ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ

ಕೂಲಿ ಕಾರ್ಮಿಕರು-ಅಲೆಮಾರಿಗಳಿಗೆ ಊಟ-ನೀರು ತಲುಪಿಸಿ |ಅಧಿಕಾರಿಗಳಿಗೆ ಸಚಿವರ ಕ್ಲಾಸ್‌

Team Udayavani, Apr 16, 2020, 12:30 PM IST

16-April-07

ಶಹಾಪುರ: ತಾಪಂ ಸಭಾಂಗಣದಲ್ಲಿ ನಡೆದ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಮಾತನಾಡಿದರು.

ಶಹಾಪುರ: ವಿಶ್ವದೆಲ್ಲೆಡೆ ಕೋವಿಡ್ ವೈರಸ್‌ ವ್ಯಾಪಿಸುತ್ತಿದ್ದು, ದೇಶದಲ್ಲಿಯೂ ರೋಗ ತಡೆಗೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಸೂಚಿಸಿದ ಮಾರ್ಗಸೂಚಿಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.

ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಕೋವಿಡ್ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಕೋವಿಡ್ ವಿರುದ್ಧ ಹೋರಾಡಲು ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕೂಲಿ ಕಾರ್ಮಿಕರು, ಅಲೆಮಾರಿಗಳು, ಬಡವರಾರು ಹಸಿವಿನಿಂದ ಬಳಲದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ರೇಷನ್‌ ಕಾರ್ಡ್‌ ಇಲ್ಲದವರಿಗೆ ರೇಷನ್‌ ನೀಡದಿರುವ ಕುರಿತು ತಹಶೀಲ್ದಾರ್‌ ಸೇರಿದಂತೆ ಆಹಾರ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ತಾಲೂಕಿನಲ್ಲಿ ರೇಷನ್‌ ಕಾರ್ಡ್‌ ಇರದವರು ಎಷ್ಟು ಜನರಿದ್ದಾರೆ? ಎಂದು ಪ್ರಶ್ನಿಸಿದರು. ಸಮರ್ಪಕ ಉತ್ತರ ದೊರೆಯದ ಕಾರಣ ಆಕ್ರೋಶಿತರಾಗಿ ಮೊದಲ ಹಂತದ ಲಾಕ್‌ ಡೌನ್‌ ಮುಗಿದಿದ್ದು, 20 ದಿನಗಳು ಕಳೆದಿವೆ.

ಇನ್ನೂ ನೀವು ಪಟ್ಟಿ ಮಾಡುವ ಹಂತದಲ್ಲಿದ್ದೀರಿ ಎಂದು ಗರಂ ಆದರು. ಯಾದಗಿರಿಯಲ್ಲಿ ಯಾವುದೇ ಪ್ರಕರಣ ಇಲ್ಲವೆಂದು ಸಡಿಲಿಕೆ ಬಿಡದೇ ಜಾಗೃತರಾಗಬೇಕು ಎಂದರು. ಆಹಾರ ಇಲಾಖೆ ಜಿಲ್ಲಾ ನಿರ್ದೇಶಕರಿಗೆ ಫೋನ್‌ ಮೂಲಕ ಸಂಪರ್ಕಿಸಿ ನಾಳೆಯೇ ಬಡವರು-ಕೂಲಿಕಾರ್ಮಿಕರಿಗೆ ರೇಷನ್‌ ಹಾಗೂ ಊಟದ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಮುಕ್ತವಾಗಿ ಮಾತನಾಡಿ, ತೊಂದರೆ ಇದ್ದಲ್ಲಿ ತಿಳಿಸಿ ಪರಿಹಾರ ಕಂಡುಕೊಳ್ಳಿ. ಸಮಸ್ಯೆಯಾದರೆ ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಮಾಹಿತಿ ಹಂಚಿಕೊಳ್ಳಿ. ನನಗೂ ವಾಟ್ಸ್‌ ಆ್ಯಪ್‌ಗೆ ಹಾಕಿ ಪರಿಹರಿಸೋಣ ಎಂದರು. ತಾಲೂಕಿನಲ್ಲಿ ಕೂಲಿ ಕಾರ್ಮಿಕರು, ಅಲೆಮಾರಿಗಳಿಗೆ ತಾಲೂಕು ಆಡಳಿತದಿಂದ ಊಟದ ವ್ಯವಸ್ಥೆ, ರೇಷನ್‌ ಕಾರ್ಡ್‌ ಇರದವರಿಗೆ ರೇಷನ್‌ ವ್ಯವಸ್ಥೆ ಆಗಿಲ್ಲ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

ಈ ಕುರಿತು ತಹಶೀಲ್ದಾರನ್ನು ಪ್ರಶ್ನಿಸಿದ ಸಚಿವರು, ಕೊರೊನಾ ತಡೆಗೆ ಏನೇನು ಕ್ರಮ ತೆಗೆದುಕೊಂಡಿದ್ದೀರಿ?, ಬಂದ ಅನುದಾನದಲ್ಲಿ ಎಷ್ಟು ಖರ್ಚು ಮಾಡಿದ್ದೀರಿ? ಎಂದು ಪ್ರಶ್ನಿಸಿದರು. ಕೂಡಲೇ ಸಮರ್ಪಕವಾಗಿ ಕರ್ತವ್ಯ ನಿಭಾಯಿಸದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಶಹಾಪುರ ಮತ್ತು ವಡಗೇರಾ ತಾಲೂಕಿನಲ್ಲಿ ಕೂಲಿ ಕಾರ್ಮಿಕರು-ಅಲೆಮಾರಿಗಳ ಸಂಖ್ಯೆ ಎಷ್ಟಿದೆ ಎಂದು ಸಚಿವರು ಕೇಳಿದಾಗ, ಅಧಿಕಾರಿಗಳು ಕೇವಲ 365 ಜನ ಎಂದು ಪಟ್ಟಿ ತೋರಿಸಿದರು.

ಎರಡು ತಾಲೂಕಿನಲ್ಲಿ ಇಷ್ಟೇ ಜನ ಇದೆಯೇ ಎಂದು ಶಾಸಕರಿಬ್ಬರು- ಸಚಿವರು ಸಿಬ್ಬಂದಿಗಳು ಮತ್ತು ತಾಲೂಕು ದಂಡಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೂಡಲೇ ಸಮರ್ಪಕ ಪಟ್ಟಿ ಸಿದ್ಧಪಡಿಸುವಂತೆ ಅವರಿಗೆ ನಿತ್ಯ ಊಟ ಮತ್ತು ರೇಷನ್‌ ಮುಟ್ಟಿಸುವ ವ್ಯವಸ್ಥೆ ಮಾಡಲು ಸೂಚಿಸಿದರು.

ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಯಾದಗಿರಿ ಶಾಸಕ ವೆಂಕಟರಡ್ಡಿ ಮುದ್ನಾಳ, ತಹಶೀಲ್ದಾರ್‌ ಜಗನ್ನಾಥರಡ್ಡಿ, ತಾಪಂ
ಅಧ್ಯಕ್ಷ ನಾಗಪ್ಪ ಪೂಜಾರಿ ಇದ್ದರು.

ನಗರದಲ್ಲಿ ನಿರ್ಗತಿಕರು, ಹಸಿವಿನಿಂದ ಬಳಲುವವರಿಗೆ ದಾನಿಗಳು ಊಟದ ವ್ಯವಸ್ಥೆ ಮಾಡಿದ್ದಾರೆ. ತಾಲೂಕಾಡಳಿತ ಕೂಲಿ ಕಾರ್ಮಿಕರು-ಬಡವರಿಗೆ ಊಟದ ವ್ಯವಸ್ಥೆ ಮಾಡಬೇಕು. ಲಾಕ್‌ಡೌನ್‌ ಸಡಿಲಿಸದೇ ಕಠಿಣ ಕ್ರಮ ಕೈಗೊಳ್ಳಬೇಕು. ಶಹಾಪುರದಲ್ಲಿ ಬೆಳಗ್ಗೆ 6 ರಿಂದ 10 ಗಂಟೆವರೆಗೆ ತರಕಾರಿ, ದಿನಸಿ ಅಂಗಡಿಗಳನ್ನು ತೆರೆದು ನಂತರ ಬಂದ್‌ ಮಾಡಬೇಕು. ಈ ಮೂಲಕ ಅಧಿಕಾರಿಗಳು ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು.
ಶರಣಬಸಪ್ಪಗೌಡ ದರ್ಶನಾಪುರ
ಶಾಸಕರು, ಶಹಾಪುರ

ಶಹಾಪುರ, ವಡಗೇರಾ ತಾಲೂಕಿನ ಕೂಲಿ ಕಾರ್ಮಿಕರು, ಅಲೆಮಾರಿಗಳು ಸೇರಿದಂತೆ ನಿತ್ಯ ದುಡಿದು ತಿನ್ನುವ ಕುಟುಂಬಗಳಿವೆ. ಅಂಥವರು ಲಾಕ್‌ ಡೌನ್‌ನಿಂದ ಪರದಾಡುತ್ತಿದ್ದು, ಅವರಿಗೆ ಊಟದ ವ್ಯವಸ್ಥೆ ಮಾಡಬೇಕು. ರೇಷನ್‌ ಕಾರ್ಡ್‌ ಇಲ್ಲದವರಿಗೂ ರೇಷನ್‌
ತಲುಪಿಸುವ ವ್ಯವಸ್ಥೆಯಾಗಬೇಕು.
ವೆಂಕಟರಡ್ಡಿ ಮುದ್ನಾಳ
ಶಾಸಕರು, ಯಾದಗಿರಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.