ವರ್ಷ ಕಳೆದರೂ ಮರುಜೀವ ಪಡೆಯದ 104 ಸಹಾಯವಾಣಿ


Team Udayavani, Feb 1, 2023, 10:20 AM IST

tdy-6

ಬೆಂಗಳೂರು: ಕಟ್ಟ ಕಡೆಯ ವ್ಯಕ್ತಿಗೂ ಸುಲಭವಾಗಿ ಲಭ್ಯವಿದ್ದ ಆರೋಗ್ಯ ಸೇವಾ ಸೌಲಭ್ಯ “104- ಸಹಾಯವಾಣಿ’ ಸ್ಥಗಿತಗೊಂಡು ವರ್ಷ ಕಳೆದರೂ ಮರುಜೀವ ಪಡೆದಿಲ್ಲ.

ಹೌದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ 104-ಸಹಾಯವಾಣಿ ಸೇವೆಯನ್ನು ಮತ್ತೆ ಪ್ರಾರಂಭಿಸಲು ಆರೋಗ್ಯ ಇಲಾಖೆ ಟೆಂಡರ್‌ ಪ್ರಕ್ರಿಯೆ ನಡೆಸಿ ಕೆಲ ತಿಂಗಳುಗಳಿಂದ ಸರ್ಕಾರದ ಅನುಮತಿಗಾಗಿ ಕಾದು ಕುಳಿತಿದೆ.

2022ನೇ ಸಾಲಿನಲ್ಲಿ ಆರೋಗ್ಯ ಇಲಾಖೆಯು ಆಹ್ವಾನಿಸಿದ್ದ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಕೆಲ ಕಂಪನಿಗಳ ಪೈಕಿ ಅಶೋಕ್‌ ಬಿಲ್ಡ್‌ಕಾನ್‌ ಸಂಸ್ಥೆಗೆ ಟೆಂಡರ್‌ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಆದರೆ, ಟೆಂಡರ್‌ ಪ್ರಕ್ರಿಯೆ ಅಂತಿಮಗೊಳಿಸಲು ಆಗುತ್ತಿಲ್ಲ. ಕೆಲ ತಾಂತ್ರಿಕ ಕಾರಣಗಳಿಂದ ಸೇವೆ ಆರಂಭಿಸಲು ಇನ್ನೂ ಗ್ರೀಲ್‌ ಸಿಗ್ನಲ್‌ ಕೊಟ್ಟಿಲ್ಲ. ಒಂದು ವೇಳೆ ಸರ್ಕಾರವು ಈಯೋಜನೆಗೆ ಅನುಮತಿ ನೀಡದಿದ್ದರೆ ಈ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.

ಸರ್ಕಾರದಿಂದ ಅನುಮತಿ ಸಿಕ್ಕಿದರೆ 100 ಸಿಬ್ಬಂದಿಯನ್ನೊಳಗೊಂಡ 104-ಸಹಾಯವಾಣಿ ಕಚೇರಿಯನ್ನು ಬೆಂಗಳೂರಿನಲ್ಲಿ ಆರಂಭಿಸಲಾಗುವುದು. ಜನರ ಸ್ಪಂದನೆ ನೋಡಿಕೊಂಡು ಮುಂದಿನ ದಿನಗಳಲ್ಲಿ 200 ಸಿಬ್ಬಂದಿ ನೇಮಿಸುವ ಬಗ್ಗೆ ಚರ್ಚಿಸಲಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಯನ್ನು ಹೊರ ಗುತ್ತಿದೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

104 ಸಹಾಯವಾಣಿ ಸ್ಥಗಿತಗೊಂಡಿದ್ದೇಕೆ?: 2021ರಲ್ಲಿ ಹೈದ್ರಾಬಾದ್‌ ಮೂಲದ ಪೆರುಮಾಳ್‌ ಸ್ವಾಸ್ಥ್ಯ ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆಯು 104 ಸಹಾಯವಾಣಿ ಸೇವೆ ಒದಗಿಸಲು ಗುತ್ತಿಗೆ ಪಡೆದಿತ್ತು. ಹಂತ-ಹಂತವಾಗಿ ಸರ್ಕಾರವು ಹಣ ಬಿಡುಗಡೆ ಮಾಡಿದರೂ ಒಡಂಬಡಿಕೆಯಂತೆ ಸರ್ಕಾರ ಹಣ ನೀಡಿಲ್ಲ ಎಂದು ಆರೋಪಿಸಿ ಈ ಸಂಸ್ಥೆಯು ಆದರೆ 2022ರ ಫೆಬ್ರವರಿಯಲ್ಲಿ ಅರ್ಧಕ್ಕೆ ಸೇವೆ ಸ್ಥಗಿತಗೊಳಿಸಿತ್ತು.

ಹೀಗಾಗಿ ಹೊಸ ಕಂಪನಿಗೆ ಗುತ್ತಿಗೆ ನೀಡಲು ಟೆಂಡರ್‌ ಆಹ್ವಾನಿಸಲಾಗಿತ್ತು. ಖಾರ್ವಿ ಎಂಬ ಸಂಸ್ಥೆ ಬಿಡ್‌ ಮಾಡಿ ಟೆಂಡರ್‌ ಪಡೆಯಲು ಮುಂದಾಗಿತ್ತಾದರೂ ಅಂತಿಮ ಹಂತದಲ್ಲಿ ಈಸಂಸ್ಥೆಯು ಬ್ಲ್ಯಾಕ್‌ ಲೀಸ್ಟ್‌ನಲ್ಲಿದ್ದ ಹಿನ್ನೆಲೆಯಲ್ಲಿ ಇದು ಸಾಧ್ಯವಾಗಿರಲಿಲ್ಲ.

ಆರೋಗ್ಯ ಸೇವಾ ಮಾಹಿತಿ ಒದಗಿಸಲು 2013ರ ಜೂ.19ರಂದುದೇಶದಲ್ಲೇ ಮೊದಲ ಬಾರಿಗೆ “ಆರೋಗ್ಯವಾಣಿ 104′ ಆರಂಭಿಸಲಾಗಿತ್ತು. ದಿನದ 24 ಗಂಟೆಯೂ ಸೇವೆ ನೀಡುತ್ತಿದ್ದ 104 ಸಹಾಯವಾಣಿಯು ಬಡವರ ಸಂಜೀವಿನಿಯಾಗಿತ್ತು. ಆಸ್ಪತ್ರೆಗಳ ಸೌಲಭ್ಯಗಳಿಂದ ವಂಚಿತರಾಗಿರುವ ಕರ್ನಾಟಕದ ಗ್ರಾಮೀಣ ಭಾಗದ ಜನರಿಗೆ 104 ಆರೋಗ್ಯ ಸಹಾಯವಾಣಿಯ ಮೂಲಕ ತಜ್ಞ ವೈದ್ಯರ ಸಲಹೆ ಪಡೆಯಲು ನೆರವಾಗುತ್ತಿತ್ತು.

 ಪ್ರತಿನಿತ್ಯ 20 ಸಾವಿರಕ್ಕೂ ಅಧಿಕ ಕರೆಗಳು ಬರುತ್ತಿದ್ದವು.

 ಸಹಾಯವಾಣಿ ಸ್ಥಗಿತಗೊಂಡ ಬಳಿಕ ಕೆಲಸ ಕಳೆದುಕೊಂಡಿದ್ದ 350ಕ್ಕೂ ಹೆಚ್ಚಿನ ಸಿಬ್ಬಂದಿ.

 40 ಲಕ್ಷ ರೂ. ಬಿಲ್‌ ಅನ್ನು ಬಿಎಸ್‌ಎನ್‌ಎಲ್‌ ಬಳಿ ಬಾಕಿ ಉಳಿಸಿಕೊಂಡಿದ್ದಕ್ಕೆ ಸಹಾಯವಾಣಿ ಸಂಪರ್ಕ ಕಡಿತ.

 ಸಹಾಯವಾಣಿಯಿಂದ ವೈದ್ಯಕೀಯವಾಗಿ ಮೌಲ್ಯೀಕರಿಸಿದ ಸಲಹೆ, ಸರ್ಕಾರಗಳು ಪ್ರಾರಂಭಿಸಿರುವ ಆರೋಗ್ಯ ಸಂಬಂಧಿತ ಯೋಜನೆಗಳ ಮಾಹಿತಿ ಪಡೆಯಲೂ ಅವಕಾಶ.

104 ಸಹಾಯವಾಣಿ ಸೇವೆಯಿಂದ ಲಕ್ಷಾಂತರ ಮಂದಿ ಬಡ ಜನರಿಗೆ ಅನುಕೂಲವಾಗಿದೆ. ಟೆಂಡರ್‌ ಪ್ರಕ್ರಿಯೆ ಅಂತಿಮಗೊಳ್ಳದಿದ್ದ ಕಾರಣ ಕಳೆದ 1 ವರ್ಷಗಳಿಂದ ಈ ಸೇವೆಯು ಸ್ಥಗಿತಗೊಂಡಿತ್ತು. – ಡಿ.ರಂದೀಪ್‌, ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

 

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

ಕನ್ನಡ ವಿಷಯ ಹೊರತುಪಡಿಸಿ ಪರೀಕ್ಷೆ ಬರೆಯಲು ಅನುಮತಿ

ಕನ್ನಡ ವಿಷಯ ಹೊರತುಪಡಿಸಿ ಪರೀಕ್ಷೆ ಬರೆಯಲು ಅನುಮತಿ

ನೀತಿ ಸಂಹಿತೆ ಉಲ್ಲಂಘನೆ: ಸಿದ್ದು, ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ