ಯಾದಗಿರಿ: 61 ಮಂದಿಗೆ ಸೋಂಕು

ಒಂದೇ ಗ್ರಾಮದ 20 ಜನರಿಗೆ ವಕ್ಕರಿಸಿದ ಕೋವಿಡ್  ಮಹಾರಾಷ್ಟ್ರದ ಜತೆಗೆ ಗುಜರಾತ್‌ ನಂಟು

Team Udayavani, Jun 10, 2020, 12:15 PM IST

10-June-06

ಯಾದಗಿರಿ: ಮಂಗಳವಾರವೂ ಯಾದಗಿರಿಯಲ್ಲಿ ಕೋವಿಡ್ ಅಟ್ಟಹಾಸ ಮೆರೆದಿದ್ದು, ಮಹಾರಾಷ್ಟ್ರದ ಜತೆಗೆ ಇದೀಗ ಗುಜರಾತ್‌ ನಂಟೂ ಅಂಟಿದೆ. ಅಲ್ಲದೇ ಗುರುಮಠಕಲ್‌ ತಾಲೂಕಿನ ಕೇಶ್ವಾರ ಗ್ರಾಮದ 4 ವರ್ಷದ ಬಾಲಕಿ (ಪಿ-5864) ಸೇರಿದಂತೆ ಅದೇ ಗ್ರಾಮದ 20 ಜನರಲ್ಲಿ ಮಹಾಮಾರಿ ಕೋವಿಡ್ ವಕ್ಕರಿಸಿದ್ದು ಗ್ರಾಮಸ್ಥರನ್ನು ದಿಗ್ಭ್ರಮೆಗೊಳಿಸಿದೆ.

ಸೋಮವಾರವಷ್ಟೇ ಹಸುಗೂಸನ್ನು ಲೆಕ್ಕಿಸದೆ ಬರೋಬ್ಬರಿ 66 ಜನರಲ್ಲಿ ವಕ್ಕರಿಸಿ, 581 ಇದ್ದ ಸೋಂಕಿತರ ಸಂಖ್ಯೆ ಮಂಗಳವಾರ 61 ಜನ ಸೇರಿ 642 ಜನರಿಗೆ ಸೋಂಕು ದೃಢವಾಗಿದೆ. ಚಿಕ್ಕ ಮಕ್ಕಳು ಸೇರಿದಂತೆ 35 ಪುರುಷರು, 26 ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಗುರುಮಠಕಲ್‌ ತಾಲೂಕಿನ ಚಿಂತನಳ್ಳಿ ಗ್ರಾಮದ 2 ವರ್ಷದ ಹೆಣ್ಣುಮಗು (ಪಿ-5854), 4 ವರ್ಷದ ಹೆಣ್ಣುಮಗು (ಪಿ-5853) ಹಾಗೂ 8 ವರ್ಷದ ಬಾಲಕಿ (ಪಿ-5855) ಸೇರಿ 6 ಜನರಲ್ಲಿ ಸೋಂಕು ಕಾಣಿಸಿದೆ.

ಅಜಲಾಪುರ ಗ್ರಾಮದ 4 ವರ್ಷದ ಬಾಲಕ (ಪಿ- 5892), ಜೈಗ್ರಾಮ್‌, ಮಾಧ್ವಾರ, ಮಗದಂಪುರ ತಾಂಡಾ, ಯಲ್ಹೇರಿ, ಚಿನ್ನಾಕಾರ್‌, ಚಪೆಟ್ಲಾದಲ್ಲಿಯೂ ಸೋಂಕು ಪತ್ತೆಯಾಗಿದ್ದು ಎಲ್ಲರೂ ಮಹಾರಾಷ್ಟ್ರದ ನಂಟು ಹೊಂದಿದ್ದಾರೆ. ಅಲ್ಲದೇ ಗುಜರಾತನ ಅಹಮದಾಬಾದ್‌ನಿಂದ ಆಗಮಿಸಿರುವ ಸುರಪುರ ಮೂಲದ 28 ಮತ್ತು 52 ವರ್ಷದ ಪುರುಷ (ಪಿ-5840, ಪಿ-5842) ಹಾಗೂ 20 ವರ್ಷದ ಮಹಿಳೆ (ಪಿ-5841)ಗೆ ಸೋಂಕು ದೃಢಪಟ್ಟಿದೆ.

431 ಮಾದರಿ ಸಂಗ್ರಹ: ಕೊರೊನಾ ವೈರಸ್‌ ಪರೀಕ್ಷೆಗಾಗಿ ಮಂಗಳವಾರ ಜಿಲ್ಲೆಯಲ್ಲಿ 431 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಇಂದು 661 ನೆಗೆಟಿವ್‌ ವರದಿ ಸೇರಿ ಈವರೆಗೆ 16,977 ಜನರ ವರದಿ ನೆಗೆಟಿವ್‌ ಬಂದಿವೆ. ಇನ್ನೂ 1,437 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್‌ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌19 ಖಚಿತಪಟ್ಟ 642 ವ್ಯಕ್ತಿಗಳ ಪೈಕಿ 113 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,059 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,426 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಜಿಲ್ಲೆಯಲ್ಲಿ 29 ಕಂಟೇನ್‌ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 123 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 71 ಜನರನ್ನು, ಸುರಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 80 ಮತ್ತು ಏಕಲವ್ಯ ಕೊರೊನಾ ಕೇರ್‌ ಸೆಂಟರ್‌ನಲ್ಲಿ 179 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 31 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 1,350 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.