SIMI ವಿರುದ್ಧ 5 ವರ್ಷ ನಿಷೇಧ ವಿಸ್ತರಣೆ
Team Udayavani, Jan 30, 2024, 12:21 AM IST
ಹೊಸದಿಲ್ಲಿ: ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಮೇಲೆ ವಿಧಿಸಲಾಗಿರುವ ನಿಷೇಧವನ್ನು ಇನ್ನೂ 5 ವರ್ಷಗಳ ಕಾಲ ವಿಸ್ತರಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹನೆ ಹೊಂದಲಾಗುತ್ತದೆ ಎನ್ನುವುದಕ್ಕೆ ಇದು ಉದಾಹರಣೆ ಎಂದು ಪ್ರತಿಪಾದಿಸಿದ್ದಾರೆ. 2001ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ಮೊದಲ ಬಾರಿಗೆ ಅದನ್ನು ನಿಷೇಧಿಸಿ, ಆದೇಶ ಹೊರಡಿಸಲಾಗಿತ್ತು.