ದಿಲ್ಲಿ ಸೋಂಕಿತರ ಸಂಖ್ಯೆ 5.5 ಲಕ್ಷಕ್ಕೇರಲ್ಲ: ಗೃಹ ಸಚಿವ
ಸೋಂಕು ಸಾಮುದಾಯಿಕ ಮಟ್ಟದಲ್ಲಿ ಹರಡಿಲ್ಲ: ಸಚಿವ ಅಮಿತ್ ಶಾ
Team Udayavani, Jun 29, 2020, 9:00 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಇನ್ನೂ ಕೋವಿಡ್ ಸೋಂಕು ಸಾಮುದಾಯಿಕವಾಗಿ ವ್ಯಾಪಿಸಿಲ್ಲ. ಅಷ್ಟೇ ಅಲ್ಲ, ಜುಲೈ ಅಂತ್ಯದ ವೇಳೆಗೆ ಇಲ್ಲಿ 5.5 ಲಕ್ಷ ಪ್ರಕರಣಗಳು ಪತ್ತೆಯಾಗುವುದೂ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸೋಂಕಿತರ ಸಂಖ್ಯೆ 5.5 ಲಕ್ಷಕ್ಕೇರಲಿದೆ ಎನ್ನುವ ಮೂಲಕ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಜನರಲ್ಲಿ ಭೀತಿ ಉಂಟುಮಾಡುವ ಕೆಲಸ ಮಾಡಿದ್ದಾರೆ ಎಂದೂ ಶಾ ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಜುಲೈ ಅಂತ್ಯದ ವೇಳೆಗೆ ಸೋಂಕಿತರ ಸಂಖ್ಯೆ ಹೆಚ್ಚಾಗಿ, ಆಸ್ಪತ್ರೆಗಳಲ್ಲಿ ಹಾಸಿಗೆಗಳಿಗೆ ಕೊರತೆ ಉಂಟಾಗುತ್ತದೆ, ಜಾಗವೇ ಇರುವುದಿಲ್ಲ ಎಂದು ಸಿಸೋಡಿಯಾ ಹೇಳಿದ್ದರಿಂದ, ದೆಹಲಿ ಜನತೆ ಭೀತಿಗೊಳಗಾಗಿ ಬೇರೆಡೆಗೆ ವಲಸೆ ಹೋಗಲಾರಂಭಿಸಿದ್ದಾರೆ ಎಂದು ಹೇಳಿದ್ದಾರೆ. ಜತೆಗೆ, ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿರುವ ಕಾರಣ, ಜುಲೈ ಅಂತ್ಯದಲ್ಲಿ ಸೋಂಕಿತರ ಸಂಖ್ಯೆ 5.5 ಲಕ್ಷಕ್ಕೇರುವ ಸಾಧ್ಯತೆಯಿಲ್ಲ ಎಂದಿದ್ದಾರೆ.
ಕಂಟೈನ್ಮೆಂಟ್ ವಲಯ 417: ದೆಹಲಿಯಲ್ಲಿ ರವಿವಾರ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 417ಕ್ಕೇರಿದೆ. ಕೇಂದ್ರದ ಸೂಚನೆ ಮೇರೆಗೆ ಇಂಥ ವಲಯಗಳನ್ನು ಮರು ಗುರುತಿಸುವ ಪ್ರಕ್ರಿಯೆ ಆರಂಭವಾದ ಕಾರಣ, ಕಂಟೈನ್ಮೆಂಟ್ ಪ್ರದೇಶಗಳ ಸಂಖ್ಯೆ 280ರಿಂದ 417ಕ್ಕೇರಿದೆ. ಈವರೆಗೆ ಇಲ್ಲಿ 2.45 ಲಕ್ಷ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು