ಫೆ. 10 ರಿಂದ ಕಲಬುರಗಿಯಲ್ಲಿ ಭಾರತೀಯ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರ 41ನೇ ಸಮ್ಮೇಳನ
Team Udayavani, Feb 8, 2023, 12:25 PM IST
ಕಲಬುರಗಿ: ಭಾರತೀಯ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರ 41 ನೇ ರಾಜ್ಯ ಸಮ್ಮೇಳನ ಇದೇ ಫೆ. 10 ರಿಂದ ಮೂರು ದಿನಗಳ ಕಾಲ ಇಲ್ಲಿನ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಭಾರತದ ಶಸ್ತ್ರಚಿಕಿತ್ಸಕರ ಸಂಘದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ 1500 ಕ್ಕೂ ಹೆಚ್ಚು ಶಸ್ತ್ರಚಿಕಿತ್ಸಾ ತಜ್ಞ ವೈದ್ಯರು ಪಾಲ್ಗೊಳ್ಳಲಿದ್ದಾರೆ ಎಂದು 41ನೇ ಸಮ್ಮೇಳನದ ಸಂಘಟನಾ ಅಧ್ಯಕ್ಷರು ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ಎಸ್. ಆರ್. ಹರವಾಳ ಹಾಗೂ ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ. ರಾಜಶೇಖರ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಭಾರತೀಯ ಶಸ್ತ್ರಚಿಕಿತ್ಸಾ ವೈದ್ಯರ ಕಲಬುರಗಿ ಜಿಲ್ಲಾ ಘಟಕದ ಕಲಬುರಗಿ ನಗರ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜ್ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿದ್ದು, ಸಮ್ಮೇಳನದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅದರಲ್ಲೂ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಆಗಿರುವ ತಾಂತ್ರಿಕ ಬೆಳವಣಿಗೆ ಹಾಗೂ ವೈದ್ಯಕೀಯ ಸೇವೆ ಗುಣಮಟ್ಟತೆ ಕುರಿತಾಗಿ ಬೆಳಕು ಚೆಲ್ಲಲಿದೆ ಎಂದು ವಿವರಣೆ ನೀಡಿದರು.
ಕೊವಿಡ್ ಹಿನ್ನೆಲೆ ಕಳೆದ ಮೂರು ವರ್ಷಗಳಿಂದ ಸಮ್ಮೇಳನ ಆಯೋಜಿರಲಿಲ್ಲ. ಈಗ ಸಮ್ಮೇಳನ ಆಯೋಜಿಸಿದ್ದರಿಂದ ಸಮ್ಮೇಳನಕ್ಕೆ ವಿದೇಶಗಳಿಂದಲೂ ತಜ್ಞ ವೈದ್ಯರು ಪಾಲ್ಗೊಳ್ಳುತ್ತಿದ್ದು, ಎಲ್ಲ ಸಿದ್ದತೆಗಳು ಭರದಿಂದ ಸಾಗಿವೆ ಎಂದು ಹೇಳಿದರು.
ಅಖಿಲ ಭಾರತ ಶಸ್ತ್ರಚಿಕಿತ್ಸಾ ವೈದ್ಯರ ಸಂಘದ ಅಧ್ಯಕ್ಷ ಡಾ. ಸಂಜಯಕುಮಾರ ಜೈನ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಂಸದ ಡಾ. ಉಮೇಶ್ ಜಾಧವ, ಎಚ್ಕೆಇ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ, ಭಾರತೀಯ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರ ಸಂಘದ ಹಿಂದಿನ ಅಧ್ಯಕ್ಷ ಡಾ. ಜಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಸ್ತ್ರಚಿಕಿತ್ಸಾ ವೈದ್ಯಕೀಯ ವಿಭಾಗದಲ್ಲಿ ಬದಲಾವಣೆ ಹಾಗೂ ಆತ್ಮವಿಶ್ವಾಸದೆಡೆಗೆ ಶಸ್ತ್ರಚಿಕಿತ್ಸಾ ವೈದ್ಯರು ಎಂಬ ವಿಷಯದಲ್ಲಿ 300 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಮಂಡನೆಯಾಗಲಿವೆ ಎಂದು ಡಾ.ಎಸ್. ಆರ್. ಹರವಾಳ ಹಾಗೂ ಡಾ. ರಾಜಶೇಖರ ಪಾಟೀಲ್ ತಿಳಿಸಿದರು.
ಸಮ್ಮೇಳನದ ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಡಾ. ಸುರೇಶ್ ಪಾಟೀಲ್, ಡೀನ್ ಎಸ್. ಎನ್. ಪಾಟೀಲ್, ಡಾ.ಶಾಂತಾ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
MUST WATCH
ಹೊಸ ಸೇರ್ಪಡೆ
ಯಾವುದೇ ಪಕ್ಷದ ಬಗ್ಗೆ ಸಹಾನುಭೂತಿ ಹೊಂದುವುದು ಮುಖ್ಯ ಅಲ್ಲ: ಅಖಿಲೇಶ್
ವನಿತಾ ಪ್ರೀಮಿಯರ್ ಲೀಗ್ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್ ಪಾಲು
ಜೆಡಿಎಸ್ 25 ಸ್ಥಾನ ಗೆಲ್ಲಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಡಾ.ಯತೀಂದ್ರ
ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್
ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ