ಕನ್ನಡ ಧ್ವಜ ಸುಟ್ಟಿದ್ದಕ್ಕೆ ಭುಗಿಲೆದ್ದ ಆಕ್ರೋಶ


Team Udayavani, Dec 17, 2021, 11:27 AM IST

6karave

ಕಲಬುರಗಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಿರುವ ಪ್ರಕರಣವನ್ನು ಕನ್ನಡ ಪರ ಸಂಘಟನೆಗಳು ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದು,ಈ ಕೃತ್ಯ ಎಸಗಿದಕಿಡಿಗೇಡಿಗಳ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿವೆ.

ಶಿವಸೇನೆ ಕಾರ್ಯಕರ್ತರು ಕನ್ನಡದ ಧ್ವಜ ಸುಟ್ಟು ಹಾಕಿದ್ದು, ಅವರ ವಿರುದ್ಧ ಸೂಕ್ತ ಕಾನೂನಿನ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜೈ ಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮುಖ್ಯ ರಸ್ತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕನ್ನಡ ಬಾವುಟವನ್ನು ಧ್ವಂಸಗೊಳಿಸಿ, ಸುಟ್ಟು ಹಾಕಿರುವುದು ಖಂಡನೀಯ. ಇಂತಹ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದರು.

ಸಂಘಟನೆ ಅಧ್ಯಕ್ಷ ದತ್ತು ಭಾಸಗಿ, ರಾಮ ಪೂಜಾರಿ, ಶಿವು ಮಡಕಿ, ಹುಸೇನ್‌, ವಿಠ್ಠಲ ಪೂಜಾರಿ, ಸುರೇಶ ಕುಂಬಾರ, ಆಕಾಶ ಚವ್ಹಾಣ, ಶರಣು ಕಡಗಂಚಿ, ಆನಂದ, ಪಪ್ಪು ಕುಮಸಿ, ಆಕಾಶ ಚಿಂಚೋಳಿ, ಚೇತನ ಮತ್ತಿತರರು ಪಾಲ್ಗೊಂಡಿದ್ದರು.

ಕರ್ನಾಟಕ ರಕ್ಷಣಾ ವೇದಿಕೆ

ಕರ್ನಾಟಕ ರಕ್ಷಣಾ ವೇದಿಕೆಯಿಂದಲೂ ಜಿಲ್ಲಾಧಿಕಾರಿ ಕಚೇರಿ ಎದುರು ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟು ಹಾಕಿದ ಶಿವಸೇನೆ ಮತ್ತು ಎಂಇಎಸ್‌ ಸಂಘಟನೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಬೆಳಗಾವಿ ಜಿಲ್ಲೆಯಿಂದ ಎಂಇಎಸ್‌ ಹಾಗೂ ಶಿವಸೇನೆ ಎರಡೂ ಸಂಘಟನೆಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು. ಕರ್ನಾಟಕ ಯಾವುದೇ ಭಾಗದಲ್ಲಿ ಇನ್ಮುಂದೆ ಈ ಸಂಘಟನೆಗಳ ಧ್ವಜ ಕಾಣದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ಸಂಘಟನೆ ಜಿಲ್ಲಾಧಕ್ಷ ಮಹೇಶಕಾಶಿ, ತಾಲೂಕಾಧ್ಯಕ್ಷ ಪುನೀತ ರಾಜ ಕವಡೆ, ಅಶೋಕ್‌ ಬಿನಳ್ಳಿ, ಶರಣಗೌಡ ಪಾಟೀಲ, ಸಂತೋಷ ಖಣದಾಳ, ಸಿದ್ಧಣಗೌಡ ಪಾಟೀಲ, ಕಲ್ಯಾಣಿ ತಳವಾರ, ಮಂಜುಳಾ ರಾಠೊಡ, ಪೃಥ್ವಿರಾಜ ರಾಂಪೂರ, ಶ್ರೀಶೈಲ ಕಣ್ಣೂರ ಇದ್ದರು.

ಕನ್ನಡ ರಣಧೀರರ ಪಡೆ

ಕನ್ನಡ ಬಾವುಟ ಸುಟ್ಟು ಹಾಕಿದ ಶಿವಸೇನೆ ಮತ್ತು ಎಂಇಎಸ್‌ ಪುಂಡರ ಮೇಲೆ ತಕ್ಷಣವೇ ಎಫ್‌ಐಆರ್‌ ಹಾಕಿ ಕಠಿಣ ಕ್ರಮ ಜರುಗಿಸಬೇಕೆಂದು ಕನ್ನಡ ‌ರಣಧೀರರ ಪಡೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕನ್ನಡದ ಧ್ವಜವ‌ನ್ನು ರಾಜಾರೋಷವಾಗಿ ಸುಟ್ಟು ಹಾಕಿರುವುದು ಅಪರಾಧವಾಗಿದೆ. ಇಂತಹ ಕಿಡಿಗೇಡಿಗಳನ್ನು ಕೂಡಲೇ ಪೊಲೀಸ್‌ ವಶಕ್ಕೆ ಪಡೆಯಬೇಕೆಂದು ಸಂಘಟನೆ ಜಿಲ್ಲಾಧ್ಯಕ್ಷ ಶೇಷಗಿರಿ ಮರತೂಕರ ಮನವಿ ಸಲ್ಲಿಸಿದರು. ಮುಖಂಡರಾದ ಮಹೇಶ ನಾಗನಹಳ್ಳಿ, ಮಲ್ಲಿಕಾರ್ಜುನ ಹೀರಾಪೂರ, ಸಾಯಿ ನಾಗನಹಳ್ಳಿ, ಶೇಖರ ಬೋಳವಾಡ, ಸಿದ್ದು, ಮಲ್ಲು ನರಬೋಳಿ, ನವೀನ, ವಿಶ್ವನಾಥ ಈ ಸಂದರ್ಭದ‌ಲ್ಲಿ ಇದ್ದರು‌.

ಮುಖಂಡರ ಖಂಡನೆ

ಕನ್ನಡಾಂಬೆ ಬಾವುಟ ಸುಟ್ಟು ಹಾಕಿ ಪುಂಡಾಟಿಕೆ ಮೆರೆದಿರುವ ಶಿವಸೇನೆ ಮತ್ತು ಎಂಇಎಸ್‌ ನಡೆಯ‌ನ್ನು ಕರ್ನಾಟಕ ರಕ್ಷಣಾ ವೇದಿಕೆ  ಸಂಚಾಲಕ ಮಂಜುನಾಥ ನಾಲವಾರಕರ್‌, ಕರವೇ (ಕನ್ನಡಿಗರ ಬಣ)ದ ಜಿಲ್ಲಾಧ್ಯಕ್ಷ ಆನಂದ ತೆಗನೂರ ಖಂಡಿದ್ದಾರೆ. ಕರ್ನಾಟಕ ಮತ್ತು ಕನ್ನಡಿಗರ ಸ್ವಾಭಿಮಾನ ಕೆಣಕುವ ಕೆಲಸಕ್ಕೆ ಪುಂಡರು ಕೈಹಾಕಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸುತ್ತಿರುವ ಸಂದರ್ಭದಲ್ಲಿಈಕೃತ್ಯ ಎಸಗಿಸುವುದು ಖಂಡನೀಯ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.