ಕಾಳಗಿ ಬಜಾರ್‌ ರಸ್ತೆಗೆ ಅಗಲೀಕರಣ ಭಾಗ್ಯ

Team Udayavani, Dec 17, 2021, 3:16 PM IST

15road

ಕಾಳಗಿ: ಅತ್ಯಂತ ಇಕ್ಕಟ್ಟಿನಿಂದ ಕೂಡಿರುವ ಇಲ್ಲಿನ ಮುಖ್ಯ ಬಜಾರ್‌ ರಸ್ತೆ ಅಗಲೀಕರಣಕ್ಕೆ ಸ್ಥಳೀಯ ಆಡಳಿತ ಮುಂದಾಗಿದ್ದು, ಸಾರ್ವಜನಿಕರ ಬಹುದಿನಗಳ ಕನಸು ನನಸಾಗುವ ಕಾಲ ಕೂಡಿಬಂದಿದೆ.

ತಾಲೂಕು ಕೇಂದ್ರವಾಗಿರುವ ಪಟ್ಟಣದ ಪ್ರಮುಖ ಮಾರುಕಟ್ಟೆ ಇದಾಗಿದ್ದು, ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನ, ಸಾವಿರಾರು ಜನರು ಓಡಾಡುತ್ತಾರೆ. ಆದರೆ ಇಲ್ಲಿ ಓಡಾಡುವ ಜನತೆ ಹಾಗೂ ವಾಹನಗಳ ದಟ್ಟಣೆಗೆ ತಕ್ಕುದಾದ ರಸ್ತೆ ಇರಲಿಲ್ಲ. ವಾರದ ಸಂತೆಯೂ ಇಲ್ಲೇ ನಡೆಯುವುದರಿಂದ ಅದಕ್ಕೂ ಬಹಳಷ್ಟು ತೊಂದರೆಯಿದೆ. ಹೀಗಾಗಿ ಈ ರಸ್ತೆ ಅಗಲ ಮಾಡುವಂತೆ ಸಾರ್ವಜನಿಕರು ಹಲವು ವರ್ಷಗಳಿಂದ ಸ್ಥಳೀಯ ಆಡಳಿತಗಾರರ ಮೇಲೆ ಒತ್ತಡ ಹೇರುತ್ತಲೇ ಬರುತ್ತಿದ್ದರು.

ಕೆಲವು ಪ್ರಭಾವಿ ವ್ಯಾಪಾರಸ್ಥರ ವಿರೋಧ ಹಾಗೂ ಆಗಿನ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಮಾರುಕಟ್ಟೆಯ ರಸ್ತೆ ಅಗಲೀಕರಣ ನನೆಗುದಿಗೆ ಬೀಳುತ್ತಲೆ ಸಾಗಿತ್ತು. ಇದೀಗ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಇದರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಮೂರು ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರಾಗಿದ್ದು, ಅದರಲ್ಲಿ ಇಲ್ಲಿನ ಬಸ್‌ ನಿಲ್ದಾಣದಿಂದ ಚೆನ್ನಬಸಪ್ಪ ಮಾಕಪನೋರ ಅಂಗಡಿ ವರೆಗೆ 500 ಮೀ. ಉದ್ದ, 33 ಅಡಿ ಅಗಲದ ಸಿಸಿ ರಸ್ತೆ ಮತ್ತು ಎರಡೂ ಬದಿ ಆರ್‌.ಸಿಸಿ ಚರಂಡಿ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ.

ಯೋಜನೆ ಜಾರಿಗೊಳಿಸುವ ಮೊದಲ ಹಂತವಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ ತೆಲಾಂಗ್‌ ನೇತೃತ್ವದಲ್ಲಿ ರಸ್ತೆಯನ್ನು ಮೇಜರಿಂಗ್‌ ಟೇಪ್‌ನಿಂದ ಅಳತೆ ಮಾಡಿ ಕೆಂಪು ಬಣ್ಣದಿಂದ ಸ್ಥಳ ಗುರುತಿಸುವ ಕೆಲಸ ಕೈಗೊಳ್ಳಲಾಗಿದೆ. ರಸ್ತೆ ಪಕ್ಕದ ಸುಮಾರು 63 ಕಟ್ಟಡಗಳ ಮಾಲೀಕರಿಗೆ ಅತಿಕ್ರಮಿತ ಸ್ಥಳ ಖಾಲಿಮಾಡಿ ಕೊಡಲು ಸೂಚಿಸಲಾಗಿದೆ. ಪಪಂ ಹೆಚ್ಚುವರಿ ಮುಖ್ಯಾಧಿಕಾರಿ ಶೀಲಾಬಾಯಿ, ಕಿರಿಯ ಇಂಜಿನಿಯರ್‌ ದೇವಿಂದ್ರಪ್ಪ, ಆಕಾಶ ರಾಠೊಡ, ಆನಂದ ಕಾಶಿ, ದತ್ತಾತ್ರೇಯ ಕಲಾಲ ಹಾಗೂ ಪಪಂ, ಪೊಲೀಸ್‌ ಸಿಬ್ಬಂದಿ ಈ ಸಂದರ್ಭದಲ್ಲಿ ಇದ್ದರು.

ಈಗ ಮಾರ್ಕೌಟ್‌ ಕೆಲಸ ಮಾಡಿ ಮುಗಿಸಿದ್ದು, ರಸ್ತೆಯಲ್ಲಿ ಬರುವ ಎಲ್ಲ ಕಟ್ಟಡದ ಮಾಲೀಕರಿಗೂ ಡೆಮಾಲಿಶ್‌ ವಿಷಯ ತಿಳಿಸಲಾಗಿದೆ. ಅವರಿಗೆ ಒಂದು ವಾರದ ಅವಕಾಶ ನೀಡಿದ್ದು, ರಸ್ತೆ ನಿರ್ಮಾಣಕ್ಕೆ ಬೇಕಾಗುವ 33 ಅಡಿ ಜಾಗ ಖಾಲಿ ಮಾಡಿಕೊಡಬೇಕು. ಇಲ್ಲದಿದ್ದರೆ ಒಂದು ವಾರದ ಬಳಿಕ ನಾವೇ ಜೆಸಿಬಿ ಮೂಲಕ ಅತಿಕ್ರಮಣ ಜಾಗ ತೆರವುಗೊಳಿಸಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ಪ್ರಾರಂಭಿಸುತ್ತೇವೆ. ಇದಕ್ಕೆ ಆಸ್ಪದ ಮಾಡಿಕೊಡದೇ ವ್ಯಾಪರಸ್ಥರು ಸಹಕರಿಸಿ ತಾವೇ ಮಾರ್ಕೌಟ್‌ ಮಾಡಿದ ಸ್ಥಳದ ವರೆಗೆ ಜಾಗ ತೆರವು ಮಾಡಬೇಕು. -ವೆಂಕಟೇಶ ತೆಲಾಂಗ್‌, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.