ಭರದಿಂದ ನಡೆಯುತ್ತಿದೆ ಸರನಾಲೆ ಸೇತುವೆ; ಮಳೆಗೆ ಕೊಚಿಕೊಂಡು ಹೋಗಿದ್ದ ತಾತ್ಕಾಲಿಕ ಸೇತುವೆ

ಸುರಿದ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿ ಮೂರು ತಿಂಗಳ ಕಾಲ ರಸ್ತೆ ಸಂಪರ್ಕ ಕಡಿತವಾಗಿತ್ತು.

Team Udayavani, Aug 9, 2021, 6:00 PM IST

Bridge

ಚಿಂಚೋಳಿ: ರಾಷ್ಟ್ರೀಯ ಹೆದ್ದಾರಿ 167ರ ಮಾರ್ಗಮಧ್ಯೆ ಬರುವ ಐನೋಳಿ-ದೇಗಲಮಡಿ ಗ್ರಾಮಗಳ ಹತ್ತಿರ ಹರಿಯುವ ಸರನಾಲೆಗೆ ನಿರ್ಮಿಸುತ್ತಿರುವ ದೊಡ್ಡ ಸೇತುವೆ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ.

ಐನೋಳಿ-ಮನ್ನಾಎಕ್ಕೆಳ್ಳಿ-ಬೀದರ ನಗರಕ್ಕೆ ಹೋಗಲು 1979-80ರಲ್ಲಿ ನಿರ್ಮಿಸಿದ ಸೇತುವೆ ಸಂಪೂರ್ಣ ಶಿಥಿಲವಾಗಿದ್ದರಿಂದ ವಾಹನಗಳ ಓಡಾಟಕ್ಕೆ ಅಪಾಯ ಇರುವುದನ್ನು ಮನಗಂಡು ಹಳೆ ಸೇತುವೆಯನ್ನು ಸಂಪೂರ್ಣ ನೆಲಸಮ ಮಾಡಿ ಹೊಸ ಸೇತುವೆ ನಿರ್ಮಿಸಬೇಕೆಂದು ಐನೋಳಿ, ದೇಗಲಮಡಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದರು.

ಆದರೆ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಳೆ ಸೇತುವೆ ನೆಲಸಮಗೊಳಿಸದೇ ಅದನ್ನೇ ಆಧುನೀಕರಣ ಮಾಡುವ ಕಾರ್ಯಕ್ಕೆ ಮುಂದಾಗಿತ್ತು. ಇದಕ್ಕೆ ಈ ಭಾಗದ ಜನರು ವಿರೋಧ ವ್ಯಕ್ತಪಡಿಸಿದ್ದರು. ಹಳೆ ಸೇತುವೆ ಕೆಡವಿ ಹೊಸ ಸೇತುವೆ ನಿರ್ಮಿಸ ಬೇಕು ಎನ್ನುವ ಜನರ ಬೇಡಿಕೆಗೆ ಆಗಿನ ಶಾಸಕ ಡಾ| ಉಮೇಶ ಜಾಧವ (ಈಗಿನ ಕಲಬುರಗಿ ಸಂಸದ) ಸ್ಪಂದಿಸಿ, ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಅಧಿ ಕಾರಿಗಳೊಂದಿಗೆ ಚರ್ಚಿಸಿ ನೂತನ ಸೇತುವೆ ನಿರ್ಮಾಣಕ್ಕೆ ಸರ್ಕಾರದಿಂದ 5 ಕೋಟಿ ರೂ. ಮಂಜೂರಿ ಮಾಡಿಸಿದ್ದರು. ಹೀಗಾಗಿ ಹೊಸ ಸೇತುವೆ ಕಾಮಗಾರಿ ಆರಂಭವಾಗಿತ್ತು. ಈ ಕಾಮಗಾರಿ ಈಗ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ.

ತಾಲೂಕಿನ ಚಂದ್ರಂಪಳ್ಳಿ ಜಲಾಶಯ ಪ್ರತಿವರ್ಷ ಮಳೆಗಾಲದಲ್ಲಿ ಭರ್ತಿಯಾಗಿ ಹೆಚ್ಚುವರಿ ನೀರು ಸರನಾಲಾ ನದಿಗೆ ಹರಿದು ಬಿಡಲಾಗುತ್ತದೆ. ಆದ್ದರಿಂದ ಸೇತುವೆ ಮೇಲೆ ವಾಹನಗಳು ಸಂಚರಿಸಲು ತೊಂದರೆ ಆಗುತ್ತಿತ್ತು. ಕಳೆದ ವರ್ಷ ಅಕ್ಟೋಬರ್‌, ಸೆಪ್ಟೆಂಬರ್‌ ತಿಂಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ ಸಿಡಿ (ಕೆಳಮಟ್ಟದ ಸೇತುವೆ) ನಿರಂತರ ಸುರಿದ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿ ಮೂರು ತಿಂಗಳ ಕಾಲ ರಸ್ತೆ ಸಂಪರ್ಕ ಕಡಿತವಾಗಿತ್ತು.

ಕೇಂದ್ರ ಸಚಿವ ಭಗವಂತ ಖೂಬಾ, ಕಲಬುರಗಿ ಸಂಸದ ಡಾ|ಉಮೇಶ ಜಾಧವ, ಶಾಸಕ ಡಾ| ಅವಿನಾಶ ಜಾಧವ, ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮದ ಅ ಧಿಕಾರಿಗಳ ಸತತ ಪ್ರಯತ್ನದಿಂದ ಸೇತುವೆ ನಿರ್ಮಾಣ ಕಾಮಗಾರಿ ಒಂದು ತಿಂಗಳಲ್ಲಿ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಬೀದರ-ಮನ್ನಾಎಕ್ಕೆಳ್ಳಿ, ಚಾಂಗಲೇರಾ- ದೇಗಲಮಡಿ, ಚಿಂಚೋಳಿ-ಮಿರಿಯಾಣ, ತಾಂಡೂರ- ಮೆಹಬೂಬ ನಗರ ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಮುಂಬೈ, ಪುಣೆ, ಹೈದ್ರಾಬಾದ, ಸೊಲ್ಲಾಪುರ, ಉಸ್ಮಾನಬಾದ, ಸಂಗಾರೆಡ್ಡಿ, ಲಾತೂರ ಪ್ರದೇಶಗಳಿಗೆ ವ್ಯಾಪಾರಿಗಳು ಮತ್ತು ಪ್ರಯಾಣಿಕರಿಗೆ ಸಂಚರಿಸಲು ಸೇತುವೆಯಿಂದ ಅನುಕೂಲವಾಗುತ್ತದೆ.
ಡಾ| ಅವಿನಾಶ ಜಾಧವ, ಶಾಸಕ

ಹೊಸ ಸೇತುವೆ ನಿರ್ಮಿಸುವಂತೆ ಅನೇಕ ಸಲ ಹೋರಾಟ ನಡೆಸಿದ ಫಲವಾಗಿ ನೂತನ ಸೇತುವೆ ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮಳೆಗಾಲದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ.
ದೀಪಕನಾಗ ಪುಣ್ಯಶೆಟ್ಟಿ,
ಜಿಪಂ ಮಾಜಿ ಅಧ್ಯಕ್ಷ

ಮಳೆಗಾಲದಲ್ಲಿ ತುಂಬಿ ಹರಿಯುವ ನದಿ ದಾಟಲು ಆಗುತ್ತಿಲ್ಲ. ಶಾಸಕರು, ಸಂಸದರು ಮುತುವರ್ಜಿ ವಹಿಸಿ ಸೇತುವೆ ನಿರ್ಮಾಣ ಮಾಡಿಸಿದ್ದರಿಂದ ಜನರಿಗೆ ಅನುಕೂಲವಾಗಲಿದೆ.
ಅವಿನಾಶ ದೇಗಲಮಡಿ, ವಿದ್ಯಾರ್ಥಿ

*ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ತಮಿಳುನಾಡಿನಲ್ಲಿ ನ. 30ರ ವರೆಗೆ ಮಳೆ

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರು

ಸರಕಾರಿ ಹಾಸ್ಟೆಲ್‌ಗೆ ಅಧಿಕಾರಿಗಳೇ ಮಾರ್ಗದರ್ಶಕರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2act

ರಾಜ್ಯದ ತಿದ್ದುಪಡಿ ಕಾಯ್ದೆ ವಾಪಸ್‌ ಆಗಲಿ

crime (2)

ನಡು ರಸ್ತೆಯಲ್ಲೇ ಚಾಕುವಿನಿಂದ‌ ಇರಿದು ಯುವಕನ ಬರ್ಬರ ಹತ್ಯೆ

19bus

ಬಸ್‌ ಸೌಲಭ್ಯ ಒದಗಿಸಲು ಆಗ್ರಹ

16vote

ಮತದಾರರ ಸಮಸ್ಯೆಗೆ ಸ್ಪಂದನೆ

13banana

ರೈತರಿಂದ ಬಾಳೆಹಣ್ಣು ಖರೀದಿಸಿ ವಿತರಣೆ

MUST WATCH

udayavani youtube

ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ

udayavani youtube

ಇಡೀ ವರ್ಷದ ಪಾಠ ಕೇವಲ 199 ರೂಪಾಯಿಗಳಿಗೆ !

udayavani youtube

ಕೃಷಿ ಬಿಕ್ಕಟ್ಟನ್ನು ಹೇಗೆ ಎದುರಿಸಬೇಕು ?

udayavani youtube

ಕಂಗನಾಗೆ ದೆಹಲಿ ವಿಧಾನಸಭೆ ಸಮಿತಿ ಸಮನ್ಸ್‌

udayavani youtube

ಮಾಜಿ ಶಾಸಕರ ಕಾಂಪ್ಲೆಕ್ಸ್ ನಲ್ಲಿ ಲಕ್ಷಾಂತರ ರೂ. ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

2act

ರಾಜ್ಯದ ತಿದ್ದುಪಡಿ ಕಾಯ್ದೆ ವಾಪಸ್‌ ಆಗಲಿ

sakath movie

‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

1maraton

ಮೀಸಲು ಅರಣ್ಯದಲ್ಲಿ ಮ್ಯಾರಥಾನ್ ಗೆ ಪರಿಸರ ಪ್ರಿಯರ ವಿರೋಧ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ಕೋವಿಡ್ ರೂಪಾಂತರಿ ಆತಂಕ: ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

ನಥಿಂಗ್‍ ನಲ್ಲಿ ಯುವರಾಜ್‍ ಸಿಂಗ್‍, ಕರಣ್‍ ಜೋಹರ್ ಹೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.