Nashik; ಗೋ ಮಾಂಸ ಸಾಗಿಸುತ್ತಿದ್ದ ಇಬ್ಬರ ಮೇಲೆ ಗುಂಪು ದಾಳಿ: ಓರ್ವ ಸಾವು
Team Udayavani, Jun 26, 2023, 12:51 PM IST
ನಾಸಿಕ್ : ಮಹಾರಾಷ್ಟ್ರದ ನಾಸಿಕ್ನಲ್ಲಿ ಕಾರಿನಲ್ಲಿ ದನದ ಮಾಂಸವನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಗುಂಪೊಂದು ಇಬ್ಬರನ್ನು ಅಮಾನುಷವಾಗಿ ಥಳಿಸಿದೆ ಎಂದು ಮಹಾರಾಷ್ಟ್ರ ಪೊಲೀಸರು ಸೋಮವಾರ ತಿಳಿಸಿದ್ದಾರೆ. ದಾಳಿಯ ಗಾಯಗಗೊಂಡ ಇಬ್ಬರಲ್ಲಿ ಒಬ್ಬ ಸಾವನ್ನಪ್ಪಿದ್ದಾನೆ.
ನಾಸಿರ್ ಶೇಖ್ ಮತ್ತು ಅಫಾನ್ ಅಬ್ದುಲ್ ಮಜೀದ್ ಅನ್ಸಾರಿ ಶನಿವಾರ (ಜೂನ್ 24) ಮುಂಬೈಗೆ ಪ್ರಯಾಣಿಸುತ್ತಿದ್ದರು. ಅವರು ಸಿನ್ನಾರ್ ಘೋಟಿ ಹೆದ್ದಾರಿಯಲ್ಲಿದ್ದಾಗ, ಅವರ ಕಾರನ್ನು ಜನರ ಗುಂಪು ತಪಾಸಣೆಗಾಗಿ ನಿಲ್ಲಿಸಿದೆ. ಈ ವೇಳೆ ದನದ ಮಾಂಸ ಪತ್ತೆಯಾಗಿದೆ ಎನ್ನಲಾಗಿದೆ. ನಂತರ ಸುಮಾರು 15 ಜನರು ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅಫಾನ್ ಅಬ್ದುಲ್ ಮಜೀದ್ ಅನ್ಸಾರಿ ಸಾವನ್ನಪ್ಪಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದೆ.
ಮಾರ್ಚ್ನಲ್ಲಿ ಇದೇ ರೀತಿಯ ಘಟನೆಯಲ್ಲಿ, ಬಿಹಾರದ ಸರನ್ ಜಿಲ್ಲೆಯಲ್ಲಿ 56 ವರ್ಷದ ವ್ಯಕ್ತಿಯನ್ನು ಗೋಮಾಂಸ ಸಾಗಿಸುತ್ತಿದ್ದನೆಂಬ ಶಂಕೆಯ ಮೇಲೆ ಹತ್ಯೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!