ಮೈಸೂರು ಎಸ್ಪಿ ಕಚೇರಿಗೂ ಕೋವಿಡ್‌ 19 ಕಾಟ

Team Udayavani, Jun 23, 2020, 5:17 AM IST

mys office

ಮೈಸೂರು: ನಂಜನಗೂಡು ಗ್ರಾಮಾಂತರ ಪೇದೆಯೊಬ್ಬರಿಗೆ ಕೋವಿಡ್‌-19 ಖಚಿತವಾದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೈಸೂರು ಎಎಸ್ಪಿ ಸೇರಿದಂತೆ 22 ಮಂದಿ  ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನುಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲೆಯ ನಂಜನಗೂಡು ಗ್ರಾಮಾಂತರ ಠಾಣೆ ಪೇದೆಯೊಬ್ಬರಿಗೆ ಕೋವಿಡ್‌ 19 ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪೇದೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವ ರನ್ನು  ಕ್ವಾರಂಟೈನ್‌ ಮಾಡಲಾಗಿದೆ.

ಸೋಂಕಿತ ಪೇದೆಯ ದ್ವಿತೀಯ ಸಂಪರ್ಕಿತರೆಂದು ದಕ್ಷಿಣ ವಲಯ ಐಜಿಪಿ ವಿಪುಲ್‌ಕುಮಾರ್‌, ಎಸ್ಪಿ ರಿಷ್ಯಂತ್‌, ಗ್ರಾಮಾಂತರ ವಿಭಾಗ ಡಿವೈಎಸ್ಪಿ ಸುಮಿತ್‌ ಸೇರಿದಂತೆ ಸುಮಾರು 50 ಮಂದಿ ಪೊಲೀಸರನ್ನು  ಹೋಂ ಕ್ವಾರಂಟೈ ನ್‌ಗೆ ಒಳಪಡಿಸಲಾಗಿದೆ. ಜೊತೆಗೆ ಮೈಸೂರಿನ ಜಲಪುರಿ ಯಲ್ಲಿರುವ ಎಸ್ಪಿ ಕಚೇರಿಯಲ್ಲಿ ನಗರ ಪಾಲಿಕೆಯ ಸಿಬ್ಬಂದಿ ಸಂಪೂರ್ಣ ಸ್ಯಾನಿಟೈಸ್‌ ಮಾಡಿದ್ದು, ಸೋಂಕು ನಿವಾರಕ ದ್ರಾವಣ ಸಿಂಪಡಿಸಿದ್ದಾರೆ.

ಪೇದೆಗೆ ಸೋಂಕು ಹರಡಿದ್ದು ಹೇಗೆ: ತಿ.ನರಸೀಪುರ ಠಾಣೆಯಲ್ಲಿ 50 ಬುಲೆಟ್‌ ನಾಪತ್ತೆ ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದಲ್ಲಿದ್ದ ಬಹುತೇಕರನ್ನು ಕ್ವಾರಂಟೈನ್‌ ಮಾಡಲಾಗಿದೆ. ಆರೋಪಿ ಮುಖ್ಯಪೇದೆ ಕೃಷ್ಣೇಗೌಡ ಬಂಧನ ನಂತರ ಎಎಸ್ಪಿ ಸ್ನೇಹಾ ನೇತೃತ್ವದಲ್ಲಿ ಪ್ರಕರಣದ ತನಿಖೆ ಚುರುಕುಗೊಂಡಿತ್ತು. ಈ ಪ್ರಕರಣದಲ್ಲಿ ಸಹಾಯಕರಾಗಿ ನಂಜನಗೂಡು ಠಾಣೆಯ ಪೇದೆಯನ್ನು ನಿಯೋಜಿಸಲಾಗಿತ್ತು.

ನಂಜನಗೂಡಿನಲ್ಲಿದ್ದ ಪೇದೆಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ವೈದ್ಯರ ಬಳಿ ಚಿಕಿತ್ಸೆ ಪಡೆದು ಕೋವಿಡ್‌ 19 ಪರೀಕ್ಷೆಗೂ ಒಳಗಾಗಿದ್ದರು. ಪೇದೆಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭಾನುವಾರವೇ ಎಸ್ಪಿ ಕಚೇರಿಯನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿದೆ. ಅಲ್ಲದೆ, ಪೇದೆ  ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರು ಗುರುತಿಸಿ ಕ್ವಾರಂಟೈನ್‌ ಮಾಡಲಾಗಿದೆ. ಎಸ್ಪಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ.

ಮತ್ತೊಂದು ಹೊಸ ಪ್ರಕರಣ: ಜಿಲ್ಲೆಯಲ್ಲಿ ಸೋಮವಾರವೂ ಮತ್ತೂಂದು ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 170ಕ್ಕೇರಿದೆ. ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿರುವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು,  ಆತನನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜಿಲ್ಲೆಯಲ್ಲಿ 58 ಮಂದಿ ಸಕ್ರಿಯ ಸೋಂಕಿತರಿದ್ದು, 112 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 7,847 ಮಂದಿ  14 ದಿನಗಳ ಕ್ವಾರಂಟೈನ್‌ ಮುಗಿಸಿದ್ದು, 1,783 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಂ ಶಂಕರ್‌ ತಿಳಿಸಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆ ಸ್ಥಳಾಂತರ 
ನಂಜನಗೂಡು: ಕೋವಿಡ್‌ 19 ಸೋಂಕಿತ ಪೇದೆ ಓಡಾಡಿದ ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯನ್ನು (ಡಿವೈಎಸ್ಪಿ ಕಾರ್ಯಾಲಯ ಸೇರಿದಂತೆ) ತಾತ್ಕಾಲಿಕವಾಗಿ ಪಟ್ಟಣ ಠಾಣೆಗೆ ಸ್ಥಳಾಂತರಿಸಿ ಅಲ್ಲಿನ ಸುಮಾರು 50ಕ್ಕೂ ಹೆಚ್ಚು  ಪೇದೆಗಳನ್ನು ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಲಾಗಿದೆ. ತಾಲೂಕಿನಲ್ಲಿ 10ಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 100ಕ್ಕೂ ಹೆಚ್ಚು ಮಂದಿ ಬೇರೆ ರಾಜ್ಯಗಳಿಂದ ಬಂದವರನ್ನು ಹೋಂ ಕ್ವಾರೆಂಟೈನ್‌ಗೆ ಒಳಪಡಿಸಿದೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.