ಶೋಷಿತರ ಧ್ವನಿಯಾಗಿದ್ದ ಬಾಬಾ ಸಾಹೇಬರು

Team Udayavani, Apr 15, 2022, 2:35 PM IST

17babasaheb

ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ ಗೌರಿಗದ್ದೆ ದತ್ತ ಆಶ್ರಮದ ವಿನಯ್‌ ಗುರೂಜಿ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಅಂಗವಾಗಿ ಪ್ರಾಣಿಗಳನ್ನು ದತ್ತು ಪಡೆದರು.

ಚಾಮರಾಜೇಂದ್ರ ಮೃಗಾಲಯ ವತಿಯಿಂದ ಗುರುವಾರ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮ ಮತ್ತು ಮೃಗಾಲಯ ಸಿಬ್ಬಂದಿ ವರ್ಗದವರಿಗೆ ಆಹಾರ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಮೃಗಾಲಯದ ಒಂದು ಹುಲಿ, ಎರಡು ಚಿರತೆ ಮತ್ತು ಒಂದು ಹಾವನ್ನು ಮೂರು ಲಕ್ಷದ ಐದು ಸಾವಿರ ರೂ. ಚೆಕ್‌ ನೀಡಿ ದತ್ತು ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್‌. ಅಂಬೇಡ್ಕರ್‌ ಒಬ್ಬ ಆಧುನಿಕ ಕೃಷ್ಣ. ಕೃಷ್ಣ ಆತ್ಮ ಮತ್ತು ಧರ್ಮದ ಉದ್ಧಾರಕ್ಕಾಗಿ ಶೋಷಣೆಗೆ ಒಳಗಾದವರ ಪರವಾಗಿ ನಿಂತು ಭಗವದ್ಗೀತೆ ನೀಡಿದ್ದ. ಕಲಿಯುಗದಲ್ಲಿ ದೀನ ದಲಿತರಿಗೆ, ಶೋಷಿತರ ಉದ್ಧಾರಕ್ಕಾಗಿ ಅಂಬೇಡ್ಕರ್‌ ಅವರು ಸಂವಿಧಾನ ಎಂಬ ಆತ್ಮರಕ್ಷಣೆ ಗೀತೆಯನ್ನ ಕೊಟ್ಟಿದ್ದಾರೆ. ಅಂಬೇಡ್ಕರ್‌ ಜೀವನ ಚರಿತ್ರೆ ರಾಮಾಯಣ, ಮಹಾಭಾರತಕ್ಕೂ ಕಮ್ಮಿ ಇಲ್ಲ. ಶೋಷಿತರ ಧ್ವನಿಯಾಗಿರುವ ಅವರ ಜಯಂತಿ ಯನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿರುವುದು ಶ್ಲಾಘನೀಯ ಎಂದರು.

ಮೃಗಾಲಯದಲ್ಲಿ ಇಂದು ಪ್ರಾಣಿ ದತ್ತು ಪಡೆಯುವ ಮೂಲಕ ಅಂಬೇಡ್ಕರ್‌ ಜಯಂತಿ ಆಚರಣೆ ಮಾಡ್ತಿದ್ದೇವೆ. ಈಗಿನ ಕಾಲಘಟ್ಟದಲ್ಲಿ ಪ್ರಾಣಿ-ಪಕ್ಷಿಗಳೂ ಕೂಡಾ ಶೋಷಣೆಗೆ ಒಳಗಾಗುತ್ತಿವೆ. ಕಾಡನ್ನು ಕಡಿದು ನಾಡು ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಾಣಿಗಳ ಉಳಿವಿಗಾಗಿ ಗಮನಹರಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಾಣಿ ದತ್ತು ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಅಂಬೇಡ್ಕರ್‌ ಜಯಂತಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ಸದಸ್ಯರಾದ ಜ್ಯೋತಿ ರೇಚಣ್ಣ, ಗೋಕುಲ್‌ ಗೋವರ್ಧನ್‌, ಮುಡಾ ಸದಸ್ಯೆ ಲಕ್ಷ್ಮೀದೇವಿ, ಮೃಗಾಲಯ ಕಾರ್ಯನಿರ್ವಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.