ಕೂಲಿ ಕೆಲಸ ನೀಡಬೇಕು. ಗಡಿಕೇಶ್ವಾರ ಸೇರಿ ಸುತ್ತಮುತ್ತಲಿನ ಗ್ರಾಮದಲ್ಲಿ ಕೂಡಲೇ ಪರಿಹಾರ ಕೆಲಸ ಆರಂಭಿಸಲು 5 ಕೋಟಿ ರೂ. ಪ್ಯಾಕೇಜ್‌ ಘೋಷಿಸಬೇಕೆಂದು ಒತ್ತಾಯಿಸಿದರು.

ಬಡವರಿಗೆ ಮನೆಗಳನ್ನು ಮಂಜೂರು ಮಾಡಬೇಕು. ಕೃಷಿಕರ ಸಮಸ್ಯೆಗಳನ್ನು ಚರ್ಚಿಸಬೇಕು. ಜಾನುವಾರು ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಬೇಕು. ಪೋಲೀಸ್‌ ಸಿಬ್ಬಂದಿ ವಸತಿ ಗೃಹಗಳು ಸೋರುತ್ತಿದ್ದು ದುರಸ್ತಿ ಮಾಡಬೇಕು. ಎಸ್‌ಬಿಐ ಖಾಸಗೀಕರಣ ಕೈ ಬಿಡಬೇಕು ಎಂದು ಡಿಸಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಉಪಾಧ್ಯಕ್ಷೆ ಗೌರಮ್ಮ ಪಾಟೀಲ, ಕಾರ್ಯದರ್ಶಿ ಪಾಂಡುರಂಗ ಮಾವಿನಕರ್‌, ಮುಖಂಡರಾದ ಎಂ.ಬಿ.ಸಜ್ಜನ್‌, ಸುಭಾಷ ಜೇವರ್ಗಿ, ಅಲ್ತಾಫ್ ಹುಸೇನ್‌ ಇನಾಮದಾರ, ರೇವಣ ಸಿದ್ದಪ್ಪ ಕಲಬುರಗಿ, ಜಾವೇದ್‌ ಹುಸೇನ್‌, ಸಿದ್ಧರಾಮ ಹರವಾಳ, ಸಾಯಿಬಣ್ಣ ಗುಡುಬಾ, ರಾಯಪ್ಪ ಶಹಾಬಾದ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.