Karnataka: ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.3.75 ಹೆಚ್ಚಳ
Team Udayavani, Oct 21, 2023, 8:19 PM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದಸರಾ ಉಡುಗೊರೆ ನೀಡಿದೆ. ನೌಕರರ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿ (ಶೇ.46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.