ಯಾದಗಿರಿಯಲ್ಲಿ ಪ್ರತ್ಯೇಕ ಕೋವಿಡ್‌ ಆಸ್ಪತ್ರೆಕಾರ್ಯಾರಂಭ

ಜಿಲ್ಲೆಯಲ್ಲಿ 750 ಬೆಡ್‌ ವ್ಯವಸ್ಥೆಷರತ್ತು ಪಾಲಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್‌ ಸೂಚನೆ

Team Udayavani, Apr 19, 2020, 11:25 AM IST

19-April-05

ಯಾದಗಿರಿ: ಡಿಸಿ ಎಂ. ಕೂರ್ಮಾರಾವ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಯಾದಗಿರಿ: ಕೋವಿಡ್ ವೈರಸ್‌ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಆದೇಶವನ್ನು ಮೇ 3ರ ವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೂ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿಲ್ಲ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಹಲವು ಕಡೆ 750 ಬೆಡ್‌ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾ ಕೇಂದ್ರದ ನೂತನ ಜಿಲ್ಲಾಸ್ಪತ್ರೆಯಲ್ಲಿ 100 ಬೆಡ್‌ ಸಾಮರ್ಥ್ಯದ ಕೋವಿಡ್‌ ಆಸ್ಪತ್ರೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ಜ್ವರ ತಪಾಸಣಾ ಕೇಂದ್ರ ಮತ್ತು 6 ಆರ್‌ ಆರ್‌ಟಿ ತಂಡಗಳ ಮೂಲಕ ಜ್ವರ ತಪಾಸಣೆ ಮಾಡಲಾಗುತ್ತಿದೆ. ಉಸಿರಾಟದ ತೊಂದರೆ ಮತ್ತು ಜ್ವರ ಇರುವವರ ಮಾದರಿಗಳನ್ನು ಕೋವಿಡ್‌-19 ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಶಂಕಿತ ವ್ಯಕ್ತಿಗಳ ಮಾದರಿಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆ, ಸುರಪುರ ಮತ್ತು ಭೀಮರಾಯನಗುಡಿಯಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಅನುಸರಿಸಿ ಸಂಗ್ರಹಿಸಲಾಗುತ್ತಿದೆ. ಅಲ್ಲದೇ ಜ್ವರ ತಪಾಸಣಾ ಕೇಂದ್ರ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಆಶಾ ಕಾರ್ಯಕರ್ತೆಯರು ಮನೆಮನೆ ಸರ್ವೇ ಸಮಯದಲ್ಲಿ ಉಸಿರಾಟದ ತೊಂದರೆ ಮತ್ತು ತೀವ್ರತರದ ಜ್ವರ ಇದ್ದವರನ್ನು ಈ ಮೇಲಿನ ಕೇಂದ್ರಗಳಿಗೆ ಕಳುಹಿಸಿ ಮಾದರಿ ಸಂಗ್ರಹ ಮಾಡಲಾಗುತ್ತಿದೆ. ಸಾರ್ವಜನಿಕರು ಕೂಡ ಇಂತಹ ಲಕ್ಷಣಗಳು ಕಂಡುಬಂದಲ್ಲಿ ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ನೀಡುವುದು ಅವರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಮತ್ತು ಮುಖಗವಸು ಧರಿಸಿ ಕಾರ್ಯನಿರ್ವಹಿಸಬೇಕು. ಆಶಾ ಕಾರ್ಯಕರ್ತೆರಿಗೆ ಸುರಕ್ಷತಾ ಕಿಟ್‌ಗಳನ್ನು ನೀಡಲಾಗಿದೆ. ವೈದ್ಯಕೀಯ ಸೇವೆಗಳು, ಕೃಷಿ ಚಟುವಟಿಕೆ, ಮೀನುಗಾರಿಕೆ, ತರಕಾರಿ ಮತ್ತು ಹಣ್ಣು ಮಾರಾಟಕ್ಕೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಆದರೆ, ಸರ್ಕಾರ ವಿಧಿಸಿರುವ ಷರತ್ತುಗಳನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದರು.

ಜಿಲ್ಲಾದ್ಯಂತ ಬಿಪಿಎಲ್‌ ಮತ್ತು ಎಎವೈ ಕಾರ್ಡ್‌ ಹೊಂದಿರುವ ಪಡಿತರ ಫಲಾನುಭಾವಿಗಳಿಗಾಗಿ 2 ತಿಂಗಳುಗಳ ಆಹಾರ ಧಾನ್ಯ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಶೇ.85.67ರಷ್ಟು ಜನರಿಗೆ ವಿತರಿಸಲಾಗಿದೆ. ಪ್ರತಿದಿನ 10 ಸಾವಿರ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ ಗಳನ್ನು ಸ್ಲಂ- ಕಾರ್ಮಿಕರು-ಕಾಲೋನಿಗಳು- ಕ್ಯಾಂಪ್‌ಗ್ಳಲ್ಲಿ ವಾಸಿಸುತ್ತಿರುವ ಬಡಜನರಿಗೆ ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದ ಹಾನಿಯಾದ ಬೆಳೆಗಳ ಸಮೀಕ್ಷೆಯನ್ನು ಜಂಟಿ ತನಿಖಾ ತಂಡದಿಂದ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಲಾಕ್‌ಡೌನ್‌ ನಿಯಮ ಉಲ್ಲಂಘನೆ ಮಾಡಿದ 31 ಜನರನ್ನು ಬಂಧಿಸಲಾಗಿದ್ದು, ಒಟ್ಟು 43 ಎಫ್‌ಐಆರ್‌ ದಾಖಲಾಗಿದೆ. ಜಿಲ್ಲೆಯ ಗಡಿ ಭಾಗದಲ್ಲಿ ಸ್ಥಾಪಿಸಿರುವ ಒಟ್ಟು 16 ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಮಾಡಿ ಅನವಶ್ಯಕವಾಗಿ ಓಡಾಡುತ್ತಿದ್ದವರ ಒಟ್ಟು 1,283 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇಲ್ಲಿಯವರೆಗೆ 7,71,100 ರೂ. ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನವಣೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.