Hunsur: ನಾಗರಹೊಳೆ ಸಾಕಾನೆ ಶಿಬಿರದ ವಿರಾಟ್ ಸಾವು
Team Udayavani, Apr 10, 2024, 1:32 PM IST
ಹುಣಸೂರು: ನಾಗರಹೊಳೆ ಉದ್ಯಾನದ ಆನೆ ಚೌಕೂರು ಸಾಕಾನೆ ಶಿಬಿರದಲ್ಲಿ ಆಶ್ರಯ ಪಡೆದಿದ್ದ ವಿರಾಟ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದಂಚಿನಲ್ಲಿ ಉಪಟಳ ನೀಡುತ್ತಿದ್ದ ಸುಮಾರು 50 ವರ್ಷ ಪ್ರಾಯದ ಸಾಕಾನೆಯನ್ನು 2023ರ ನವೆಂಬರ್ 4 ರಂದು ಸೆರೆ ಹಿಡಿದು ವಿರಾಟ್ ಎಂಬ ಹೆಸರಿಟ್ಟು ಸಾಕಲಾಗುತ್ತಿತ್ತು.
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಈ ಆನೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಸಾವನ್ನಪ್ಪಿದೆ. ವಿಷಯ ತಿಳಿದ ಎಸಿಎಫ್ ದಯಾನಂದ್, ಆರ್.ಎಫ್.ಓ. ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು.
ನಾಗರಹೊಳೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿ, ನಂತರ ಶವವನ್ನು ಅಂತ್ಯ ಸಂಸ್ಕಾರ ನಡೆಸಲಾಯಿತೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ