ಹಾವೇರಿ ಜಿಲ್ಲೆಯಲ್ಲಿಂದು 28 ಮಂದಿಗೆ ಕೋವಿಡ್ ಸೋಂಕು ಪತ್ತೆ
Team Udayavani, Jul 4, 2020, 7:05 PM IST
ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು ಶನಿವಾರ ಒಂದೇ ದಿನ 28 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಇವರಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆ, ನಾಲ್ಕು ವರ್ಷದ ಬಾಲಕ ಹಾಗೂ ಪೊಲೀಸ್ ಕಾನ್ಸಟೇಬಲ್ ಸಹ ಸೇರಿದ್ದಾರೆ.
ಶಿಗ್ಗಾವಿ ತಾಲೂಕಿನಲ್ಲಿ 10, ಹಾನಗಲ್ಲ ತಾಲೂಕಿನಲ್ಲಿ 11, ರಾಣಿಬೆನ್ನೂರು ತಾಲೂಕಿನಲ್ಲಿ ನಾಲ್ಕು, ಹಾವೇರಿ ತಾಲೂಕಿನಲ್ಲಿ ಎರಡು, ಹಿರೇಕೆರೂರು ತಾಲೂಕಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ 151 ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
37 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು 112 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.