
ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ
Team Udayavani, May 29, 2023, 9:13 PM IST

ಮೈಸೂರು: ತಿ. ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಭೀಕರ ರಸ್ತೆ ಅಪಘಾತ ಸಂಬಂಧ ಇಂದು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ ಎಚ್ .ಸಿ.ಮಹಾದೇವಪ್ಪ ಅವರು ಇಂದು ಮೈಸೂರು ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಈ ಘಟನೆ ದುರದೃಷ್ಟಕರವಾದದ್ದು, ಹತ್ತು ಮಂದಿ ಮೃತಪಟ್ಟಿರುವುದು ಮನಸ್ಸಿಗೆ ನೋವಾಗಿದೆ.
ಈಗಾಗಲೇ ಸರ್ಕಾರ ಮೃತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ ಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.
ಇದನ್ನೂ ಓದಿ: 2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

Sirsi: ಇಂಡಿಯಾದ ಮೈತ್ರಿಗಾಗಿ ರಾಜ್ಯದ ಹಿತ ಬಲಿ ಕೊಡಲಾಗುತ್ತಿದೆ…: ಮಾಜಿ ಸ್ಪೀಕರ್

Karnataka Bandh: ಕಾವೇರಿಗಾಗಿ ಕಾಫಿನಾಡಲ್ಲಿ ತೀವ್ರಗೊಂಡ ಹೋರಾಟ.. ಅರೆಬೆತ್ತಲೆ ಉರುಳು ಸೇವೆ