ದೇಶದ ಭವಿಷ್ಯ ಬರೆದಿದ್ದು ಅಂಬೇಡ್ಕರ್‌: ಖರ್ಗೆ

Team Udayavani, Apr 29, 2022, 12:13 PM IST

7karge

ಜೇವರ್ಗಿ: ಡಾ| ಬಾಬಾಸಾಹೇಬ ಅಂಬೇಡ್ಕರ್‌ ಕಷ್ಟಪಟ್ಟು ಸಂವಿಧಾನ ಬರೆದು ದೇಶದ 138 ಕೋಟಿ ಜನರ ಭವಿಷ್ಯ ರೂಪಿಸಿದ್ದಾರೆ ಎಂದು ರಾಜ್ಯಸಭೆ ವಿರೋಧಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಪಟ್ಟಣದಲ್ಲಿ ನಿರ್ಮಿಸಿದ ಡಾ| ಬಾಬಾಸಾಹೇಬ ಅಂಬೇಡ್ಕರ್‌ ಭವನ ಉದ್ಘಾಟನೆ ಹಾಗೂ 131ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲು ಬಾಬಾಸಾಹೇಬರು ಕಾರಣ. ಈ ದೇಶದಲ್ಲಿ ಸಂವಿಧಾನ ಹಾಳು ಮಾಡುವ ಹಾಗೂ ನಿಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಕೆಲವು ಜನ ಹುಟ್ಟಿದ್ದಾರೆ. ಅವರಿಗೆ ಪಾಠ ಕಲಿಸಬೇಕಾದರೇ ತಾವೆಲ್ಲರೂ ಡಾ| ಅಂಬೇಡ್ಕರ್‌ ಅವರ ಮಾರ್ಗದಲ್ಲಿ ನಡೆಯಬೇಕು ಎಂದರು.

ಸಾಮಾಜಿಕ ಸಮಾನತೆ, ಆರ್ಥಿಕ ಬಲ ತುಂಬಿದ ಬಾಬಾಸಾಹೇಬರ ಕೊಡುಗೆ ಅಪಾರವಾ ಗಿದೆ. ಈ ದೇಶದ ಮಣ್ಣಿನ ಮಕ್ಕಳ ರಕ್ಷಣೆಗೆ ಬಾಬಾಸಾಹೇಬ ಅವತರಿಸಿ ಬಂದಿದ್ದಾರೆ. ಈ ದೇಶ ಗುಲಾಮಗಿರಿಯಲ್ಲಿ ಇರಬೇಕಾದರೇ ಮನುಸ್ಮೃತಿ ಕಾರಣ. ಮನುವಿನಿಂದ ಈ ದೇಶ ಹಾಳಾಗಿ ಹೋಗಿದೆ. ಕಟ್ಟೆ ಮೇಲೆ ಕುಳಿತು ಮಾತನಾಡುವುದರಿಂದ ಸಮಾಜ ಮುಂದೇ ಬರಲು ಸಾಧ್ಯವಿಲ್ಲ. ನಿಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡುವ ಮೂಲಕ ಮುಂದೇಬರಬೇಕು. ನಿಮ್ಮ ಹಕ್ಕಿಗಾಗಿ ನೀವೇ ಹೋರಾಟ ಮಾಡಬೇಕು, ಎಲ್ಲಾ ಧರ್ಮದವರ ಜತೆ ಸೌಜನ್ಯದಿಂದ ಕೂಡಿ ಬಾಳಬೇಕು ಎಂದರು.

ಶಾಸಕ ಡಾ| ಅಜಯಸಿಂಗ್‌ ಮಾತನಾಡಿ, 224 ಕ್ಷೇತ್ರಗಳಲ್ಲಿ ಜಾತ್ಯಾತೀತ ಕ್ಷೇತ್ರ ಜೇವರ್ಗಿ ಕ್ಷೇತ್ರ ಪ್ರಸಿದ್ಧಿಯಾಗಿದೆ. ಬಾಬಾಸಾಹೇಬರು ಕೇವಲ ಒಂದು ಜಾತಿಗೆ ಸೀಮಿತವಲ್ಲ ಎಂಬುದು ಕಾರ್ಯಕ್ರಮದ ಮೂಲಕ ಸಾಬೀತಾಗಿದೆ. ಎಲ್ಲ ಜಾತಿ ಜನಾಂಗದದವರು ಸೇರಿ ಅಭೂತಪೂರ್ವ ಕಾರ್ಯಕ್ರಮ ಆಯೋಜಿಸಿದ್ದು ಶ್ಲಾಘನೀಯ. ದಿ.ಧರಂಸಿಂಗ್‌ ಅವರು ನೂತನ ಭವನಕ್ಕೆ ಅಡಿಗಲ್ಲು ಹಾಕಿ, ಇಂದು ಡಾ| ಖರ್ಗೆ ಅವರಿಂದ ಲೋಕಾರ್ಪಣೆಗೊಂಡಿದ್ದು ಸಂತಸದ ವಿಷಯ ಎಂದರು.

ಡಾ| ಬಿ.ಆರ್‌.ಅಂಬೇಡ್ಕರ್‌ ಭವನ ಉದ್ಘಾಟನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಹರನಾಳ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ರಾಯಪ್ಪ ಬಾರಿಗಿಡ ಅಧ್ಯಕ್ಷತೆ ವಹಿಸಿದ್ದರು. ಬೀದರನ ಅಣದೂರ ಬುದ್ಧವಿಹಾರದ ವರಜ್ಯೋತಿ ಬಂತೇಜಿ, ಕಲಬುರಗಿ ಬುದ್ಧವಿಹಾರದ ಸಂಘಾನಂದ ಬಂತೇಜಿ, ಮೈಸೂರಿನ ಉರಿಲಿಂಗಪೆದ್ದಿ ಸಂಸ್ಥಾನ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೇಂದ್ರಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ| ಅಪ್ಪುಗೆರೆ ಸೋಮಶೇಖರ ಮುಖ್ಯಭಾಷಣ ಮಾಡಿದರು.

ಅಫಜಲಪುರ ಶಾಸಕ ಎಂ.ವೈ.ಪಾಟೀಲ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅಲ್ಲಮಪ್ರಭು ಪಾಟೀಲ, ಕೇದಾರಲಿಂಗಯ್ಯ ಹಿರೇಮಠ, ಗೊಲ್ಲಾಳಪ್ಪ ಯಾತನೂರ, ಪುರಸಭೆ ಅಧ್ಯಕ್ಷೆ ಶರಣಮ್ಮ ತಳವಾರ, ಶಿವಾನಂದ ಪಾಟೀಲ ಮರತೂರ, ಜಗದೇವ ಗುತ್ತೇದಾರ, ಜಿ.ಪಂ. ಮಾಜಿ ಸದಸ್ಯರಾದ ಶಾಂತಪ್ಪ ಕೂಡಲಗಿ, ಮರೆಪ್ಪ ಬಡಿಗೇರ, ಮುಖಂಡರಾದ ಸುಭಾಸ ಚನ್ನೂರ, ಪುಂಡಲೀಕ ಗಾಯಕವಾಡ, ಮಲ್ಲಣ್ಣ ಕೊಡಚಿ, ಭೀಮರಾಯ ನಗನೂರ, ಶಾಂತಪ್ಪ ಯಲಗೋಡ, ಸಿದ್ರಾಮ ಕಟ್ಟಿ, ಶ್ರೀಹರಿ ಕರಕಿಹಳ್ಳಿ, ಶ್ರೀಮಂತ ಧನಕರ್‌, ಬೆಣ್ಣೆಪ್ಪ ಕೊಂಬಿನ್‌, ಶರಣಬಸವ ಕಲ್ಲಾ, ಹಯಾಳಪ್ಪ ಗಂಗಾಕರ್‌, ಸಂಗಮೇಶ ಕೊಂಬಿನ್‌, ದವಲಪ್ಪ ಮದನ್‌, ರವಿ ಕುರಳಗೇರಾ, ಸಿದ್ಧಪ್ಪ ಆಲೂರ, ರಾಜಶೇಖರ ಶಿಲ್ಪಿ ಹಾಗೂ ಸಹಸ್ರಾರು ಜನ ಭಾಗವಹಿಸಿದ್ದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.