ತಾಂಡಾ ಅಭಿವೃದ್ಧಿಗೆ 100 ಕೋಟಿ ರೂ: ಸಿಎಂ

Team Udayavani, Feb 15, 2020, 3:07 AM IST

ದಾವಣಗೆರೆ: ರಾಜ್ಯ ಸರ್ಕಾರದ ಮುಂದಿನ ಬಜೆಟ್‌ನಲ್ಲಿ ತಾಂಡಾಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡ ಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಶುಕ್ರವಾರ ನ್ಯಾಮತಿ ತಾಲೂಕಿನ ಸೂರಗೊಂಡನ ಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್‌ ಮಹಾರಾಜರ 281ನೇ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಮಾ.5ರಂದು ಮಂಡಿಸಲಿರುವ ಬಜೆಟ್‌ನಲ್ಲಿ ತಾಂಡಾಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಲಾಗುವುದು.

ಮುಂದಿನ 3 ವರ್ಷದಲ್ಲಿ ಬಂಜಾರ ಸಮಾಜ ಬಾಂಧ ವರು ನೆಮ್ಮದಿ, ಗೌರವ, ಸ್ವಾಭಿಮಾನದಿಂದ ಬದುಕು ನಡೆಸುವ ರೀತಿ ಎಲ್ಲಾ ಸೌಲಭ್ಯ ಒದಗಿಸಲಾಗುವುದು ಎಂದರು. ಮುಂದಿನ ಎರಡು ವರ್ಷದಲ್ಲಿ ರಾಜ್ಯದ ಎಲ್ಲಾ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮ ಮಾಡಲು ತೀರ್ಮಾನಿಸಿದ್ದು, ಅದಕ್ಕಾಗಿ ಎಷ್ಟೇ ಹಣ ಖರ್ಚಾದರೂ ಚಿಂತಿಸುವುದಿಲ್ಲ. ಲಂಬಾಣಿ ಸಮಾಜದ ಭಾಷೆ, ಸಂಸ್ಕೃತಿ ವಿಶೇಷವಾಗಿದೆ.

ಭಾಷೆ, ಸಂಸ್ಕೃತಿ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಲಂಬಾಣಿ ಭಾಷಾ ಅಕಾಡೆಮಿ ಪ್ರಾರಂಭಿಸ ಲಾಗುವುದು ಎಂದು ತಿಳಿಸಿದರು. ರಾಜ್ಯದ ಎಲ್ಲಾ ತಾಂಡಾಗಳಲ್ಲಿ ಉದ್ಯೋಗ ಸೃಜನೆಗೆ ಕ್ರಮ ವಹಿಸಲಾಗುವುದು. ವಿಶೇಷ ಪ್ಯಾಕೇಜ್‌ ನೀಡ ಲಾಗುವುದು. ಲಂಬಾಣಿ ಕಲಾ ಮತ್ತು ಕೌಶಲ್ಯದ ಸಿದ್ಧ ಉಡುಪು ಘಟಕವನ್ನು ಕೊಪ್ಪಳದ ಬಹದ್ದೂರ್‌ ಬಂಡ, ಹುಮನಾಬಾದ್‌ ಸಮೀಪದ ಲಾಲ್‌ಗ‌ರಿಯಲ್ಲಿ ಬೃಹತ್‌ ಪ್ರಮಾಣದಲ್ಲಿ ಪ್ರಾರಂಭಿಸಲು ಕ್ರಮ ವಹಿಸಲಾಗುವುದು.

ವಿದೇಶಿ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು. ಹುಮನಾಬಾದ್‌ ಲಾಲ್‌ಗ‌ರಿಯಲ್ಲಿ 30, ಬಾಗಲ ಕೋಟೆಯಲ್ಲಿ ಗುದ್ದನಕೇರಿಯಲ್ಲಿ 6 ಎಕರೆ ಜಾಗವನ್ನು ತಾಂಡಾ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಈಗಾಗಲೇ ನೀಡಿದೆ ಎಂದರು. ಬಂಜಾರ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಅಭಿವೃದ್ಧಿಗೆ ಅಧ್ಯಾತ್ಮ ಗುರು ಸಂತ ಸೇವಾ ಲಾಲರು ಕಾರಣ.

ಅವರ ಜನ್ಮಸ್ಥಳ ಸೂರಗೊಂಡನಕೊಪ್ಪ ರಾಜ್ಯದಲ್ಲಿರುವುದು ಹೆಮ್ಮೆಯ ಸಂಗತಿ. ಪ್ರವಾಸೋ ದ್ಯಮ ಇಲಾಖೆ ಸಹಯೋಗದಲ್ಲಿ ಸೂರಗೊಂಡನ ಕೊಪ್ಪವನ್ನು ರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಸಂಪರ್ಕ ರಸ್ತೆ, ಉದ್ಯಾನವನ, ಕಾರಂಜಿ, ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದರು

ಕಾರ್ಯಕ್ರಮ ಬಳಿಯೇ ಬೆಂಕಿ ಅವಘಡ
ದಾವಣಗೆರೆ: ಸಿಎಂ ಯಡಿಯೂರಪ್ಪ ಶುಕ್ರವಾರ ಸಂಜೆ ಪಾಲ್ಗೊಂಡಿದ್ದ ಕಾರ್ಯಕ್ರಮದ ಸಮೀಪ ಬೆಂಕಿ ಅವಘಡ ಸಂಭವಿಸಿದೆ. ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್‌ ಮಹಾರಾಜರ ಜಯಂತ್ಯುತ್ಸವದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿದ್ದ ಕಾರ್ಯಕ್ರಮ ನಡೆಯುವ ಸ್ಥಳದ ಸಮೀಪದಲ್ಲೇ ಬಯಲಿನಲ್ಲಿ ಬೆಂಕಿ ಹತ್ತಿಕೊಂಡಿತು.

ಸಂತ ಸೇವಾಲಾಲ್‌ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಭಕ್ತರು ವಾಹನಗಳನ್ನು ನಿಲ್ಲಿಸಿದ್ದ ಪ್ರದೇಶದ ಪಕ್ಕದಲ್ಲೇ ಹತ್ತಿಕೊಂಡ ಬೆಂಕಿಯನ್ನು ತಕ್ಷಣ ಅಗ್ನಿಶಾಮಕ, ಪೋಲಿಸ್‌ ಹಾಗೂ ಸ್ಥಳೀಯರು ನಂದಿಸುವಲ್ಲಿ ಯಶಸ್ವಿಯಾದರು. ಕಿಡಿಗೇಡಿಗಳು ಬೀಡಿ, ಸಿಗರೇಟ್‌ ಸೇದಿ ಎಸೆದಿದ್ದರಿಂದ ಬೆಂಕಿ ಹತ್ತಿಕೊಂಡು ಮೆಕ್ಕೆಜೋಳ ಕಟಾವು ಮಾಡಿದ್ದ ಉಳಿದ ದಂಟುಗಳಿಗೆ ವ್ಯಾಪಿಸಿತು. ಗಾಳಿಯಿಂದಾಗಿ ಬೆಂಕಿ ಕ್ಷಣಾರ್ಧದಲ್ಲೇ ಒಂದು ಕಡೆಯಿಂದ ಮತ್ತೂಂದು ಕಡೆಗೆ ಹರಡಿತು. ಸಕಾಲಿಕ ಕ್ರಮದಿಂದಾಗಿ ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಲಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ನೂತನ ಅಧ್ಯಕ್ಷರಾಗಿ ಸುದರ್ಶನ ಎಂ. ಸೋಮವಾರ ಪದಗ್ರಹಣ ಮಾಡಲಿದ್ದಾರೆ.ಮೂಡುಬಿದಿರೆಯ ಬಿಲ್ಲವ ಸಮುದಾಯದ...

  • ಹೊಸದಿಲ್ಲಿ: ಅತ್ತ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿರುವಂತೆಯೇ ಇತ್ತ ಕಾಂಗ್ರೆಸ್‌ ಮತ್ತು ಬಿಜೆಪಿ ಪರಸ್ಪರ...

  • ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಶನಿವಾರ ಮುಂಜಾನೆ ಬೆಳ್ಳಿ ರಥೋತ್ಸವ ನಡೆಯಿತು. ಧರ್ಮಾಧಿಕಾರಿ...

  • ಜೈಪುರ: ಕಾಮಗಾರಿ ಆರಂಭಿಸಿದ ಮೂರು ಅಥವಾ ಮೂರೂವರೆ ವರ್ಷಗಳ‌ ಒಳಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ...

  • ಉಡುಪಿ: ಬರ್ಮಿಂಗ್‌ಹ್ಯಾಮ್‌ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಸರ್‌ ಡೇವಿಡ್‌ ಈಸ್ಟ್‌ವುಡ್‌ ಮತ್ತು ಮಣಿಪಾಲ ಮಾಹೆ ವಿಶ್ವವಿದ್ಯಾನಿಲಯದ ಕುಲಪತಿ ಡಾ| ಎಚ್‌....