ಪಂಪ್‌ಸೆಟ್‌ಗೆ ತ್ರಿಫೇಸ್‌ ವಿದ್ಯುತ್‌ ನೀಡಲು ಆಗ್ರಹ


Team Udayavani, Jan 28, 2022, 10:50 AM IST

5power

ಆಳಂದ: ಸರಸಂಬಾ ವಲಯದ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ತ್ರಿಫೇಸ್‌ ವಿದ್ಯುತ್‌ ಪೂರೈಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ತಾಲೂಕಿನ ಸರಸಂಬಾ ಜೆಸ್ಕಾಂ ಕಚೇರಿ ಎದುರು ಸಹಕಾರಿ ಧುರೀಣ ಮಹಾಂತಪ್ಪ ಆಲೂರೆ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡ ರೈತರು, ಬೇಡಿಕೆಗಳನ್ನು ಈಡೇರಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು.

ಇದೆ ವೇಳೆ ಮಹಾಂತಪ್ಪ ಆಲೂರೆ ಮಾತನಾಡಿ, ಪ್ರತಿದಿನ ಏಳೆಂಟು ಗಂಟೆ ತ್ರಿಫೇಸ್‌ ವಿದ್ಯುತ್‌ ಸರಬರಾಜು ಮಾಡುವಂತೆ ಸರ್ಕಾರದ ಆದೇಶವಿದೆ. ಈ ಹಿಂದೆ ವಾರದ ಶಿಫ್ಟ್‌ ಆಧಾರದಲ್ಲಿ ಏಳು ಗಂಟೆ ವಿದ್ಯುತ್‌ ನೀಡಿ, ಈಗ ಏಳು ಗಂಟೆಯಲ್ಲೇ ಮೂರು ಶಿಫ್ಟ್‌ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದುರು.

ಹಿಂಗಾರು ಬೆಳೆ ಬಿತ್ತನೆ ಮಾಡಿ, ಬೆಳೆಗಳಿಗೆ ಒಂದೆರಡು ಬಾರಿ ನೀರುಣಿಸಲು ಮುಂದಾದರೆ ವಿದ್ಯುತ್‌ ಇಲ್ಲದೆ ಪರದಾಡುವಂತೆ ಆಗಿದೆ. ಇದಕ್ಕೆ ಜೆಸ್ಕಾಂ ಅಧಿಕಾರಿಗಳೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾತ್ರಿ ಹೊತ್ತಲ್ಲಿ ಹೈನುಗಾರಿಕೆ, ಕುರಿ ಕೋಳಿ ಸಾಕಾಣಿಕೆಗೆ ಉದ್ಯಮಕ್ಕೆ ಸಿಂಗಲ್‌ ಫೇಸ್‌ ವಿದ್ಯುತ್‌ ನೀಡಬೇಕು. ಮಾನವೀಯತೆಯಿಂದ ರೈತರಿಗೆ ಬೆಳಗಿನ 6ರಿಂದ ಮಧ್ಯಾಹ್ನ 12ಗಂಟೆ ವರೆಗೆ ತ್ರಿಫೇಸ್‌, ಮಧ್ಯಾಹ್ನ 12ರಿಂದ ಸಂಜೆ 7ಗಂಟೆ ವರೆಗೆ ತ್ರಿಫೇಸ್‌ ವಿದ್ಯುತ್‌ ನೀಡಬೇಕು. ರಾತ್ರಿ 7ಗಂಟೆಯಿಂದ ಬೆಳಗ್ಗೆ 6ಗಂಟೆ ವರೆಗೆ ಸಿಂಗಲ್‌ ಫೇಸ್‌ ವಿದ್ಯುತ್‌ ಪೂರೈಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಜೆಸ್ಕಾಂ ಎಇಇ ಮಾಣಿಕರಾವ್‌ ಕುಲಕರ್ಣಿ, ಬೇಡಿಕೆಗಳ ಕುರಿತು ಸರ್ಕಾರ ಮತ್ತು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.

ರೈತ ರಾಜೇಂದ್ರ ಖಾನಾಪುರೆ, ಸೂರ್ಯಕಾಂತ ಪೊಲೀಸ್‌ ಪಾಟೀಲ, ನಾಗೇಂದ್ರ ಮುಗಳೆ, ಬಸವರಾಜ ಖೇಡ, ಪಂಡೀತರಾವ ಜಿಡಗೆ, ಶಿವಕಿರಣ ಪಾಟೀಲ, ಮುಬಾರಕ್‌ ಮುಲಗೆ, ವಿಶ್ವನಾಥ ಜಮಾದಾರ ಹಾಗೂ ಸಾವಳೇಶ್ವರ, ಚಿಂಚೋಳಿ ಕೆ., ಚಿಂಚೋಳಿ ಬಿ., ಪಡಸಾವಳಿ, ನಾಗಲೇಗಾಂವ, ಸಕ್ಕರಗಾ, ಹಿರೋಳ್ಳಿ, ಅಂಬೇವಾಡ ಗ್ರಾಮದ ರೈತರು ಭಾಗವಹಿಸಿದ್ದರು. ಪಿಎಸ್‌ಐ ಮಲ್ಲಣ್ಣಾ ಯಲ್ಲಗೊಂಡ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.

ಟಾಪ್ ನ್ಯೂಸ್

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

1-d-s-sfsf

ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

1-fsfdf

ಹೆಚ್ಚುತ್ತಿರುವ ಮಂಕಿ ಪಾಕ್ಸ್ ಸೋಂಕಿನ ಪ್ರಮಾಣ : ಸಲಿಂಗಕಾಮಿಗಳಿಗೆ ಎಚ್ಚರಿಕೆ

1-dfdffds

ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

dk shi 2

ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ

ಕಲಬುರಗಿ: ರೌಡಿ ಶೀಟರ್ ರಮೇಶ ಕಾಳೆ ಗಡಿಪಾರು

ಕಲಬುರಗಿ: ರೌಡಿ ಶೀಟರ್ ರಮೇಶ ಕಾಳೆ ಗಡಿಪಾರು

ಚಿಂಚೋಳಿ: ಹೆಸರು ನೋಂದಣಿಗೆ ಮಧ್ಯರಾತ್ರಿಯಿಂದಲೇ ಸರತಿ ಸಾಲಾಗಿ ನಿಂತ ರೈತರು

ಚಿಂಚೋಳಿ: ಹೆಸರು ನೋಂದಣಿಗೆ ಮಧ್ಯರಾತ್ರಿಯಿಂದಲೇ ಸರತಿ ಸಾಲಾಗಿ ನಿಂತ ರೈತರು

9protest

ಶಾಸಕಿ ಮನೆ ಮುಂದೆ ಧರಣಿ

8notice

ತುರ್ತು ಸಭೆಗೆ ಬಾರದ ಅಧಿಕಾರಿಗೆ ನೋಟಿಸ್‌: ತಾಪಂ ಇಒ ಎಚ್ಚರಿಕೆ

MUST WATCH

udayavani youtube

ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

udayavani youtube

‘ನನಗೆ ಏಳೂವರೆ ಶನಿ ಉಂಟು!’

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ಹೊಸ ಸೇರ್ಪಡೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

Untitled-1

ಶಿಥಿಲಗೊಂಡ ಸರಕಾರಿ ಶಾಲೆಗಳ ಅಭಿವೃದ್ಧಿಪಡಿಸಿ

huvinahadagali

ರೈತರ ಹೊಲಗಳಿಗೆ ಕಲುಷಿತ ನೀರು ತಡೆಗೆ ಮನವಿ

17

ಪಶು ಆಸ್ಪತ್ರೆಗೆ ಸಿಬ್ಬಂದಿ ನೇಮಿಸಲು ಒತ್ತಾಯ

1-f-fdsf

ಗೋವಾದಲ್ಲಿ ಸನ್‍ಬರ್ನ್ ಫೆಸ್ಟಿವಲ್ ಆಯೋಜನೆಗೆ ಅವಕಾಶವಿಲ್ಲ : ಸಚಿವ ಖಂವಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.