ಮೈಸೂರು: ವ್ಯಾಪಾರ, ವಹಿವಾಟು ಆರಂಭ


Team Udayavani, May 15, 2020, 6:18 AM IST

mysore-vyapara

ಮೈಸೂರು: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2ಕ್ಕೆ ಇಳಿಕೆಗಿರುವುದು ಹಾಗೂ ಕಳೆದ 15 ದಿನಗಳಿಂದ ಯಾವುದೇ ಹೊಸ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರ, ವಹಿವಾಟಿಗೆ ಅನುಮತಿ ನೀಡಿದ್ದು, ವ್ಯಾಪಾರ, ವಹಿವಾಟು ಗರಿಗೆದರಿಸಿದೆ. ಮೇ 4ರಿಂದಲೇ ನಗರದ ಪ್ರಮುಖ 91 ರಸ್ತೆಗಳನ್ನು ಹೊರತುಪಡಿಸಿ ಉಳಿದ ಕಡೆ ವ್ಯಾಪಾರ ವಹಿವಾಟಿಗೆ ಅನು ಮತಿ ನೀಡಲಾಗಿತ್ತು.

ಆದರೆ, ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ ಅನುಮತಿ ಇರಲಿಲ್ಲ. ಗುರವಾರದಿಂದ ಎಲ್ಲಾ ವ್ಯಾಪಾರ, ವಾಣಿಜ್ಯ ವಹಿವಾಟಿಗೆ ಅನುಮತಿ ನೀಡಿದ ಹಿನ್ನೆಲೆ ನಗರದ ದೇವರಾಜ ಅರಸು ರಸ್ತೆ, ಸಯ್ನಾಜಿರಾವ್‌ ರಸ್ತೆ, ಅಶೋಕರಸ್ತೆ, ತ್ಯಾಗರಾಜ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿರುವ  ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿದ್ದವು. ಇದರಿಂದಾಗಿ ಮೈಸೂರು ಸಹಜ ಸ್ಥಿತಿಗೆ ಮರಳಿದಂತೆ ಕಂಡುಬಂತು.

ವ್ಯಾಪಾರಿಗಳಿಗೆ ಸಂಭ್ರಮ: ಮಾಲ್‌, ಸಿನಿಮಾ ಥಿಯೇಟರ್‌, ಸಲ್ಯೂನ್‌, ದೇವಸ್ಥಾನ ಹೊರತುಪಡಿಸಿ ಉಳಿದಂತೆ ಎಲ್ಲಾ ಮಾದರಿಯ ಅಂಗಡಿಗೆ ಅವಕಾಶ ಕಲ್ಪಿಸಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಸಂಭ್ರಮದಿಂದ ತಮ್ಮ ಅಂಗಡಿ ನೌಕರರೊಡನೆ ಅಂಗಡಿ ಸ್ವತ್ಛಗೊಳಿಸಿ, ಪೂಜೆ ಸಲ್ಲಿಸಿ, ಅಂಗಡಿಯ ಎದುರು ರಂಗೋಲೆ ಹಾಕಿ ವ್ಯಾಪಾರ ಆರಂಭಿಸಿದರು.

ಸುಮಾರು 50 ದಿನಗಳಿಂದ  ಲಾಕ್‌ಡೌನ್‌ನಲ್ಲಿ ಸಿಲುಕಿ ಬಾಗಿಲು ತೆರೆಯಲಾರದೆ ಸಂಕಷ್ಟಕ್ಕೆ ಸಿಲುಕಿದ್ದರು. ವ್ಯಾಪಾರ, ವಹಿವಾಟು ಇಲ್ಲದೆ ಸಾವಿರಾರು ಮಂದಿ ಉದ್ಯೋ ಗವಿಲ್ಲದೆ ಮನೆಯಲ್ಲಿದ್ದರು. ಬಿಕೋ ಎನ್ನುತ್ತಿದ್ದ ವಿವಿಧ ರಸ್ತೆಗಳಲ್ಲಿ ಜನದಟ್ಟಣೆ ಕಂಡುಬಂತು.  ಅಂಗಡಿಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಬಾಕ್ಸ್‌ ನಿರ್ಮಿಸಲಾಗಿದ್ದು, ಅಂಗಡಿ ಒಳಗೆ ಬರುವವರಿಗೆ ಸ್ಯಾನಿಟೈಸರ್‌ ನೀಡಿದ ಬಳಿಕ ಒಳಗೆ ಬಿಡುವ ವ್ಯವಸ್ಥೆ ಮಾಡಲಾಗಿದೆ. ಬಿಕೋ ಎನ್ನುತ್ತಿದ್ದ ರಸ್ತೆಯಲ್ಲಿ ಬೈಕ್‌, ಕಾರುಗಳದ್ದೇ ಕಾರಾಬಾರಾಗಿತ್ತು. ಪಾರ್ಕಿಂಗ್‌ ಸ್ಥಳಗಳು ತುಂಬಿದ್ದವು. ಕಳೆದೆರಡು ತಿಂಗಳಿಂದ ಬಟ್ಟೆ, ಮೊಬೈಲ್‌, ಚಿನ್ನ ಮತ್ತಿತರ ವಸ್ತು ಖರೀದಿಸಲು ಮುಗಿಬಿದ್ದರು.

ರಿಪೇರಿಗೆ ಮುಗಿಬಿದ್ದ ಜನ: ಕಳೆದ 50 ದಿನಗಳಿಂದ ಲಾಕ್‌ ಡೌನ್‌ನಿಂದ  ಮನೆಯಲ್ಲೆ ಇದ್ದ ಜನತೆ, ಮಿಕ್ಸಿ‌, ಬೈಕ್‌, ಕಾರು, ಮೊಬೈಲ್‌ ಇತರೆ ವಸ್ತುಗಳನ್ನು ರಿಪೇರಿ ಮಾಡಿ ಸಲು ಮೆಕ್ಯಾನಿಕ್‌ ಶಾಪ್‌ಗ್ಳ ಮುಂದೆ ನಿಂತಿದ್ದರು.

ನಿರ್ಬಂಧ ತೆರವು : ವಾಹನಗಳ ಸಂಚಾರ ನಿರ್ಬಂಧಕ್ಕೆ ಅಳ ವಡಿಸಲಾಗಿದ್ದ ಬ್ಯಾರಿಕೇಡ್‌ ತೆರವುಗೊಳಿಸಲಾಗಿದ್ದು, ನಗರದ ಎಲ್ಲೆಡೆ ವಾಹನ ಸಂಚಾರ ಎಂದಿನಂತೆಯೇ ಇತ್ತು. ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯದಂತೆ ನಿರ್ಬಂಧವಿದ್ದರೂ ಹಲವು ಕಡೆಗಳಲ್ಲಿ  ಆಟೋಗಳು ಸಂಚರಿಸುತ್ತಿದ್ದವು. ಆಟೋ ನಿಲ್ದಾಣ ಗಳಲ್ಲಿ ಅಲ್ಲೊಂದು, ಇಲ್ಲೊಂದು ಆಟಗಳು ನಿಂತಿದ್ದವು. ನಗರ ದಲ್ಲಿ ಸಾರಿಗೆ ಸೌಲಭ್ಯ ಇಲ್ಲ ಎಂಬುದನ್ನು ಹೊರತುಪಡಿಸಿದರೆ, ಉಳಿದಂತೆ ಯಾವುದೇ ನಿರ್ಬಂಧ ಇರಲಿಲ್ಲ. ಬೆಳಗ್ಗೆ 7 ಗಂಟೆ ಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ ನೀಡಿರು ವುದರಿಂದ ಸಾರ್ವಜನಿಕರು ಯಾವುದೇ ಅಡ್ಡಿ ಆತಂಕವಿಲ್ಲದೆ ಓಡಾಡಿದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.