Drugs: 44 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!
Team Udayavani, Aug 30, 2023, 12:47 AM IST
ತಿರುವನಂತಪುರ: ಕೊಕೇನ್, ಹೆರಾಯಿನ್ ಸೇರಿದಂತೆ 44 ಕೋಟಿ ರೂ. ಮೌಲ್ಯದ ಮಾದಕವಸ್ತು ಕಳ್ಳಸಾಗಣೆಯ ಸಂಚನ್ನು ಕೇರಳದ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬಂದಿ ವಿಫಲಗೊಳಿಸಿದ್ದಾರೆ. ಈ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಆತನಿಂದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ತಿಳಿಸಿದೆ.
ಡಿಆರ್ಐನ ಕಲ್ಲಿಕೋಟೆ ಘಟಕದ ಕೊಚಿನ್ ವಲಯ ಘಟಕದ ಅಧಿಕಾರಿಗಳು ಉತ್ತರ ಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನನ್ನು ತಡೆ ಹಿಡಿದು, ಆತನಿಂದ 3.5 ಕೆ.ಜಿ. ಕೊಕೇನ್, 1.3 ಕೆ.ಜಿ. ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ 44 ಕೋಟಿ ರೂ.ಗಳಾಗಿದೆ. ಕೀನ್ಯಾದಿಂದ ಬಂದು ಕಲ್ಲಿಕೋಟೆಯಲ್ಲಿ 4.8 ಕೆ.ಜಿ. ಮಾದಕ ವಸ್ತುವಿನೊಂದಿಗೆ ಸೋಮವಾರ ಸಿಕ್ಕಿಬಿದ್ದಿದ್ದ ವ್ಯಕ್ತಿ ನೀಡಿದ್ದ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ