ಅ.1ರಿಂದ ಆನ್ಲೈನ್ ಗೇಮ್ಗೆ ಶೇ.28 GST
Team Udayavani, Aug 3, 2023, 12:17 AM IST
ಹೊಸದಿಲ್ಲಿ: ಆನ್ಲೈನ್ ಗೇಮಿಂಗ್, ಕ್ಯಾಸಿನೋಗೆ ವಿಧಿಸಲಾಗಿರುವ ಶೇ.28 ಜಿಎಸ್ಟಿ ಅ.1ರಿಂದ ಜಾರಿಯಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದಿಲ್ಲಿಯಲ್ಲಿ ಜಿಎಸ್ಟಿ ಮಂಡಳಿಯ 51ನೇ ಸಭೆಯ ಬಳಿಕ ಮಾತನಾಡಿದ ಅವರು, ನಿಯಮ ಜಾರಿಗೊಂಡು 6 ತಿಂಗಳ ಬಳಿಕ ಅದನ್ನು ಪುನರ್ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಕ್ಯಾಸಿನೋಗೆ ಕೂಡ ಆರಂಭದಲ್ಲೇ ಶೇ.28 ಜಿಎಸ್ಟಿ ವಿಧಿಸುವ ಬಗ್ಗೆ ಹಿಂದಿನ ಸಭೆಯಲ್ಲೇ ತೀರ್ಮಾನಿಸಲಾಗಿತ್ತು. ಅದರಲ್ಲಿ ಬದಲಾವಣೆ ಇಲ್ಲ ಎಂದರು.
ಗೇಮಿಂಗ್ ಕ್ಷೇತ್ರಕ್ಕೆ ತೆರಿಗೆ ವಿಧಿಸಿರುವುದನ್ನು ಮತ್ತೂಮ್ಮೆ ಪರಿಶೀಲಿಸಬೇಕು ಎಂದು ದಿಲ್ಲಿ, ಗೋವಾಗಳ ವಿತ್ತ ಸಚಿವರು ಆಗ್ರಹಿಸಿದರು. ಕರ್ನಾಟಕ, ಉತ್ತರ ಪ್ರದೇಶ ಸಹಿತ ಕೆಲವು ರಾಜ್ಯಗಳ ವಿತ್ತ ಸಚಿವರು ಮತ್ತು ಆಯಾ ರಾಜ್ಯಗಳ ಪ್ರತಿನಿಧಿಗಳು ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಕೂಡಲೇ ಜಾರಿ ಮಾಡಲು ಆಗ್ರಹಿಸಿದರು. ಸಿಜಿಎಸ್ಟಿ ಸಂಬಂಧಿಸಿದ ತಿದ್ದುಪಡಿ ಮಸೂದೆಯನ್ನು ಹಾಲಿ ಅಧಿವೇಶನದಲ್ಲೇ ಮಂಡಿಸಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ